ಆಶೀರ್ವದಿಸಲು ಮೋದಿ ಏನು ದೇವರಾ, ಮಠಾಧೀಶರಾ ಅಥವಾ ಛೂಮಂತರ್ ಬಾಬಾನಾ? ಕಾಂಗ್ರೆಸ್ ಕಿಡಿ
ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವಂತೆಯೇ ರಾಜಕೀಯ ಮುಖಂಡರ ನಡುವಿನ ಆರೋಪ, ಪ್ರತ್ಯಾರೋಪ, ವಾಕ್ಸಮರವೂ ಹೆಚ್ಚಾಗುತ್ತಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾವೇರಿಯ ಶಿಗ್ಗಾವಿ ಕ್ಷೇತ್ರದಲ್ಲಿ ನೀಡಿರುವ ಹೇಳಿಕೆ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್ ಕಿಡಿಕಾರಿದೆ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವಂತೆಯೇ ರಾಜಕೀಯ ಮುಖಂಡರ ನಡುವಿನ ಆರೋಪ, ಪ್ರತ್ಯಾರೋಪ, ವಾಕ್ಸಮರವೂ ಹೆಚ್ಚಾಗುತ್ತಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾವೇರಿಯ ಶಿಗ್ಗಾವಿ ಕ್ಷೇತ್ರದಲ್ಲಿ ನೀಡಿರುವ ಹೇಳಿಕೆ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್ ಕಿಡಿಕಾರಿದೆ.
ಕರ್ನಾಟಕದ ಜನತೆ ನರೇಂದ್ರ ಮೋದಿ ಅವರ ಆಶೀರ್ವಾದದಿಂದ ವಂಚಿತರಾಗಬಾರದು, ಮತ ಹಾಕದಿದ್ದರೆ ಮೋದಿ ಆಶೀರ್ವಾದದಿಂದ ತಪ್ಪಿಸಿಕೊಳ್ಳುವರಿ ಎಂಬ ನಡ್ಡಾ ಹೇಳಿಕೆ ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬೆದರಿಕೆ ಹಾಕಿದ ಜೆಪಿ ನಡ್ಡಾ ಅವರೇ, ಆಶೀರ್ವದಿಸಲು ಮೋದಿ ಏನು ದೇವರಾ, ಮಠಾಧೀಶರಾ ಅಥವಾ ಛೂಮಂತರ್ ಬಾಬಾನಾ?ಎಂದು ಪ್ರಶ್ನಿಸಿದೆ. ಕನ್ನಡಿಗರ ತೆರಿಗೆ ಭಿಕ್ಷೆಯಲ್ಲಿ ಗತ್ತು, ಗಮ್ಮತ್ತು, ಶೋಕಿ ಮಾಡುತ್ತಿರುವ ಮೋದಿಯೇ ಕನ್ನಡಿಗರ ಋಣಿಯಾಗಿರಬೇಕು ಅಲ್ಲವೇ ಎಂದು ಹೇಳಿದೆ.
ಕರ್ನಾಟಕ ನೆರೆಯಲ್ಲಿ ಮುಳುಗಿದ್ದಾಗ ಮೋದಿ, ಇತ್ತ ತಿರುಗಿಯೂ ನೋಡಲಿಲ್ಲ, ಪರಿಹಾರವನ್ನೂ ನೀಡಲಿಲ್ಲ. ನೆರೆ ಪರಿಹಾರಕ್ಕೆ ಬೇಡಿಕೆ ಸಲ್ಲಿಸಲು ಬಿಎಸ್ ಯಡಿಯೂರಪ್ಪ ಅವರು ಹಲವು ಬಾರಿ ದೆಹಲಿಯ ಪ್ರಧಾನಿ ಕಚೇರಿಯ ಬಾಗಿಲು ಕಾದರೂ ಕನಿಷ್ಠ ಸೌಜನ್ಯಕ್ಕೆ ಭೇಟಿಯೂ ಮಾಡಲಿಲ್ಲ. ಆಗ "ಮೋದಿ ಆಶೀರ್ವಾದ" ಎಲ್ಲಿ ಹೋಗಿತ್ತು ಎಂದು ಜೆ.ಪಿ. ನಡ್ಡಾ ಅವರನ್ನು ಕಾಂಗ್ರೆಸ್ ಪ್ರಶ್ನಿಸಿದ್ದು, ರಾಜ್ಯದ ಜನರನ್ನು ಬಿಜೆಪಿ ಅವಮಾನಿಸಿದೆ ಎಂದು ಆರೋಪಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


