ಪ್ರಧಾನಿ ಮೋದಿ ಭೇಟಿ ಮಾಡಿದ ತೇಜಸ್ವಿನಿ ಅನಂತ್ ಕುಮಾರ್: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ
ಪಕ್ಷ ಬಿಡುವ ಮಾತೇ ಇಲ್ಲ ಎಂದು ಊಹಾಪೋಹಗಳಿಗೆ ತೆರೆ ಎಳೆದಿದ್ದ ಬಿಜೆಪಿಯ ರಾಜ್ಯ ಉಪಾಧ್ಯಕ್ಷೆ ತೇಜಸ್ವಿನಿ ಅನಂತ್ ಕುಮಾರ್ ಅವರು, ಇದೀಗ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ದೆಹಲಿಯ ಸಂಸತ್ ಭವನದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ನವದೆಹಲಿ/ಬೆಂಗಳೂರು: ಪಕ್ಷ ಬಿಡುವ ಮಾತೇ ಇಲ್ಲ ಎಂದು ಊಹಾಪೋಹಗಳಿಗೆ ತೆರೆ ಎಳೆದಿದ್ದ ಬಿಜೆಪಿಯ ರಾಜ್ಯ ಉಪಾಧ್ಯಕ್ಷೆ ತೇಜಸ್ವಿನಿ ಅನಂತ್ ಕುಮಾರ್ ಅವರು, ಇದೀಗ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ದೆಹಲಿಯ ಸಂಸತ್ ಭವನದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಕೆಲ ದಿನಗಳಿಂದ ರಾಜ್ಯ ಬಿಜೆಪಿಯ ಉಪಾಧ್ಯಕ್ಷೆ ತೇಜಸ್ವಿನಿ ಅನಂತ್ ಕುಮಾರ್ ಬಿಜೆಪಿಯ ನಡೆಗಳಿಂದ ನೊಂದಿದ್ದಾರಾ? ಬಿಜೆಪಿ ಬಿಟ್ಟು ಬೇರೊಂದು ಪಕ್ಷಕ್ಕೆ ಹಾರುತ್ತಾರಾ ಎಂೂ ಊಹಾಪೋಹಗಳು ಹರಿದಾಡುತ್ತಿದ್ದವು. ಈ ಊಹಾಪೋಹಗಳಿಗೆ ಟ್ವೀಟ್ ಮೂಲಕ ಬ್ರೇಕ್ ಹಾಕಿದ್ದರು.
ಇದರ ಬೆನ್ನಲ್ಲೇ ಪ್ರಧಾನಿ ಮೋದಿಯವರನ್ನು ಗುರುವಾರ ಭೇಟಿ ಮಾಡಿದ್ದು, ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲಗಳನ್ನು ಮೂಡಿಸಿದೆ.
ಮೋದಿಯವರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ತೇಜಸ್ವಿನಿ ಅವರು, ಕೆಲ ಸಭೆಯಲ್ಲಿ ಪಾಲ್ಗೊಳ್ಳಬೇಕಿತ್ತು. ಹೀಗಾಗಿ ದೆಹಲಿಗೆ ಬಂದಿದ್ದೆ. ಇದೇ ವೇಳೆ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನೂ ಒಂದೆರಡು ದಿನಗಳಲ್ಲಿ ಭೇಟಿ ಮಾಡುತ್ತೇನೆಂದು ಹೇಳಿದರು.
ಸಭೆಯ ಹಿಂದೆ ಕೆಲ ರಾಜಕೀಯ ವಿಚಾರಗಳೂ ಇವೆ. ಸೂಕ್ತ ಸಮಯದಲ್ಲಿ ಎಲ್ಲದರ ಕುರಿತು ಮಾಹಿತಿ ನೀಡುತ್ತೇನೆಂದು ತಿಳಿಸಿದರು.
ವಿಧಾನಸಭಾ ಚುನಾವಣೆ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿದ್ದ ಪ್ರಧಾನಿ ಮೋದಿಯವರು, ಈ ವೇಳೆ ತೇಜಸ್ವಿನಿಯವರನ್ನು ದೆಹಲಿಗೆ ಬಂದು ಭೇಟಿ ಮಾಡುವಂತೆ ಆಹ್ವಾನಿಸಿದ್ದರು. ಹೀಗಾಗಿ ಕುಟುಂಬ ಸದಸ್ಯರೊಂದಿಗೆ ಮೋದಿಯವರನ್ನು ಭೇಟಿ ಮಾಡಿದ್ದಾರೆಂದು ಬಿಜೆಪಿ ಮೂಲಗಳು ಮಾಹಿತಿ ನೀಡಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


