ದೆಹಲಿಯಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಭೇಟಿ ಮಾಡಿದ ಜಗದೀಶ್ ಶೆಟ್ಟರ್
ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮನ್ನು ಕಣಕ್ಕಿಳಿಸದಿರುವ ಪಕ್ಷದ ನಿರ್ಧಾರದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಅವರು ಬುಧವಾರ...

ನವದೆಹಲಿ: ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮನ್ನು ಕಣಕ್ಕಿಳಿಸದಿರುವ ಪಕ್ಷದ ನಿರ್ಧಾರದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಅವರು ಬುಧವಾರ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದಾರೆ.
ಟಿಕೆಟ್ ಕೈತಪ್ಪುವ ಸಾಧ್ಯತೆ ಹಿನ್ನೆಲೆಯಲ್ಲಿ ಜಗದೀಶ್ ಶೆಟ್ಟರ್ ಅವರು ಇಂದು ದಿಢೀರ್ ದೆಹಲಿಗೆ ತೆರಳಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರೊಂದಿಗೆ ಜೆಪಿ ನಡ್ಡಾ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದಾರೆ.
ನಡ್ಡಾ ಭೇಟಿ ಬಳಿಕ ಮಾತನಾಡಿದ ಶೆಟ್ಟರ್, ಜೆಪಿ ನಡ್ಡಾ ಅವರೊಂದಿಗೆ ನನ್ನ ಭಾವನೆ ಹಂಚಿಕೊಂಡಿದ್ದೇನೆ. ಅವರು ಎಲ್ಲವನ್ನೂ ಆಲಿಸಿದ್ದಾರೆ. ಕಳೆದ ಚುನವಾಣೆಯಲ್ಲಿ ಸ್ಪರ್ಧಿಸಿದ್ದು, ಈ ಬಾರಿಯೂ ಚುನಾವಣೆಗೆ ಸ್ಪರ್ಧಿಸಬೇಕು ಎಂಬುದು ನನ್ನ ಆಶಯ ಎಂದಿದ್ದಾರೆ.
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ನ ಹಾಲಿ ಶಾಸಕರಾಗಿರುವ ಶೆಟ್ಟರ್ ಅವರಿಗೆ ನಿನ್ನೆ ಕರೆ ಮಾಡಿದ್ದ ಬಿಜೆಪಿ ವರಿಷ್ಠರು, ಚುನಾವಣೆಗೆ ನೀವು ಸ್ಪರ್ಧಿಸಬೇಡಿ. ಬೇರೆಯವರಿಗೆ ಅವಕಾಶ ನೀಡುವಂತೆ ಸಲಹೆ ನೀಡಿದ್ದರು. ಇದಕ್ಕೆ ಒಪ್ಪದ ಶೆಟ್ಟರ್ ಅವರು, ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡುವಂತೆ ಮನವಿ ಮಾಡಿದ್ದರು.
ಮಂಗಳವಾರ ಬಿಜೆಪಿ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಶೆಟ್ಟರ್ ಅವರಿಗೆ ಟಿಕೆಟ್ ಘೋಷಿಸಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


