ರಾಜಕೀಯ

ಹುಬ್ಬಳ್ಳಿ: ಜಗದೀಶ್ ಶೆಟ್ಟರ್ ನಿವಾಸಕ್ಕೆ ಸುರ್ಜೆವಾಲಾ ಭೇಟಿ, ಗೆಲುವಿಗೆ ರಣತಂತ್ರ

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸುರ್ಜೆವಾಲಾ ಅವರು ಗುರುವಾರ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರ ನಿವಾಸಕ್ಕೆ ಭೇಟಿ ನೀಡಿ, ಮಾತುಕತೆ ನಡೆಸಿದರು

ಹುಬ್ಬಳ್ಳಿ: ಜಗದೀಶ್ ಶೆಟ್ಟರ್ ನಿವಾಸಕ್ಕೆ ಸುರ್ಜೆವಾಲಾ ಭೇಟಿ, ಗೆಲುವಿಗೆ ರಣತಂತ್ರ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಸುರ್ಜೆವಾಲಾ ಭೇಟಿ
Published On :

ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ ಅವರು ಗುರುವಾರ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರ ನಿವಾಸಕ್ಕೆ ಭೇಟಿ ನೀಡಿ, ಮಾತುಕತೆ ನಡೆಸಿದರು

ಲಿಂಗಾಯತ ಸಮುದಾಯದ ಮತಗಳ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್, ಗೆಲುವಿಗೆ ಹಲವು ರಣತಂತ್ರ ರೂಪಿಸುತ್ತಿದೆ. ಇಂದು ರಾತ್ರಿ ಶೆಟ್ಟರ್ ನಿವಾಸಕ್ಕೆ ತೆರಳಿದ ಸುರ್ಜೆವಾಲಾ ಅವರು, ಹುಬ್ಬಳ್ಳಿ - ಧಾರವಾಡ ಸುತ್ತಮುತ್ತಲಿನ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿನ ಕುರಿತು ಚರ್ಚಿಸಿದರು ಎನ್ನಲಾಗಿದೆ.

ಶೆಟ್ಟರ್ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುರ್ಜೆವಾಲಾ ಅವರು, ಹಿರಿಯ ನಾಯಕ ಜಗದೀಶ್ ಶೆಟ್ಟರ್ ಸೇರಿದಂತೆ ಹಲವು ನಾಯಕರನ್ನು ಸೋಲಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ. ಆದರೆ ಅವರ ಷಡ್ಯಂತ್ರಕ್ಕೆ ಅವರೇ ಬಲಿಯಾಗಲಿದ್ದಾರೆ. ಬಿಜೆಪಿಯಲ್ಲಿ ಕೆಲವು ಸಜ್ಜನ ರಾಜಕಾರಣಿಗಳನ್ನು ಹೊರಹಾಕುವ ಕೆಲಸ ನಡೆದಿದೆ. ಶೆಟ್ಟರ್ ಅವರು ಆ ಷಡ್ಯಂತ್ರಕ್ಕೆ ಸೆಡ್ಡು ಹೊಡೆದು ಕಾಂಗ್ರೆಸ್ ಸೇರಿದ್ದಾರೆ ಎಂದರು.

ಸುರ್ಜೆವಾಲಾ ಅವರೊಂದಿಗೆ ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಧಾರವಾಡ ಜಿಲ್ಲಾ ಚುನಾವಣಾ ಉಸ್ತುವಾರಿ ಪಿ.ವಿ. ಮೋಹನ್, ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್, ಮಾಜಿ ಸಂಸದ ಐ.ಜಿ. ಸನದಿ ಸೇರಿದಂತೆ ಹಲವು ಮುಖಂಡರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.