ಐಸಿಸ್ ಜತೆ ನಂಟು ಹೊಂದಿರುವ ವ್ಯಕ್ತಿಯೊಂದಿಗೆ ಸಿಎಂ ಸಿದ್ದರಾಮಯ್ಯ ವೇದಿಕೆ ಹಂಚಿಕೊಂಡಿದ್ದಾರೆ: ಯತ್ನಾಳ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐಸಿಸ್ ಭಯೋತ್ಪಾದಕರೊಂದಿಗೆ ಸಂಪರ್ಕ ಹೊಂದಿರುವ ವ್ಯಕ್ತಿಯೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬುಧವಾರ ಗಂಭೀರ ಆರೋಪ ಮಾಡಿದ್ದಾರೆ.

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐಸಿಸ್ ಭಯೋತ್ಪಾದಕರೊಂದಿಗೆ ಸಂಪರ್ಕ ಹೊಂದಿರುವ ವ್ಯಕ್ತಿಯೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬುಧವಾರ ಗಂಭೀರ ಆರೋಪ ಮಾಡಿದ್ದಾರೆ.
ಇಂದು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಯತ್ನಾಳ್, ಡಿಸೆಂಬರ್ 4 ರಂದು ಹುಬ್ಬಳ್ಳಿ ನಗರದ ಬಾಷಾ ಪೀರ್ ದರ್ಗಾ ಬಳಿ ನಡೆದ ದಕ್ಷಿಣ ಭಾರತ ಮುಸ್ಲಿಂ ಧಾರ್ಮಿಕ ಮುಖಂಡರ ಸಮಾವೇಶದಲ್ಲಿ ಐಸಿಸ್ ಸಂಪರ್ಕ ಹೊಂದಿರುವ ವ್ಯಕ್ತಿ ಭಾಗವಹಿಸಿದ್ದರು ಎಂದು ಆರೋಪಿಸಿದರು.
"ಆ ವ್ಯಕ್ತಿ ಸಿಎಂ ಸಿದ್ದರಾಮಯ್ಯ ಅವರ ಪಕ್ಕದಲ್ಲೇ ಕುಳಿತಿದ್ದರು. ವೇದಿಕೆ ಮೇಲಿರುವ ಐಸಿಸ್ ಸಂಪರ್ಕ ಹೊಂದಿರುವ ವ್ಯಕ್ತಿಯ ಬಗ್ಗೆ ಇವರಿಗೆ ಮಾಹಿತಿ ಇಲ್ಲವೇ?' ಎಂದು ಯತ್ನಾಳ್ ಪ್ರಶ್ನಿಸಿದರು.
"ಇದಕ್ಕೆ ಸಂಬಂಧಿಸಿದಂತೆ ನನಗೆ ಅಗತ್ಯವಿರುವ ಎಲ್ಲಾ ಮಾಹಿತಿಗಳು ಸಿಕ್ಕಿವೆ. ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ವ್ಯಕ್ತಿ ಸಿಎಂ ಜೊತೆ ವೇದಿಕೆ ಹಂಚಿಕೊಂಡಿರುವುದು ಅತ್ಯಂತ ಖಂಡನೀಯ" ಎಂದು ಯತ್ನಾಳ್ ಹೇಳಿದ್ದಾರೆ.
ಇದನ್ನೂ ಓದಿ: ಆರ್ ಎಸ್ಎಸ್ ಗರ್ಭಗುಡಿಗೆ ದಲಿತರಿಗೆ ಪ್ರವೇಶ ಇಲ್ಲ; ಇದಕ್ಕೆ ಗೂಳಿಹಟ್ಟಿ ಶೇಖರ್ ಆಡಿಯೋ ಸಾಕ್ಷಿ: ಸಿಎಂ ಸಿದ್ದರಾಮಯ್ಯ
"ನಾನು ಹುಡುಗಾಟಿಕೆಗೆ ಈ ಹೇಳಿಕೆ ನೀಡುತ್ತಿಲ್ಲ. ಬೇಕಾದ್ರೆ ಮಾಹಿತಿ ತರಿಸಿಕೊಳ್ಳಲಿ ಎಂದು ಸವಾಲು ಹಾಕಿದ ಯತ್ನಾಳ್, ಪ್ರಧಾನಿ ಕಾರ್ಯಕ್ರಮ ಇದ್ದರೆ, ಯಾರ್ಯಾರು ವೇದಿಕೆ ಮೇಲೆ ಇರಬೇಕು ಎಂಬ ಮಾಹಿತಿ ಇರುತ್ತದೆ. ಈ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಯಾರ್ಯಾರು ಇರ್ತಾರೆ ಎಂದು ಮಾಹಿತಿ ಇರಲಿಲ್ವಾ..? ನಾನೇ ಇನ್ನೊಂದು ವಾರದಲ್ಲೇ ಎಲ್ಲ ಮಾಹಿತಿ ನೀಡುತ್ತೇನೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


