ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ರಾಜಿನಾಮೆ!
ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್ ಸಿಗದ ಕಾರಣ ತೀವ್ರ ಅಸಮಾಧಾನಗೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರು ಇಂದು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ.

ಬೆಂಗಳೂರು: ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್ ಸಿಗದ ಕಾರಣ ತೀವ್ರ ಅಸಮಾಧಾನಗೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರು ಇಂದು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ.
ಟಿಕೆಟ್ ಸಿಗದ ಹಿನ್ನಲೆಯಲ್ಲಿ ಪಕ್ಷ ಬಿಡುವ ಸುಳಿವು ನೀಡಿದ್ದ ಸವದಿ ಅವರು ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ಇದಾದ ಬಳಿಕ ಇದೀಗ ಲಕ್ಷ್ಮಣ್ ಸವದಿ ಅವರು ಬಿಜೆಪಿ ಪ್ರಾಥಮಿಕ ಸದಸ್ಯತ್ವ ಹಾಗೂ ವಿವಿಧ ಹುದ್ದೆಗಳಿಗೂ ರಾಜಿನಾಮೆ ನೀಡಿದ್ದಾರೆ.
ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ್ದ ಸಂದರ್ಭದಲ್ಲಿ ಲಕ್ಷ್ಮಣ್ ಸವದಿ ಎರಡು ಬೇಡಿಕೆಗಳನ್ನು ಮುಂದಿಟ್ಟಿದ್ದರು. ಸದ್ಯ ಅಥಣಿ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಹಾಗೂ ಒಂದು ವೇಳೆ ಪಕ್ಷ ಗೆದ್ದು ಸರ್ಕಾರ ರಚಿಸಿದರೆ ಬೆಳಗಾವಿಯಲ್ಲಿ ನಿಂತಿರುವ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವಂತೆ ಕೇಳಿದ್ದಾರೆ. ಇದಕ್ಕೆ ಕೈ ನಾಯಕರು ಆಗಲಿ ಎಂದಿದ್ದಾರೆ ಎಂದು ಸವದಿ ಹೇಳಿದರು.
ಲಕ್ಷ್ಮಣ್ ಸವದಿ ಅವರು ಇಂದು ಸಂಜೆ 4.30ಕ್ಕೆ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಗೊಳ್ಳಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


