ಹಿರಿಯ ನಟ ಅನಂತ್ ನಾಗ್ ಇಂದು ಸಂಜೆ ಬಿಜೆಪಿಗೆ ಸೇರ್ಪಡೆ
ಜೆ.ಎಚ್. ಪಟೇಲ್ ಸರ್ಕಾರದ ಅವಧಿಯಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ, ಶಾಸಕ, ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದ ಹಿರಿಯ ನಟ ಅನಂತ್ ನಾಗ್ ಇಂದು ಬುಧವಾರ ಭಾರತೀಯ ಜನತಾ ಪಕ್ಷ ಸೇರ್ಪಡೆಯಾಗಲಿದ್ದಾರೆ.

ಬೆಂಗಳೂರು: ಜೆ.ಎಚ್. ಪಟೇಲ್ ಸರ್ಕಾರದ ಅವಧಿಯಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ, ಶಾಸಕ, ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದ ಹಿರಿಯ ನಟ ಅನಂತ್ ನಾಗ್ ಇಂದು ಬುಧವಾರ ಭಾರತೀಯ ಜನತಾ ಪಕ್ಷ ಸೇರ್ಪಡೆಯಾಗಲಿದ್ದಾರೆ.
ಇಂದು ಸಂಜೆ ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಅವರು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಸಚಿವ ಮುನಿರತ್ನ, ಡಾ. ಸುಧಾಕರ್ ಹಾಗೂ ಇತರ ನಾಯಕರು ಕಾರ್ಯಕ್ರದಲ್ಲಿ ಹಾಜರಿರಲಿದ್ದಾರೆ.
ಇವರ ಜೊತೆಗೆ ಇಂದು ಕೆಲವರು ಕಾಂಗ್ರೆಸ್ ಮತ್ತು ಜೆಡಿಎಸ್ ನಿಂದ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಇನ್ನು ಎರಡು ತಿಂಗಳಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಖ್ಯಾತನಾಮರು, ಗಣ್ಯರು, ಕಲಾವಿದರು, ಮತ್ತು ಬೇರೆ ಪಕ್ಷದ ಅಸಂತುಷ್ಟ ನಾಯಕರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲು ರಾಜ್ಯದ ಮೂರು ಪ್ರಮುಖ ಪಕ್ಷಗಳು ಪ್ರಯತ್ನಿಸುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


