ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ: ಫೆಬ್ರವರಿ 24 ರಿಂದ ಬೆಳಗಾವಿಯಲ್ಲಿ ಸಿದ್ದರಾಮಯ್ಯ ಪ್ರವಾಸ
ರಾಜ್ಯ ವಿಧಾನಸಬಾ ಚುನಾವಣೆಗೆ ಇನ್ನು ಕೇವಲ 2-3 ತಿಂಗಳುಗಳಷ್ಟೇ ಬಾಕಿ ಇದ್ದು, ಈ ಹಿನ್ನೆಲೆಯಲ್ಲಿ ಚುನಾವಣೆಗೆ ಸಿದ್ಧತೆಗಳ ಆರಂಭಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.24ರಿಂದ ನಾಲ್ಕು ದಿನಗಳ ಕಾಲ ಬೆಳಗಾವಿ ಪ್ರವಾಸ ಕೈಗೊಳ್ಳಳಿದ್ದಾರೆಂದು ತಿಳಿದುಬಂದಿದೆ.

ಬೆಳಗಾವಿ: ರಾಜ್ಯ ವಿಧಾನಸಬಾ ಚುನಾವಣೆಗೆ ಇನ್ನು ಕೇವಲ 2-3 ತಿಂಗಳುಗಳಷ್ಟೇ ಬಾಕಿ ಇದ್ದು, ಈ ಹಿನ್ನೆಲೆಯಲ್ಲಿ ಚುನಾವಣೆಗೆ ಸಿದ್ಧತೆಗಳ ಆರಂಭಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.24ರಿಂದ ನಾಲ್ಕು ದಿನಗಳ ಕಾಲ ಬೆಳಗಾವಿ ಪ್ರವಾಸ ಕೈಗೊಳ್ಳಳಿದ್ದಾರೆಂದು ತಿಳಿದುಬಂದಿದೆ.
ಈ ಸಂಬಂಧ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಮಾಹಿತಿ ನೀಡಿದ್ದು, ಫೆ. 24ರಿಂದ ನಾಲ್ಕು ದಿನಗಳ ಕಾಲ ಬೆಳಗಾವಿ ಜಿಲ್ಲೆಯ 18 ವಿಧಾನಸಭಾ ಮತಕ್ಷೇತ್ರಗಳಲ್ಲಿ ಮಾಜಿ ಸಿಎಂ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರು ಪ್ರವಾಸ ಹಮ್ಮಿಕೊಳ್ಳಲಿದ್ದಾರೆಂದು ಹೇಳಿದ್ದಾರೆ.
ಫೆ. 28 ರಂದು ಸಂಜೆ ಗೋಕಾಕನಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗುವುದು. 2023ರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ 1ನೇ ಹಂತದಲ್ಲಿ ಪ್ರಜಾಧ್ವನಿ ಯಾತ್ರೆ ಯಶಸ್ಸಿಯಾಗಿ ನಡೆಸಲಾಗಿದ್ದು, 2ನೇ ಹಂತದ ಯಾತ್ರೆಯನ್ನು ವಿಧಾನಸಭಾ ಕ್ಷೇತ್ರವಾರು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಪ್ರಜಾಧ್ವನಿ ಯಾತ್ರೆಯಲ್ಲಿ ಘೋಷಿಸಿದ ಯೋಜನೆಗಳನ್ನು ಮನೆ ಮನೆಗೆ ತಿಳಿಸಲಾಗುವುದು, ಇನ್ನು ಅನೇಕ ಯೋಜನೆಗಳನ್ನು ಘೋಷಿಸಲಾಗುವುದು, ಇದರಲ್ಲಿ ಜಿಲ್ಲಾವಾರು ಯೋಜನೆಗಳು ಹಂಚಿಕೆಯಾಗಿವೆ. ಜನ ಆಶೀರ್ವಾದ ಮಾಡಿದರೆ ಈ ಎಲ್ಲ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುತ್ತೇವೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


