'ಸ್ಯಾಂಟ್ರೋ' ರವಿ ಪ್ರಕರಣ: ಗೃಹ ಸಚಿವ ಆರಗ ರಾಜೀನಾಮೆಗೆ ಕಿಮ್ಮನೆ ರತ್ನಾಕರ್ ಆಗ್ರಹ
ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಿರುದ್ಧ ಸರಣಿ ಆರೋಪಗಳನ್ನು ಮಾಡಿರುವ ಕಾಂಗ್ರೆಸ್ ಮುಖಂಡ ಕಿಮ್ಮನೆ ರತ್ನಾಕರ್ ಅವರು, ಸ್ಯಾಂಟ್ರೋ ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ಶಿವಮೊಗ್ಗ: ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಿರುದ್ಧ ಸರಣಿ ಆರೋಪಗಳನ್ನು ಮಾಡಿರುವ ಕಾಂಗ್ರೆಸ್ ಮುಖಂಡ ಕಿಮ್ಮನೆ ರತ್ನಾಕರ್ ಅವರು, ಸ್ಯಾಂಟ್ರೋ ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.
ಎನ್ಐಎ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2015ರಲ್ಲಿ ಮಾಲೀಕರ ಬಳಿ ರೂ. 10 ಲಕ್ಷ ಠೇವಣಿ ಇಟ್ಟು ಕಟ್ಟಡವನ್ನು ಬಾಡಿಗೆ ಪಡೆದುಕೊಂಡಿದ್ದೇವೆಂದು ಅಧಿಕಾರಿಗಳಿಗೆ ತಿಳಿಸಿದ್ದೇವೆ. ಡಿಸೆಂಬರ್ 2022 ರವರೆಗೆ ನಿಯಮಿತವಾಗಿ 1,000 ಬಾಡಿಗೆ ನೀಡಿದ್ದೇವೆ. ಮಾಲೀಕರು ಠೇವಣಿ ಮೊತ್ತವನ್ನು ಹಿಂದಿರುಗಿಸಿದ ನಂತರ ಕಟ್ಟಡವನ್ನು ಖಾಲಿ ಮಾಡುತ್ತೇವೆ. ನಮ್ಮ ನಡುವೆ ಮಾಲೀಕರು ಮತ್ತು ಬಾಡಿಗೆದಾರರ ಸಂಬಂಧ ಮಾತ್ರ ಇದೆ ಎಂದು ಹೇಳಿದ್ದಾರೆ.
ಕೆಲ ವಿದ್ಯುನ್ಮಾನ ಮಾಧ್ಯಮಗಳು ತಮ್ಮ ಮನೆ ಮೇಲೆ ದಾಳಿ ನಡೆದಿದೆ ಎಂದು ಸುಳ್ಳು ಹೇಳಿಕೆ ನೀಡಿದ್ದು, ಇದರ ಹಿಂದೆ ಬಿಜೆಪಿಯ ಕೈವಾಡವಿದೆ ಎಂದು ಆರೋಪಿಸಿದ್ದಾರೆ.
ಬಿಜೆಪಿಯವರು ರಾಜಕೀಯ ಮಾಡಲು ಪ್ರಯತ್ನಿಸುತ್ತಿದ್ದಾರೆ. “ಕೆಲವು ದೂರದರ್ಶನ ಚಾನೆಲ್‌ಗಳು ನನ್ನನ್ನು ಕುಕ್ಕರ್ ಹೊತ್ತೊಯ್ಯುತ್ತಿರುವಂತೆ ಬಿಂಬಿಸಿದವು. ನನ್ನ ಫೋಟೋ ಜೊತೆ ಶಾರಿಕ್ ಚಿತ್ರದ ಕ್ಲಿಪ್ಪಿಂಗ್ಸ್ ಇತ್ತು. ನಾನು ಯಾವತ್ತೂ ತೀರ್ಥಹಳ್ಳಿಯಿಂದ ಓಡಿ ಹೋಗಿಲ್ಲ, ಕಿಮ್ಮನೆ ಏನೆಂದು ಜನರಿಗೆ ಗೊತ್ತಿದೆ. ಬಿಜೆಪಿಯವರು ನಾಟಕವಾಡಲು ಯತ್ನಿಸುತ್ತಿದ್ದಾರೆ ಎಂದು ತಿಳಿಸಿದರು.
ಇದೇ ವೇಳೆ ಸ್ಯಾಂಟ್ರೋ ರವಿ ವಿಚಾರದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ನಂಬರ್ ಒನ್ ಆರೋಪಿಯಾಗಿದ್ದಾರೆಂದು ಕಿಮ್ಮನೆ ರತ್ನಾಕರ್ ಅವರು ಆರೋಪಿಸಿದ್ದಾರೆ.
ನಿಯೋಜನೆಗೊಳ್ಳಬೇಕಿರುವ ಅಧಿಕಾರಿಗಳ ಪಟ್ಟಿ ಸ್ಯಾಂಟ್ರೋ ರವಿ ಬಳಿ ಇದೆ. ಅದಕ್ಕೆ ಅನುಗುಣವಾಗಿ ಪೋಸ್ಟಿಂಗ್ ಮಾಡಲಾಗುತ್ತದೆ. ಈ ಪ್ರಕರಣದಲ್ಲಿ ಆರಗ ಜ್ಞಾನೇಂದ್ರ ಅವರನ್ನು ಬಂಧಿಸಬೇಕು, ಪಿಎಸ್ಐ ಹಗರಣದಲ್ಲಿ ಅವರು ಕೂಡ ಆರೋಪಿಯಾಗಿದ್ದರು, ಫೆಬ್ರವರಿ ಮೊದಲು ಆರಗ ರಾಜೀನಾಮೆ ನೀಡಲು ವಿಫಲವಾದರೆ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಸಿದ್ದಾರೆ.
ತೀರ್ಥಹಳ್ಳಿ ಮತ್ತು ಹೊಸನಗರ ತಾಲೂಕಿನ ಎಲ್ಲಾ ಪಿಡಬ್ಲ್ಯುಡಿ ಕಾಮಗಾರಿಗಳನ್ನು ಜ್ಞಾನೇಂದ್ರ ಅವರ ಸಂಬಂಧಿ ಸಿ ವಿ ಚಂದ್ರಶೇಖರ್ ಅವರಿಗೆ ವಹಿಸಲಾಗಿದೆ. ಸಚಿವರ ಪುತ್ರ ಲೇಔಟ್‌ಗಳನ್ನು ಮಾಡುತ್ತಿದ್ದು, ಅದಕ್ಕಾಗಿ ಸರ್ಕಾರಿ ಜಮೀನುಗಳನ್ನು ಖಾಸಗಿಯಾಗಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


