ಬಿಜೆಪಿ 189 ಅಭ್ಯರ್ಥಿಗಳ ಮೊದಲ ಪಟ್ಟಿ: ಪದ್ಮನಾಭನಗರ, ಕನಕಪುರದಿಂದ ಆರ್ ಅಶೋಕ್, ಸಿದ್ದರಾಮಯ್ಯ ವಿರುದ್ಧ ವರುಣಾದಿಂದ ಸೋಮಣ್ಣ ಕಣಕ್ಕೆ
ರಾಜ್ಯ ಚುನಾವಣೆಗೆ ಉಳಿದೆಲ್ಲಾ ಪಕ್ಷಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದ್ದರೂ ಗಜಪ್ರಸವದಂತಾಗಿದ್ದ ಬಿಜೆಪಿಯ ಮೊದಲ ಪಟ್ಟಿ ಕೊನೆಗೂ ಇಂದು ಏ.11 ರಂದು ಬಿಡುಗಡೆಯಾಗಿದೆ.

ನವದೆಹಲಿ: ರಾಜ್ಯ ಚುನಾವಣೆಗೆ ಉಳಿದೆಲ್ಲಾ ಪಕ್ಷಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದ್ದರೂ ಗಜಪ್ರಸವದಂತಾಗಿದ್ದ ಬಿಜೆಪಿಯ ಮೊದಲ ಪಟ್ಟಿ ಕೊನೆಗೂ ಇಂದು ಏ.11 ರಂದು ಬಿಡುಗಡೆಯಾಗಿದೆ.
ರಾತ್ರಿ 9 ಗಂಟೆ ವೇಳೆಗೆ ಕೇಂದ್ರ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯದ 189 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಿದರು.
ರಾಜ್ಯದಲ್ಲಿ ಹೊಸ ತಲೆಮಾರಿನ ನಾಯಕತ್ವ ಬಂದಿದೆ ಎಂದು ಹೇಳುವ ಮೂಲಕ ಹೊಸ ಅಭ್ಯರ್ಥಿಗಳಿಗೆ ಆದ್ಯತೆ ನೀಡಿರುವ ಸುಳಿವನ್ನು ಸುದ್ದಿಗೋಷ್ಠಿಯಲ್ಲಿ ಧರ್ಮೇಂದ್ರ ಸಿಂಗ್ ನೀಡಿದರು.
ಟಿಕೆಟ್ ಘೋಷಣೆಗೂ ಮುನ್ನ ಕೆಎಸ್ ಈಶ್ವರಪ್ಪ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ ಬೆಳವಣಿಗೆಗಳು ರಾಜ್ಯದಲ್ಲಿ ಹಲವು ಮಂದಿ ಹಾಲಿ ಶಾಸಕರಿಗೆ ಹಾಗೂ ಹಿರಿಯ ನಾಯಕರಿಗೆ ಈ ಬಾರಿ ಖೋಕ್ ನೀಡಲಾಗುತ್ತದೆ ಎಂಬ ಸುಳಿವು ನೀಡಿತ್ತು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಈ ಬಾರಿ 52 ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ, 9 ವೈದ್ಯರಿಗೆ, ನಿವೃತ್ತ ಐಎಸ್ಎಸ್, ಐಪಿಎಸ್ ಗಳಿಗೆ ಟಿಕೆಟ್ ನೀಡಲಾಗಿದೆ. 32 ಒಬಿಸಿ ಗಳಿಗೆ ಟಿಕೆಟ್ ನೀಡಲಾಗಿದೆ ಎಂದು ಹೇಳಿದರು. ಇತ್ತೀಚೆಗಷ್ಟೇ ಆಮ್ ಆದ್ಮಿ ಪಕ್ಷ ತೊರೆದು ಬಿಜೆಪಿ ಸೇರಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಗೆ ಟಿಕೆಟ್ ಘೋಷಿಸಲಾಗಿದೆ.
BJP releases a list of 189 candidates for the upcoming #KarnatakaElections2023 pic.twitter.com/Pt0AZTaIBE
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


