ಬಿಜೆಪಿಯೇ ಭರವಸೆ ಎನ್ನುತ್ತಿರುವ ಆಡಳಿತ ಪಕ್ಷ: 40 ಪರ್ಸೆಂಟ್ ಕಮಿಷನ್ ಪಕ್ಷ ಎಂದು ಮಸಿ ಬಳಿಯುತ್ತಿರುವ ಕಾಂಗ್ರೆಸ್
ವಿಧಾನಸಭೆ ಚುನಾವಣೆ ಸನ್ನಿಹಿತವಾಗುತ್ತಿದ್ದಂತೆ ರಾಜಕೀಯ ಪಕ್ಷಗಳು ಮತದಾರರನ್ನು ಓಲೈಸಲು ತಮ್ಮದೇ ರೀತಿಯಲ್ಲಿ ತಂತ್ರ-ಪ್ರತಿತಂತ್ರ ಹೆಣೆಯುತ್ತವೆ, ಬೆಂಗಳೂರಿನ ಬೀದಿ ಬೀದಿಗಳಲ್ಲಿ, ರಸ್ತೆಗಳ ಇಕ್ಕೆಲಗಳಲ್ಲಿ ಗೋಡೆಗಳಲ್ಲಿ ಜಾಹೀರಾತುಗಳನ್ನು ಪ್ರಕಟಿಸಲಾಗುತ್ತಿದೆ.

ಬೆಂಗಳೂರು: ವಿಧಾನಸಭೆ ಚುನಾವಣೆ ಸನ್ನಿಹಿತವಾಗುತ್ತಿದ್ದಂತೆ ರಾಜಕೀಯ ಪಕ್ಷಗಳು ಮತದಾರರನ್ನು ಓಲೈಸಲು ತಮ್ಮದೇ ರೀತಿಯಲ್ಲಿ ತಂತ್ರ-ಪ್ರತಿತಂತ್ರ ಹೆಣೆಯುತ್ತವೆ, ಬೆಂಗಳೂರಿನ ಬೀದಿ ಬೀದಿಗಳಲ್ಲಿ, ರಸ್ತೆಗಳ ಇಕ್ಕೆಲಗಳಲ್ಲಿ ಗೋಡೆಗಳಲ್ಲಿ ಜಾಹೀರಾತುಗಳನ್ನು ಪ್ರಕಟಿಸಲಾಗುತ್ತಿದೆ.
ಬೆಂಗಳೂರಿನ ಅನೇಕ ಕಡೆ ಬಿಜೆಪಿಯೇ ಭರವಸೆ ಎಂಬ ಶೀರ್ಷಿಕೆ ಹಾಕಿ ಅದರಡಿಯಲ್ಲಿ ಬೊಮ್ಮಾಯಿ ಸರ್ಕಾರದ ಯೋಜನೆಗಳು, ಕೆಲಸಗಳ ಬಗ್ಗೆ ಜಾಹೀರಾತು, ಕೇಂದ್ರ ಮತ್ತು ರಾಜ್ಯ ನಾಯಕರ ಫೋಟೋಗಳನ್ನು ಮುದ್ರಿಸಲಾಗಿದೆ. ಸರ್ಕಾರದ ಸಾಧನೆಗಳನ್ನು ಜನರಿಗೆ ತೋರಿಸುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ.
ಈ ಪೋಸ್ಟರ್ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಶೇಕಡಾ 40 ಕಮಿಷನ್/ಭ್ರಷ್ಟಾಚಾರ ಸರ್ಕಾರ ಎಂದು ಕಪ್ಪು ಬಣ್ಣದ ಶಾಯಿಯಲ್ಲಿ ಬರೆಯುತ್ತಿದ್ದಾರೆ. ಬೆಂಗಳೂರಿನಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಯ ಪೋಸ್ಟರ್ ಮೇಲೆ ಮಸಿ ಬಳೆಯುವ ಕೆಲಸ ಮಾಡುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


