ಮೌಲ್ವಿ ತನ್ವೀರ್ ಹಶ್ಮಿಯೊಂದಿಗೆ ಯಾವುದೇ ವ್ಯವಹಾರಿಕ ಪಾಲುದಾರಿಕೆ ಹೊಂದಿಲ್ಲ: ಯತ್ನಾಳ್
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಜಮಾತ್ ಎ ಅಹಲೆ ಸುನ್ನತ್ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಮೌಲ್ವಿ ತನ್ವೀರ್ ಹಶ್ಮಿ ನಡುವಿನ ವಿವಾದ ಇದೀಗ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.

ಬೆಳಗಾವಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಜಮಾತ್ ಎ ಅಹಲೆ ಸುನ್ನತ್ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಮೌಲ್ವಿ ತನ್ವೀರ್ ಹಶ್ಮಿ ನಡುವಿನ ವಿವಾದ ಇದೀಗ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.
ಮೌಲ್ವಿ ತನ್ವೀರ್ ಹಶ್ಮಿ ಅವರಿಗೆ ಉಗ್ರ ಸಂಘಟನೆ ಐಸಿಸ್ ನಂಟು ಇದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದು, ಇದು ಬೇರೆ ಬೇರೆ ಆಯಾಮದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಶಾಸಕ ಯತ್ನಾಳ್ ಹಾಗೂ ಮೌಲ್ವಿ ತನ್ವೀರ್ ಹಶ್ಮಿ ನಡುವೆ ವೈಯಕ್ತಿಕ ಸಂಘರ್ಷ ಇದೆ. ಯತ್ನಾಳ್ ಹಾಗೂ ಹಶ್ಮಿ ಕುಟುಂಬ ವ್ಯವಹಾರಿಕ ಪಾಲುದಾರಿಕೆ ಹೊಂದಿದ್ದಾರೆ. ವಿಜಯಪುರದವರಾದ ಈ ಇಬ್ಬರೂ ಗಾಂಧಿಚೌಕ್ ಬಳಿಯಿರುವ ‘ಟೂರಿಸ್ಟ್ ಹೋಟೆಲ್’ನ ಪಾಲುದಾರರು ಎಂದು ಮಾಧ್ಯಮಗಳು ವರದಿ ಮಾಡಿವೆ.
ಆದರೆ ಈ ವರದಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಬಿಜೆಪಿ ಫೈರ್ ಬ್ರಾಂಡ್ ಶಾಸಕ, ಮೌಲ್ವಿ ತನ್ವೀರ್ ಹಶ್ಮಿ ಕುಟುಂಬದ ಜೊತೆಗೆ ನಾನು ಯಾವುದೇ ವ್ಯವಹಾರಿಕ ಪಾಲುದಾರಿಕೆ ಹೊಂದಿಲ್ಲ. ನನ್ನ ವಿರುದ್ಧದ ಆರೋಪ ಸುಳ್ಳು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


