ಅಥಣಿಗಾಗಿ ಲಕ್ಷ್ಮಣ ಸವದಿ ಫೈಟ್; ಕುಮಟಳ್ಳಿ ಸೇರಿದಂತೆ ಬಿಜೆಪಿ ಸೇರಿದ ಎಲ್ಲ 17 ಶಾಸಕರಿಗೂ ಟಿಕೆಟ್: ರಮೇಶ್ ಜಾರಕಿಹೊಳಿ ಬಾಂಬ್
ಅಥಣಿಯ ಮಹೇಶ ಕುಮಟಳ್ಳಿ, ಕಾಗವಾಡದ ಶ್ರೀಮಂತ ಪಾಟೀಲ ಸೇರಿದಂತೆ 2019ರಲ್ಲಿ ಬಿಜೆಪಿಗೆ ಸೇರ್ಪಡೆಗೊಂಡ ಎಲ್ಲ 17 ಶಾಸಕರಿಗೆ ಬಿಜೆಪಿ ಟಿಕೆಟ್ ಸಿಗಲಿದೆ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಬೆಳಗಾವಿ: ಅಥಣಿಯ ಮಹೇಶ ಕುಮಟಳ್ಳಿ, ಕಾಗವಾಡದ ಶ್ರೀಮಂತ ಪಾಟೀಲ ಸೇರಿದಂತೆ 2019ರಲ್ಲಿ ಬಿಜೆಪಿಗೆ ಸೇರ್ಪಡೆಗೊಂಡ ಎಲ್ಲ 17 ಶಾಸಕರಿಗೆ ಬಿಜೆಪಿ ಟಿಕೆಟ್ ಸಿಗಲಿದೆ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಶಿನ್ನೋಳಿ ಗ್ರಾಮದ ಕಾರ್ಖಾನೆ ಕಟ್ಟಡದಲ್ಲಿ ಜಾರಕಿಹೊಳಿ ತಮ್ಮ ಅನುಯಾಯಿಗಳ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಕೆಲವು ಮಾಹಿತಿ ಬಹಿರಂಗ ಪಡಿಸುವುದು ಕಷ್ಟ, ಮಹೇಶ್ ಕುಮಟಳ್ಳಿ ಅವರಿಗೆ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದು ತಿಳಿಸಿದರು.
ಸೋಲು-ಗೆಲುವು ದೇವರ ಆಶಯವಾಗಿದ್ದು, ಲಕ್ಷ್ಮಣ ಸವದಿ ಯಾಕೆ ಹತಾಶರಾಗುತ್ತಿದ್ದಾರೆ ಎಂಬುದು ಗೊತ್ತಿಲ್ಲ, ಪಕ್ಷದಲ್ಲಿ ವರಿಷ್ಠರಿದ್ದಾರೆ, ಅವರೇ ತೀರ್ಮಾನ ಮಾಡುತ್ತಾರೆ, ಸವದಿ ಅವರಿಗೆ ಸುಮ್ಮನಿರಲು ಸೂಚಿಸುತ್ತೇನೆ ಎಂದು ಜಾರಕಿಹೊಳಿ ಹೇಳಿದರು.
ಅಥಣಿ ಕ್ಷೇತ್ರದ ಟಿಕೆಟ್ ವಿಚಾರವಾಗಿ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಮಾಜಿ ಸಚಿವ ರಮೇಶ ಜಾರಕಿಹೊಳಿ ನಡುವೆ ಮಾತಿನ ಪರಸ್ಪರ ವಾಗ್ದಾಳಿ ನಡೆಯುತ್ತಿದೆ. 2020ರಲ್ಲಿ ಜಾರಕಿಹೊಳಿ ಜೊತೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಅಥಣಿ ಶಾಸಕ ಮಹೇಶ ಕುಮಟಳ್ಳಿ ಅವರಿಗೆ ಜಾರಕಿಹೊಳಿ ಬೆಂಬಲ ನೀಡಿದ್ದಾರೆ. ಆದರೆ, 2018ರ ಚುನಾವಣೆಯಲ್ಲಿ ಕುಮಟಳ್ಳಿಯಿಂದ ಸ್ಪರ್ಧಿಸಿ ಸೋತಿದ್ದ ಎಂಎಲ್ಸಿ ಲಕ್ಷ್ಮಣ ಸವದಿ ಟಿಕೆಟ್ ಗಾಗಿ ಉನ್ನತ ಮಟ್ಟದಲ್ಲಿ ಲಾಬಿ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


