ಈ ಬಾರಿ ಕರ್ನಾಟಕದಲ್ಲಿ ಆಪರೇಷನ್ ಕಮಲ ನಡೆಯಲ್ಲ, ಯಾಕಂದ್ರೆ ಕಾಂಗ್ರೆಸ್ 150 ಸ್ಥಾನ ಗೆಲ್ಲುತ್ತೆ
ಈ ಬಾರಿ ಕರ್ನಾಟಕದಲ್ಲಿ ಆಪರೇಷನ್ ಕಮಲ ನಡೆಯುವುದಿಲ್ಲ. ಯಾಕಂದ್ರೆ ಕಾಂಗ್ರೆಸ್ ಪಕ್ಷ 150 ಸ್ಥಾನ ಗೆಲ್ಲುತ್ತೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾನುವಾರ ಹೇಳಿದ್ದಾರೆ.

ವಿಜಯಪುರ: ಈ ಬಾರಿ ಕರ್ನಾಟಕದಲ್ಲಿ ಆಪರೇಷನ್ ಕಮಲ ನಡೆಯುವುದಿಲ್ಲ. ಯಾಕಂದ್ರೆ ಕಾಂಗ್ರೆಸ್ ಪಕ್ಷ 150 ಸ್ಥಾನ ಗೆಲ್ಲುತ್ತೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾನುವಾರ ಹೇಳಿದ್ದಾರೆ.
ಇಂದು ವಿಜಯಪುರದಲ್ಲಿ ಭರ್ಜರಿ ರೋಡ್ ಶೋ ನಡೆಸಿದ ನಂತರ ಕನಕದಾಸ ವೃತ್ತದಲ್ಲಿ ಭಾಷಣ ಮಾಡಿದ ರಾಹುಲ್ ಗಾಂಧಿ, ಬಿಜೆಪಿಯವರು ನನ್ನ ಸರ್ಕಾರಿ ನಿವಾಸವನ್ನು ಕಸಿದುಕೊಂಡರು. ನೂರಾರು ಜನರು ತಮ್ಮ ಮನೆ ತಗೊಳ್ಳಿ ಎಂದು ಹೇಳಿದರು. ನನ್ನ ಮನೆ ಕಸಿದುಕೊಂಡಿದ್ದು ಒಳ್ಳೆಯದೇ ಆಗಿದೆ ಎಂದರು.
ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 150 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದು, ರಾಜ್ಯದಲ್ಲಿ ಬಿಜೆಪಿಗೆ ಆಪರೇಷನ್ ಕಮಲ ಮಾಡಲು ಅವಕಾಶ ಇರುವುದಿಲ್ಲ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ಹೇಳಿದರು.
ವಿಜಯಪುರದ ಶಿವಾಜಿ ವೃತ್ತದಲ್ಲಿ ಶಿವಾಜಿ ಪ್ರತಿಮೆಗೆ ಹೂವಿನ ಹಾರ ಹಾಕುವ ಮೂಲಕ ಕಾಂಗ್ರೆಸ್ನ ಬೃಹತ್ ರೋಡ್ಶೋಗೆ ಚಾಲನೆ ನೀಡಿದ ರಾಹುಲ್ ಗಾಂಧಿ, ನಗರದ ಶಿವಾಜಿ ವೃತ್ತದಿಂದ ಕನಕದಾಸ ವೃತ್ತದವರೆಗೂ ಬೃಹತ್ ರೋಡ್ ಶೋ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


