ಎಎಪಿ ನೂತನ ರಾಜ್ಯಾಧ್ಯಕ್ಷರಾಗಿ ಮುಖ್ಯಮಂತ್ರಿ ಚಂದ್ರು, ರಾಷ್ಟ್ರೀಯ ಜಂಟಿ ಕಾರ್ಯದರ್ಶಿಯಾಗಿ ಪೃಥ್ವಿರೆಡ್ಡಿ ನೇಮಕ!
ಆಮ್ ಆದ್ಮಿ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಹಿರಿಯ ನಟ ಹಾಗೂ ರಾಜಕಾರಣಿ ಮುಖ್ಯಮಂತ್ರಿ ಚಂದ್ರು ಅವರನ್ನು ನೇಮಕ ಮಾಡಲಾಗಿದೆ. ಈವರೆಗೂ ರಾಜ್ಯ ಘಟಕದ ಅಧ್ಯಕ್ಷರಾಗಿದ್ದ ಪೃಥ್ವಿ ರೆಡ್ಡಿ ಅವರನ್ನು ಎಎಪಿ ರಾಷ್ಟ್ರೀಯ ಜಂಟಿ ಕಾರ್ಯದರ್ಶಿಯಾಗಿ, ನೇಮಕ ಮಾಡಲಾಗಿದೆ.

ಬೆಂಗಳೂರು: ಆಮ್ ಆದ್ಮಿ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಹಿರಿಯ ನಟ ಹಾಗೂ ರಾಜಕಾರಣಿ ಮುಖ್ಯಮಂತ್ರಿ ಚಂದ್ರು ಅವರನ್ನು ನೇಮಕ ಮಾಡಲಾಗಿದೆ. ಈವರೆಗೂ ರಾಜ್ಯ ಘಟಕದ ಅಧ್ಯಕ್ಷರಾಗಿದ್ದ ಪೃಥ್ವಿ ರೆಡ್ಡಿ ಅವರನ್ನು ಎಎಪಿ ರಾಷ್ಟ್ರೀಯ ಜಂಟಿ ಕಾರ್ಯದರ್ಶಿಯಾಗಿ, ನೇಮಕ ಮಾಡಲಾಗಿದೆ.
ರಾಜ್ಯ ಸಂಘಟನಾ ಕಾರ್ಯದರ್ಶಿಗಳಾಗಿ ಬಿಟಿ ನಾಗಣ್ಣ ಮತ್ತು ಅರ್ಜುನ್ ಹಲಗಿಗೌಡ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಪೃಥ್ವಿರೆಡ್ಡಿ, ಪಕ್ಷದ ನೂತನ ರಾಜ್ಯಾಧ್ಯಕ್ಷ ನೇಮಕವಾದ ಮುಖ್ಯಮಂತ್ರಿ ಚಂದ್ರು ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಅದೇ ರೀತಿ ಇತ್ತೀಚಿಗೆ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಖಾತೆ ತೆರೆಯಬೇಕೆಂಬ ಉದ್ದೇಶದೊಂದಿಗೆ ರಾಜ್ಯದ ನಾನಾ ಕಡೆಗಳಲ್ಲಿ ಸಂಚರಿಸಿ ಪಕ್ಷ ಸಂಘಟನೆಗೆ ಪ್ರಯತ್ನಿಸಿದ ಪೃಥ್ವಿ ರೆಡ್ಡಿ ಅವರನ್ನು ಎಎಪಿ ರಾಷ್ಟ್ರೀಯ ಜಂಟಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


