ನಾಯಕರು ಪಕ್ಷ ಬಿಟ್ಟು ಹೋಗುತ್ತಾರೆ, ಆದರೆ ಕಾರ್ಯಕರ್ತರು ನಿಷ್ಠಾವಂತರು: ಸಿಎಂ ಬೊಮ್ಮಾಯಿ
ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಮೊದಲ ಮತ್ತು ಎರಡನೇ ಪಟ್ಟಿಯಲ್ಲಿ ಒಟ್ಟು 212 ಅಭ್ಯರ್ಥಿಗಳಿಗೆ ಟಿಕೆಟ್ ಘೋಷಿಸಿದ ನಂತರ ಟಿಕೆಟ್ ವಂಚಿತ ಹಲವು ಬಿಜೆಪಿ ಶಾಸಕರು ಬಂಡಾಯ ಸಾರಿದ್ದು, ಪಕ್ಷ ತೊರೆಯುತ್ತಿದ್ದಾರೆ.

ಬೆಂಗಳೂರು: ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಮೊದಲ ಮತ್ತು ಎರಡನೇ ಪಟ್ಟಿಯಲ್ಲಿ ಒಟ್ಟು 212 ಅಭ್ಯರ್ಥಿಗಳಿಗೆ ಟಿಕೆಟ್ ಘೋಷಿಸಿದ ನಂತರ ಟಿಕೆಟ್ ವಂಚಿತ ಹಲವು ಬಿಜೆಪಿ ಶಾಸಕರು ಬಂಡಾಯ ಸಾರಿದ್ದು, ಪಕ್ಷ ತೊರೆಯುತ್ತಿದ್ದಾರೆ.
ಟಿಕೆಟ್ ವಂಚಿತ ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರು ಇಂದು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಶಾಸಕರಾಗುವ ಮಹತ್ವಾಕಾಂಕ್ಷೆಯಿಂದ ಕೆಲವು ನಾಯಕರು ಪಕ್ಷ ತೊರೆಯುತ್ತಿದ್ದಾರೆ. ಆದರೆ ಕಾರ್ಯಕರ್ತರು ನಿಷ್ಠಾವಂತರಾಗಿದ್ದು, ಪಕ್ಷಕ್ಕೆ ಬದ್ಧರಾಗಿದ್ದಾರೆ ಎಂದರು.
ಟಿಕೆಟ್ ಸಿಗದಿರುವ ಬಗ್ಗೆ ಅಸಮಾಧಾನಗೊಂಡಿರುವ ಕೆಲವು ಅತೃಪ್ತ ಬಿಜೆಪಿ ನಾಯಕರನ್ನು ಕಾಂಗ್ರೆಸ್ ಗೆ ಸೇರ್ಪಡೆಯಾಗುವುದರಿಂದ ಯಾವುದೇ ವ್ಯತ್ಯಾಸವಾಗುವುದಿಲ್ಲ ಎಂದು ಸಿಎಂ ಹೇಳಿದ್ದಾರೆ.
ಹಲವು ಬಂಡಾಯ ಬಿಜೆಪಿ ನಾಯಕರೊಂದಿಗೆ ಕಾಂಗ್ರೆಸ್ ಸಂಪರ್ಕದಲ್ಲಿದೆ ಎಂಬ ವರದಿಗಳ ಕುರಿತು ವರದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ದೇಶದ ಅತ್ಯಂತ ಹಳೆಯ ಪಕ್ಷಕ್ಕೆ ಸುಮಾರು 60 ವಿಧಾನಸಭಾ ಕ್ಷೇತ್ರಗಳಲ್ಲಿ ಸೂಕ್ತ ಅಭ್ಯರ್ಥಿಗಳ ಕೊರತೆಯಿದೆ ಎಂದು ತಿರುಗೇಟು ನೀಡಿದರು.
ಬಿಜೆಪಿಯೊಳಗಿನ ಭಿನ್ನಾಭಿಪ್ರಾಯದ ಕುರಿತು ಪ್ರತಿಕ್ರಿಯಿಸಿದ ಬೊಮ್ಮಾಯಿ, ''ಆಡಳಿತ ಪಕ್ಷದಲ್ಲಿ ಸಹಜವಾಗಿಯೇ ಟಿಕೆಟ್‌ಗೆ ಹೆಚ್ಚಿನ ಬೇಡಿಕೆ ಇರುತ್ತದೆ. "ನಾವು ನಮ್ಮ ಕಾರ್ಯಕರ್ತರೊಂದಿಗೆ ಮಾತನಾಡಿದ್ದೇವೆ, ಕೆಲವು ನಾಯಕರು ಶಾಸಕರಾಗುವ ಮಹತ್ವಾಕಾಂಕ್ಷೆಯೊಂದಿಗೆ(ಪಕ್ಷದಿಂದ) ಹೊರಗೆ ಹೋಗಲು ಪ್ರಯತ್ನಿಸುತ್ತಿದ್ದಾರೆ. ಆದರೆ ಕಾರ್ಯಕರ್ತರು ಹೋಗುವುದಿಲ್ಲ.... ಕಾರ್ಯಕರ್ತರು ಪಕ್ಷಕ್ಕೆ ನಿಷ್ಠರಾಗಿದ್ದಾರೆ" ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


