ಸಿದ್ದರಾಮಯ್ಯ ರಾಜ್ಯದ 224 ಶಾಸಕರಿಗೂ ಮುಖ್ಯಮಂತ್ರಿಗಳೇ ಅಥವಾ ಗ್ಯಾರಂಟೀ ಶಾಸಕರಿಗೆ ಮಾತ್ರವೇ??: ಬಿಜೆಪಿ
ಕ್ಷೇತ್ರಗಳಿಗೆ ಅನುದಾನ ಬಿಡುಗಡೆ, ಜಿಲ್ಲೆಗಳ ಉಸ್ತುವಾರಿ ಕೆಲಸಗಳು, ಶಾಸಕರ ಬೇಡಿಕೆಗಳು ಇತ್ಯಾದಿಗಳ ಬಗ್ಗೆ ತಿಳಿದುಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ಮಂಗಳವಾರ ಕೂಡ ಕಾಂಗ್ರೆಸ್ ಶಾಸಕರ ಜೊತೆ ಸಭೆ ನಡೆಸಿದ್ದರು.

ಬೆಂಗಳೂರು: ಕ್ಷೇತ್ರಗಳಿಗೆ ಅನುದಾನ ಬಿಡುಗಡೆ, ಜಿಲ್ಲೆಗಳ ಉಸ್ತುವಾರಿ ಕೆಲಸಗಳು, ಶಾಸಕರ ಬೇಡಿಕೆಗಳು ಇತ್ಯಾದಿಗಳ ಬಗ್ಗೆ ತಿಳಿದುಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ಮಂಗಳವಾರ ಕೂಡ ಕಾಂಗ್ರೆಸ್ ಶಾಸಕರ ಜೊತೆ ಸಭೆ ನಡೆಸಿದ್ದರು.
ಇದಕ್ಕೆ ಟೀಕೆ ಮಾಡಿರುವ ವಿರೋಧ ಪಕ್ಷ ಬಿಜೆಪಿ, ಕೇವಲ ಕಾಂಗ್ರೆಸ್ ಶಾಸಕರನ್ನು ಭೇಟಿ ಮಾಡಿದ್ದಕ್ಕೆ ಟೀಕೆ ವ್ಯಕ್ತಪಡಿಸಿದ್ದಾರೆ. ನಿನ್ನೆ ಸಿದ್ದರಾಮಯ್ಯನವರು ರಾಯಚೂರು, ವಿಜಯಪುರ, ಕೊಪ್ಪಳ, ಬೆಳಗಾವಿ, ಹಾವೇರಿ ಮತ್ತು ಕಲಬುರಗಿ ಜಿಲ್ಲೆಗಳ ಶಾಸಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.
ಸಿಎಂ ಅವರ ನಡೆಗೆ ಟೀಕಿಸಿರುವ ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ಸುರೇಶ್ ಕುಮಾರ್, ಸಿದ್ದರಾಮಯ್ಯನವರು ರಾಜ್ಯದ ಎಲ್ಲಾ 224 ಶಾಸಕರಿಗೆ ಮುಖ್ಯಮಂತ್ರಿಗಳೇ ಅಥವಾ ಕೇವಲ ಗ್ಯಾರಂಟಿ ಯೋಜನೆಗಳಿಗೆ ಮಾತ್ರ ಮುಖ್ಯಮಂತ್ರಿಗಳೇ, ಸಿದ್ದರಾಮಯ್ಯನವರ ಸಭೆ ಮತ್ತು ಭರವಸೆಗಳು ಸಾರ್ವಜನಿಕರಲ್ಲಿ ಗೊಂದಲ, ಸಂಶಯ ಹುಟ್ಟಿಸುತ್ತಿದೆ ಎಂದರು.
ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಹ ಸಭೆಗಳನ್ನು ನಡೆಸಿದರು. ವಿಜಯಪುರದ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಟ್ವೀಟ್ ಮಾಡಿ, ಸ್ಥಳೀಯ ಅಭಿವೃದ್ಧಿ ಕೆಲಸಗಳು, ಅನುದಾನ, ಲೋಕಸಭೆ ಚುನಾವಣೆಗೆ ಸಿದ್ಧತೆ ಕುರಿತು ಚರ್ಚಿಸಲಾಯಿತು ಎಂದು ಬರೆದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


