4 ಸಾವಿರ ಕೋಟಿ ರೂ. ಹಗರಣ ಎಂದು ಕೊಂಡಿದ್ದೆವು; ಯತ್ನಾಳ್ ಮಾಹಿತಿಯಿಂದ ನೆರವಾಗಿದೆ: ಜಿ. ಪರಮೇಶ್ವರ
ಇದು 4,000 ಕೋಟಿ ರೂ.ಗಳ ಹಗರಣ ಎಂದು ನಾವು ಭಾವಿಸಿದ್ದೆವು. ಆದರೆ, ಯತ್ನಾಳ್ ಅವರು ಒಟ್ಟು ಮೊತ್ತವನ್ನು ಬಹಿರಂಗಪಡಿಸುವ ಮೂಲಕ ತನಿಖಾ ಸಂಸ್ಥೆಗೆ ಸಹಾಯ ಮಾಡಿದ್ದಾರೆ ಎಂದು ಅವರು ಹೇಳಿದರು.

ಕಲಬುರಗಿ: ಕೋವಿಡ್ ಸಂದರ್ಭದಲ್ಲಿ 4 ಸಾವಿರ ಕೋಟಿ ರೂ.ಗಳ ಹಗರಣವಾಗಿರಬಹುದು ಎಂದು ನಾವು ಭಾವಿಸಿದ್ದೆವು. ಈಗ ನಮ್ಮ ಮಾಹಿತಿ ತಪ್ಪು ಎಂದು ಸ್ಪಷ್ಟವಾಗಿದೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು 4 ಸಾವಿರ ಕೋಟಿ ಅಲ್ಲ, 40 ಸಾವಿರ ಕೋಟಿ ಎಂದು ಹೇಳುವ ಮೂಲಕ ತನಿಖೆಗೆ ನೆರವಾಗಿದ್ದಾರೆ ಎಂದು ಗೃಹ ಪರಮೇಶ್ವರ್ ತಿಳಿಸಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಅವರು, ಹೈಕೋರ್ಟ್ ನಿವೃತ್ತ ನ್ಯಾಯಾಧೀಶರು ಹಗರಣದ ತನಿಖೆ ನಡೆಸಲಿದ್ದಾರೆ. ಇದು 4,000 ಕೋಟಿ ರೂ.ಗಳ ಹಗರಣ ಎಂದು ನಾವು ಭಾವಿಸಿದ್ದೆವು. ಆದರೆ, ಯತ್ನಾಳ್ ಅವರು ಒಟ್ಟು ಮೊತ್ತವನ್ನು ಬಹಿರಂಗಪಡಿಸುವ ಮೂಲಕ ತನಿಖಾ ಸಂಸ್ಥೆಗೆ ಸಹಾಯ ಮಾಡಿದ್ದಾರೆ ಎಂದು ಅವರು ಹೇಳಿದರು.
ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಯುತ್ತಿದೆ. ತನಿಖಾ ಸಮಿತಿ ಕಾನೂನು ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತದೆ. ಯಾರಿಗೆ ನೋಟಿಸ್ ನೀಡಬೇಕು, ಯಾವ ರೀತಿ ವಿಚಾರಣೆ ನಡೆಸಬೇಕೆಂಬುದನ್ನು ಸಮಿತಿ ತೀರ್ಮಾನಿಸುತ್ತದೆ ಎಂದು ಹೇಳಿದರು.
ಪಿಎಸ್‌ಐ ನೇಮಕಾತಿ ಮರು ಪರೀಕ್ಷೆಯಲ್ಲಿ, ಅವ್ಯವಹಾರಗಳನ್ನು ತಡೆಗಟ್ಟಲು ಬೆಂಗಳೂರಿನಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಹೇಳಿದರು. ಮುಂದಿನ ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (ಕೆಎಸ್‌ಇಟಿ) ಮತ್ತು ಪಿಎಸ್‌ಐ ನೇಮಕಾತಿ ಪರೀಕ್ಷೆಯು ಕಲಬುರಗಿ ಮತ್ತು ವಿಜಯಪುರ ಸೇರಿದಂತೆ ಇತರ ಕೇಂದ್ರಗಳಲ್ಲಿ ನಡೆಯಲಿದೆ ಎಂದು ಅವರು ಹೇಳಿದರು.
ಪಿಎಸ್‌ಐ ಹಗರಣದ ತನಿಖೆ ನಡೆಸುತ್ತಿರುವ ನ್ಯಾಯಮೂರ್ತಿ ಬಿ ವೀರಪ್ಪ ಆಯೋಗವು ಎಲ್ಲಾ ಮಾಹಿತಿಯನ್ನು ಸಂಗ್ರಹಿಸುತ್ತಿದೆ. ವರದಿ ಬಂದ ನಂತರ ಆರೋಪಿಗಳ ವಿರುದ್ಧ ಸರಕಾರ ಕ್ರಮ ಕೈಗೊಳ್ಳಲಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


