ವಿರೋಧ ಪಕ್ಷದ ನಾಯಕನಿಲ್ಲದೆ 16ನೇ ವಿಧಾನಸಭೆಯ ಮೊದಲ ಅಧಿವೇಶನಕ್ಕೆ ತೆರೆ
16ನೇ ವಿಧಾನಸಭೆಯ ಮೊದಲ ಅಧಿವೇಶನಕ್ಕೆ ಇಂದು ತೆರೆ ಬಿದ್ದಿದೆ. ಈ ಅಧಿವೇಶನದಲ್ಲಿ ನೂತನ ಕಾಂಗ್ರೆಸ್ ಸರ್ಕಾರ ಹೊಸ ಬಜೆಟ್ ಮಂಡಿಸಿದೆ. ಹಾಗೆಯೇ ವಿರೋಧ ಪಕ್ಷದ ನಾಯಕನಿಲ್ಲದೆ ನಡೆದ ಅಧಿವೇಶನ ಹೊಸ ಇತಿಹಾಸಕ್ಕೂ ಕಾರಣವಾಗಿದೆ.

ಬೆಂಗಳೂರು: 16ನೇ ವಿಧಾನಸಭೆಯ ಮೊದಲ ಅಧಿವೇಶನಕ್ಕೆ ಇಂದು ತೆರೆ ಬಿದ್ದಿದೆ. ಈ ಅಧಿವೇಶನದಲ್ಲಿ ನೂತನ ಕಾಂಗ್ರೆಸ್ ಸರ್ಕಾರ ಹೊಸ ಬಜೆಟ್ ಮಂಡಿಸಿದೆ. ಹಾಗೆಯೇ ವಿರೋಧ ಪಕ್ಷದ ನಾಯಕನಿಲ್ಲದೆ ನಡೆದ ಅಧಿವೇಶನ ಹೊಸ ಇತಿಹಾಸಕ್ಕೂ ಕಾರಣವಾಗಿದೆ.
16ನೇ ವಿಧಾನಸಭೆಯ ಮೊದಲ ಅಧಿವೇಶನ ಜುಲೈ 3 ರಂದು ರಾಜ್ಯಪಾಲರು ಜಂಟಿ ಅಧಿವೇಶವನ್ನುದ್ದೇಶಿಸಿ ಭಾಷಣ ಮಾಡುವ ಮೂಲಕ ಆರಂಭವಾಗಿತ್ತು. ಜುಲೈ 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2023-24ನೇ ಸಾಲಿನ ಬಜೆಟ್ ನ್ನು ವಿಧಾನಸಭೆಯಲ್ಲಿ ಮಂಡಿಸಿದ್ದರು.
ಈ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪ, ರಾಜ್ಯಪಾಲರ ಭಾಷಣದ ವಂದನಾ ನಿರ್ಣಯ, ಬಜೆಟ್ ಮೇಲಿನ ಚರ್ಚೆ, ಬಜೆಟ್ ಅಂಗೀಕಾರ ಸೇರಿದಂತೆ ಹಲವು ಕಲಾಪಗಳು ನಡೆದವು. ರಾಜ್ಯ ಅನುಸೂಚಿತ ಜಾತಿಗಳು ಮತ್ತು ಬುಡಕಟ್ಟುಗಳ ಕೆಲವು ಭೂಮಿಗಳ ವರ್ಗಾವಣೆ ನಿಷೇಧ ತಿದ್ದುಪಡಿ ವಿಧೇಯಕ -2023, ರಾಜ್ಯ ಅಗ್ನಿಶಾಮಕ ತುರ್ತು ಸೇವೆಗಳು ಮತ್ತು, ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ತಿದ್ದುಪಡಿ ವಿಧೇಯಕ ಸೇರಿದಂತೆ ಹಲವು ವಿಧೇಯಕಗಳು ಅಂಗೀಕಾರಗೊಂಡವು.
ಇದನ್ನೂ ಓದಿ: ಹಿಂದೆ ಗುರುವಿಲ್ಲ- ಮುಂದೆ ಗುರಿಯಿಲ್ಲದ ಬಿಜೆಪಿ; ಪ್ರತಿಪಕ್ಷ ನಾಯಕನಿಲ್ಲದೆ ಅಧಿವೇಶನ ಮುಕ್ತಾಯ; ಇತಿಹಾಸದಲ್ಲಿ ಹೊಸ ದಾಖಲೆ!
ವಿಧಾನಮಂಡಲ ಇತಿಹಾಸದಲ್ಲೇ ವಿಪಕ್ಷ ನಾಯಕನಿಲ್ಲದೆ ನಡೆದ ಅಧಿವೇಶನ ಇದಾಗಿದೆ. ವಿರೋಧ ಪಕ್ಷವಾದ ಬಿಜೆಪಿ ತನ್ನ ನಾಯಕನನ್ನು ಅಧಿವೇಶನ ಮುಗಿಯುವವರೆಗೂ ಆಯ್ಕೆ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ. ಈ ವಿಚಾರವನ್ನು ಮುಂದಿಟ್ಟುಕೊಂಡು ಆಡಳಿತಾರೂಢ ಕಾಂಗ್ರೆಸ್ ಸದಸ್ಯರು ಬಿಜೆಪಿಯನ್ನು ಅಧಿವೇಶನದುದ್ದಕ್ಕೂ ಲೇವಡಿ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


