'ನಾ ನಾಯಕಿ' ಎಂದು ಸ್ವಯಂ ಘೋಷಣೆ ಮಾಡಿಕೊಳ್ಳುತ್ತಿರುವುದು ವಿಪರ್ಯಾಸ: ಕಾಂಗ್ರೆಸ್ ಕಾರ್ಯಕ್ರಮಕ್ಕೆ ಸಿಎಂ ವ್ಯಂಗ್ಯ
ಕಾಂಗ್ರೆಸ್ ಹಮ್ಮಿಕೊಂಡಿರುವ ‘ನಾ ನಾಯಕಿ’ ಕಾರ್ಯಕ್ರಮದ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ನಾ ನಾಯಕಿ ಎಂದು ಸ್ವಯಂ ಘೋಷಣೆ ಮಾಡಿಕೊಳ್ಳುವ ಪರಿಸ್ಥಿತಿ ಬಂದಿದ್ದು ವಿಪರ್ಯಾಸ ಎಂದು ವ್ಯಂಗ್ಯವಾಡಿದ್ದಾರೆ.

ಹುಬ್ಬಳ್ಳಿ: ಕಾಂಗ್ರೆಸ್ ಹಮ್ಮಿಕೊಂಡಿರುವ ‘ನಾ ನಾಯಕಿ’ ಕಾರ್ಯಕ್ರಮದ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ನಾ ನಾಯಕಿ ಎಂದು ಸ್ವಯಂ ಘೋಷಣೆ ಮಾಡಿಕೊಳ್ಳುವ ಪರಿಸ್ಥಿತಿ ಬಂದಿದ್ದು ವಿಪರ್ಯಾಸ ಎಂದು ವ್ಯಂಗ್ಯವಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಪ್ರಿಯಾಂಕ ಗಾಂಧಿ ಅವರ ನಾ ನಾಯಕಿ ಕಾರ್ಯಕ್ರಮಕ್ಕೆ ನಮ್ಮ ವಿರೋಧವಿಲ್ಲ. ಆದರೆ, ನಾ ನಾಯಕಿ ಎಂದು ಸ್ವಯಂ ಆಗಿ ಹೇಳಿಕೊಳ್ಳುವ ಸ್ಥಿತಿ ಅವರಿಗೆ ಬಂದಿದೆ. ಅವರನ್ನು ನಾಯಕಿ ಮಾಡಲು ಕರ್ನಾಟಕದ ಮಹಿಳೆಯರು ಸಿದ್ಧರಿಲ್ಲ ಎಂದು ಹೇಳಿದರು.
ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಕರೆ ಬಂದಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಸಿಎಂ ಹೇಳಿದರು. ಕರೆಯ ಹಿಂದೆ ಯಾರಿದ್ದಾರೆ, ಹಿನ್ನೆಲೆ ಏನು ಹಾಗೂ ಯಾರು ಮಾರ್ಗದರ್ಶನ ನೀಡಿದ್ದಾರೆ ಎಂಬುದು ಮುಖ್ಯವಾಗಿದ್ದು, ಅದನ್ನು ಪತ್ತೆ ಹಚ್ಚುವ ಕೆಲಸವನ್ನು ಪೊಲೀಸರು ಮಾಡುತ್ತಿದ್ದಾರೆ ಎಂದರು.
ಯುವ ಜನೋತ್ಸವವನ್ನು, ಯುವ ವಿನಾಶೋತ್ಸವ' ಎಂಬ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಟ್ವೀಟ್ ಕುರಿತು ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ನವರದ್ದು ಯಥಾ ಬುದ್ಧಿ, ತಥಾ ಮಾತುಗಳು. ಅವರಿಗೆ ವಿನಾಶದ ಕನಸುಗಳು, ಅದರಲ್ಲೂ ಕಾಂಗ್ರೆಸ್ ವಿನಾಶದ ಕನಸುಗಳು ಬೀಳುತ್ತಿವೆ. ಎಲ್ಲದರಲ್ಲೂ ಅವರು ವಿನಾಶವನ್ನೇ ನೋಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಯಾವುದೇ ಒಳ್ಳೆಯ ಕೆಲಸವನ್ನು ಮೆಚ್ಚುವುದು ಕಾಂಗ್ರೆಸ್ ನವರಿಗೆ ಗೊತ್ತಿಲ್ಲ. ಇತ್ತೀಚೆಗೆ ಅವರ ಭಾಷೆ, ನಡವಳಿಕೆ ಹಾಗೂ ಚಿಂತನೆ ಕೀಳುಮಟ್ಟದಿಂದ ಕೂಡಿವೆ. ದೇಶ ಹಾಗೂ ರಾಜ್ಯದ ಪ್ರಗತಿ ವಿಚಾರದಲ್ಲಿ ತೀರಾ ತಳಮಟ್ಟಕ್ಕಿಳಿಯುತ್ತಿರುವುದು, ಅವರ ಹತಾಶೆಯ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


