ಪ್ರಧಾನಿ ಮೋದಿ ಕರ್ನಾಟಕವನ್ನು ನಿರ್ಲಕ್ಷಿಸಿದ್ದು, ಜನರೂ ಬಿಜೆಪಿಯನ್ನು ತಿರಸ್ಕರಿಸಲಿದ್ದಾರೆ: ಸಿದ್ದರಾಮಯ್ಯ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕರ್ನಾಟಕ ರಾಜ್ಯವನ್ನು ನಿರ್ಲಕ್ಷಿಸಿದ್ದು, ಜನರೂ ಕೂಡ ಬಿಜೆಪಿಯನ್ನು ತಿರಸ್ಕರಿಸಲಿದ್ದಾರೆಂದು ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕರ್ನಾಟಕ ರಾಜ್ಯವನ್ನು ನಿರ್ಲಕ್ಷಿಸಿದ್ದು, ಜನರೂ ಕೂಡ ಬಿಜೆಪಿಯನ್ನು ತಿರಸ್ಕರಿಸಲಿದ್ದಾರೆಂದು ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿಯವರು ಕರ್ನಾಟಕವನ್ನು ನಿರ್ಲಕ್ಷಿಸಿದ್ದಾರೆ. ಜೆಪಿ ನಡ್ಡಾ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಪ್ರಮುಖ ಸಮುದಾಯಗಳನ್ನು ಬದಿಗೊತ್ತುತ್ತಿದ್ದಾರೆ. ಈ ಬಾರಿ ಕಾಂಗ್ರೆಸ್ ಪಕ್ಷ ಸ್ವಂತ ಬಲದಿಂದ ಮತ್ತೆ ಅಧಿಕಾರಕ್ಕೆ ಬರಲಿದೆ. ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಹೇಳಿದ್ದಾರೆ.
ಇದೇ ವೇಳೆ ರಾಹುಲ್ ಗಾಂಧಿಯವರ ಅರ್ಜಿ ವಜಾಗೊಳಿಸಿರುವ ನ್ಯಾಯಾಲಯದ ತೀರ್ಪು ಕುರಿತು ಪ್ರತಿಕ್ರಿಯೆ ನೀಡಿದ ಅವರು, ಇದನ್ನು ಪ್ರಶ್ನಿಸಿ ಉನ್ನತ ನ್ಯಾಯಾಲಯದ ಮೊರೆ ಹೋಗುತ್ತೇವೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


