ಅಸಮಾಧಾನ ತಣಿಸಲು ರಾಯರೆಡ್ಡಿ, ಬಿಆರ್ ಪಾಟೀಲ್, ದೇಶಪಾಂಡೆಗೆ ಸಂಪುಟ ದರ್ಜೆ ಸ್ಥಾನ ಮಾನ ನೀಡಿದ ಸಿಎಂ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನ ತಣಿಸಲು ಮೂವರು ಹಿರಿಯ ಶಾಸಕರಿಗೆ ಮಹತ್ವದ ಸ್ಥಾನ ನೀಡಿದ್ದು, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರನ್ನಾಗಿ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಹಿರಿಯ ಶಾಸಕ ಬಸವರಾಜ...

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನ ತಣಿಸಲು ಮೂವರು ಹಿರಿಯ ಶಾಸಕರಿಗೆ ಮಹತ್ವದ ಸ್ಥಾನ ನೀಡಿದ್ದು, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರನ್ನಾಗಿ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಹಿರಿಯ ಶಾಸಕ ಬಸವರಾಜ ರಾಯರಡ್ಡಿ ಅವರನ್ನು ನೇಮಕ ಮಾಡಲಾಗಿದೆ.
ಅಲ್ಲದೇ ಮುಖ್ಯಮಂತ್ರಿಗಳ ಸಲಹೆಗಾರರಾಗಿ ಆಳಂದ ಶಾಸಕ ಶಾಸಕ ಬಿಆರ್ ಪಾಟೀಲ್ ಅವರನ್ನು ಮತ್ತು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ಆರ್.ವಿ.ದೇಶಪಾಂಡೆ ಅವರನ್ನು ನೇಮಕ ಮಾಡಲಾಗಿದೆ.
ಈ ಮೂವರು ಶಾಸಕರಿಗೆ ಸಚಿವ ಸಂಪುಟ ದರ್ಜೆ ಸ್ಥಾನ ಮಾನ ನೀಡಿ ರಾಜ್ಯಪಾಲರ ಆದೇಶಾನುಸಾರ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ-2(ಪ್ರ) ಶುಕ್ರವಾರ ಆದೇಶ ಹೊರಡಿಸಿದ್ದಾರೆ.
ಈ ಮೂವರೂ ಶಾಸಕರು ಸಚಿವರಾಗಲು ತೀವ್ರ ಪ್ರಯತ್ನ ನಡೆಸಿದ್ದರು. ಆದರೆ ಸಚಿವ ಸ್ಥಾನ ಸಿಗದಿದ್ದಾಗ ಸಚಿವರ ಕಾರ್ಯ ವೈಖರಿ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಶಾಸಕರ ಪತ್ರಗಳಿಗೆ ಸಚಿವರು ಕಿಮ್ಮತ್ತು ನೀಡುತ್ತಿಲ್ಲ ಎಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಆಕ್ರೋಶ ವ್ಯಕ್ತಪಡಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


