ರಾಜಕೀಯ

'ಸಾಮ್ರಾಟ್' ಕಟ್ಟಿಹಾಕಲು ಡಿಕೆಶಿ ಮೆಗಾ ಪ್ಲ್ಯಾನ್‌: ಪದ್ಮನಾಭನಗರ ‘ಕೈ’ ಅಭ್ಯರ್ಥಿ ಬದಲಾವಣೆ; ಅಶೋಕ್ ವಿರುದ್ಧ ಡಿ.ಕೆ ಸುರೇಶ್ ಸ್ಪರ್ಧೆ!

ನಾಮಪತ್ರ ಸಲ್ಲಿಕೆಗೆ ಎರಡೇ ದಿನ ಬಾಕಿ ಉಳಿದಿದೆ. ಹೀಗಾಗಿ ಚುನಾವಣಾ ಕಣ ರಂಗೇರುತ್ತಿದ್ದು ಪದ್ಮನಾಭನಗರದ ಕಾಂಗ್ರೆಸ್‌ ಅಭ್ಯರ್ಥಿ ಯಾರು ಎನ್ನುವುದು ದೊಡ್ಡ ಪ್ರಶ್ನೆಯಾಗಿದೆ.

'ಸಾಮ್ರಾಟ್' ಕಟ್ಟಿಹಾಕಲು ಡಿಕೆಶಿ ಮೆಗಾ ಪ್ಲ್ಯಾನ್‌: ಪದ್ಮನಾಭನಗರ ‘ಕೈ’ ಅಭ್ಯರ್ಥಿ ಬದಲಾವಣೆ; ಅಶೋಕ್ ವಿರುದ್ಧ ಡಿ.ಕೆ ಸುರೇಶ್ ಸ್ಪರ್ಧೆ!
ಡಿ.ಕೆ ಸುರೇಶ್ ಮತ್ತು ಅಶೋಕ್
Published On :

ಬೆಂಗಳೂರು: ನಾಮಪತ್ರ ಸಲ್ಲಿಕೆಗೆ ಎರಡೇ ದಿನ ಬಾಕಿ ಉಳಿದಿದೆ. ಹೀಗಾಗಿ ಚುನಾವಣಾ ಕಣ ರಂಗೇರುತ್ತಿದ್ದು ಪದ್ಮನಾಭನಗರದ ಕಾಂಗ್ರೆಸ್‌ ಅಭ್ಯರ್ಥಿ ಯಾರು ಎನ್ನುವುದು ದೊಡ್ಡ ಪ್ರಶ್ನೆಯಾಗಿದೆ.

ಕಾಂಗ್ರೆಸ್‌ ಈಗಾಗಲೇ ರಘುನಾಥ್ ನಾಯ್ಡು ಅವರಿಗೆ ಫಾರಂ ಬಿ ನೀಡಿದೆ. ಆದರೆ ಈಗ ಬಿ ಫಾರಂಗೆ ತಡೆ ಹಿಡಿಯಲಾಗಿದ್ದು ಹಾಲಿ ಶಾಸಕ ಅಶೋಕ್‌ಗೆ ಠಕ್ಕರ್‌ ನೀಡಲು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿಕೆ ಸುರೇಶ್‌ ಸ್ಪರ್ಧೆ ಮಾಡುತ್ತಾರಾ ಎನ್ನುವುದು ಸದ್ಯದ ಕುತೂಹಲವಾಗಿದೆ.

ಪದ್ಮನಾಭನಗರದಲ್ಲಿ ಬಿಜೆಪಿಯಿಂದ ಆರ್‌. ಅಶೋಕ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಬಿ ಫಾರಂ ಪಡೆದಿರುವ ಕಾಂಗ್ರೆಸ್ ಅಭ್ಯರ್ಥಿ ರಘುನಾಥ ನಾಯ್ಡು ಇನ್ನೂ ಕಾದುನೋಡುವ ತಂತ್ರದ ಅನುಸರಿಸಿದ್ದಾರೆ. ಜೆಡಿಎಸ್‌ ಇನ್ನೂ ಅಭ್ಯರ್ಥಿಯನ್ನೇ ಪ್ರಕಟಿಸಿಲ್ಲ. ಈ ನಡುವೆ ರಘುನಾಥ ನಾಯ್ಡು ಅವರಿಂದ ಬಿ ಫಾರಂ ವಾಪಸ್ ಪಡೆದಿದ್ದಾರೆ ಎನ್ನುವ ಗುಸು ಗುಸು ಆರಂಭವಾಗಿದೆ.

ಈ ಸಂಬಂಧ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ರಘುನಾಥ ನಾಯ್ಡು, ಬಿ ಪಾರಂ ನನ್ನ ಬಳಿಯೇ ಇದೆ, ಡಿ.ಕೆ ಸುರೇಶ್ ಕಣಕ್ಕಿಳಿದರೆ ಸಂತೋಷದಿಂದ ಹಿಂದೆ ಸರಿಯುತ್ತೇನೆ ಎಂದು ಹೇಳಿದ್ದಾರೆ. ಇನ್ನೂ ಈ ಸಂಬಂಧ ಪ್ರತಿಕ್ರಿಯೆ ನೀಡಿದ ಡಿ.ಕೆ ಸುರೇಶ್ ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.