ಧಾರವಾಡದಲ್ಲಿ ಆಪರೇಷನ್ ಹಸ್ತ ಚುರುಕು: ಯಡಿಯೂರಪ್ಪ ಸಂಬಂಧಿಗೆ ಜಗದೀಶ್ ಶೆಟ್ಟರ್ ಗಾಳ!
ಲೋಕಸಭೆ ಚುನಾವಣೆ ಹಿನ್ನೆಲೆ ಸದ್ದಿಲ್ಲದೆ ಆಪರೇಷನ್ ಆರಂಭಿಸಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಿಜೆಪಿ ಪ್ರಮುಖ ನಾಯಕರನ್ನು ಕಾಂಗ್ರೆಸ್ನತ್ತ ಸೆಳೆಯುತ್ತಿದ್ದಾರೆ

ಧಾರವಾಡ: ಲೋಕಸಭೆ ಚುನಾವಣೆ ಹಿನ್ನೆಲೆ ಸದ್ದಿಲ್ಲದೆ ಆಪರೇಷನ್ ಆರಂಭಿಸಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಿಜೆಪಿ ಪ್ರಮುಖ ನಾಯಕರನ್ನು ಕಾಂಗ್ರೆಸ್ನತ್ತ ಸೆಳೆಯುತ್ತಿದ್ದಾರೆ. ಶೆಟ್ಟರ್ ಜೊತೆ ಒಂದು ಸುತ್ತಿನ ಮಾತುಕತೆ ಮಾಡಿರುವ ಮಾಜಿ ಶಾಸಕ ಚಿಕ್ಕನಗೌಡರ್, ನಿನ್ನೆ ತಮ್ಮ ನಿವಾಸದಲ್ಲಿ ಕರೆದ ಆಪ್ತರ ಸಭೆಯಲ್ಲಿ ಕಾಂಗ್ರೆಸ್ ಸೇರುವುದಾಗಿ ಘೋಷಣೆ ಮಾಡಿದ್ದಾರೆ.
ಮಾಜಿ ಸಿಎಂ ಯಡಿಯೂರಪ್ಪ ಸಂಬಂಧಿ ಚಿಕ್ಕನಗೌಡರ್‌ಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪಿತ್ತು. ಹೀಗಾಗಿ ಬಿಜೆಪಿಗೆ ಗುಡ್‌ಬೈ ಹೇಳಿದ್ದ ಅವರು ಪಕ್ಷೇತರರಾಗಿ ಸ್ಪರ್ಧಿಸಿ ಸೋಲನ್ನಪ್ಪಿದ್ದರು. ಈಗ ಬಿಜೆಪಿಗೆ ಶಾಕ್ ಕೊಡಲು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಇದು ಧಾರವಾಡ ಜಿಲ್ಲೆಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.
ಮಾಜಿ ಸಿಎಂ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಅಪಾರ ಬೆಂಬಲಿಗರೊಂದಿಗೆ ಕೈ ಹಿಡಿಯುವುದಾಗಿ ಘೋಷಿಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಆಪರೇಷನ್ ಹಸ್ತ ಚುರುಕು ಪಡೆದಿದ್ದು ಧಾರವಾಡ ಜಿಲ್ಲೆಯಲ್ಲಿ ರಾಜಕೀಯ ಸಂಚಲನ ಮೂಡಿಸಿದೆ.
ಈಗ ತಮ್ಮೆಲ್ಲಾ ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರ್ಪಡೆಯಾಗಲು ಸಜ್ಜಾಗಿದ್ದಾರೆ. ಅದರಗುಂಚಿಯಲ್ಲಿ ಬೆಂಬಲಿಗರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಸಭೆಯನ್ನು ಉದ್ದೇಶಿಸಿ ಮಾತನಾಡಿರುವ ಅವರು, ನಾನು ಸ್ವಾಭಿಮಾನದಿಂದ ಪಕ್ಷೇತರವಾಗಿ ಚುನಾವಣೆ ಸ್ಪರ್ಧಿಸಿದ್ದೆ.
ಹಣದ ಮುಂದೆ ಸ್ವಾಭಿಮಾನ ಸೋತಿದೆ. ಕಾದು ನೋಡಿ ಕುಂದಗೋಳದಲ್ಲಿ ಮಧ್ಯಂತರ ಚುನಾವಣೆ ಆಗುತ್ತೆ. ಮುಂಬರುವ ಚುನಾವಣೆಗಳಲ್ಲಿ ನಮ್ಮ ಶಕ್ತಿ ಪ್ರದರ್ಶನ ಮಾಡೋಣ ಎನ್ನುವ ಮೂಲಕ ಕ್ಷೇತ್ರದಲ್ಲಿ ರಾಜಕೀಯ ಸಂಚಲನ ಮೂಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


