ರಾಜಕೀಯ

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲು ಖಚಿತ: ಸಿಎಂ ಸಿದ್ದರಾಮಯ್ಯ

2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಸೋಲುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲು ಖಚಿತ: ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Published On :

ಬೆಂಗಳೂರು: 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಸೋಲುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಬೆಂಗಳೂರಿನಲ್ಲಿ ನಡೆಯುತ್ತಿರುವ ವಿರೋಧ ಪಕ್ಷಗಳ ಸಭೆಯಲ್ಲಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ವಿರುದ್ಧ ಹೋರಾಡುವ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲಾಗುತ್ತಿದೆ ಎಂದು ಹೇಳಿದರು.

ಇದೇ ವೇಳೆ ಒಂದು ಪಕ್ಷದ ವಿರುದ್ಧ ಹೋರಾಡಲು ವಿರೋಧ ಪಕ್ಷಗಳು ಒಂದಾಗುತ್ತಿವೆ ಎಂಬ ಬಿಜೆಪಿ ವ್ಯಂಗ್ಯ ಕುರಿತು ಪ್ರತಿಕ್ರಿಯಿಸಿ, ಬಿಜೆಪಿಯನ್ನು ಸೋಲಿಸಬಹುದು ಎಂಬುದಕ್ಕೆ ಇತ್ತೀಚೆಗೆ ಮುಕ್ತಾಯವಾದ ಕರ್ನಾಟಕ ವಿಧಾನಸಭಾ ಚುನಾವಣೆ ಸಾಕ್ಷಿಯಾಗಿದೆ. ನರೇಂದ್ರ ಮೋದಿ ಅವರು ಕರ್ನಾಟಕದಲ್ಲಿ ಚುನಾವಣಾ ಪ್ರಚಾರದ ವೇಳೆ ಯಾವ ಕ್ಷೇತ್ರಕ್ಕೆ ಭೇಟಿ ನೀಡಿದ್ದರೋ ಅಲ್ಲಿ ಬಿಜೆಪಿ ಸೋತಿದೆ. ಬಿಜೆಪಿಯ ಅವನತಿ ಕರ್ನಾಟಕದಿಂದ ಪ್ರಾರಂಭವಾಗಿದೆ, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಸೋಲುವುದು ಖಚಿತ ಎಂದು ತಿಳಿಸಿದರು.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಆರ್ಥಿಕತೆಯನ್ನು ಹಾಳು ಮಾಡಿದ್ದು, ಬಿಜೆಪಿಯ ಕೋಮುವಾದಿ ರಾಜಕಾರಣದಿಂದ ಜನರು ಆತಂಕದಲ್ಲಿ ಬದುಕುತ್ತಿದ್ದಾರೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲು ಖಚಿತ: ಸಿಎಂ ಸಿದ್ದರಾಮಯ್ಯ