ರಾಜಕೀಯ

ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ: ಸಿ.ಟಿ.ರವಿ

ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಅದನ್ನು ಯಾವಾಗ ಮತ್ತು ಯಾರಿಗೆ ನೀಡಬೇಕು ಎಂಬುದನ್ನು ರಾಷ್ಟ್ರೀಯ ನಾಯಕರು ನಿರ್ಧರಿಸುತ್ತಾರೆ ಎಂದು ಬಿಜೆಪಿ ಹಿರಿಯ ಮುಖಂಡ ಸಿ.ಟಿ.ರವಿ ಅವರು ಭಾನುವಾರ ಹೇಳಿದ್ದಾರೆ.

ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ: ಸಿ.ಟಿ.ರವಿ
ಸಿ.ಟಿ ರವಿ
Published On :

ಬೆಂಗಳೂರು: ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಅದನ್ನು ಯಾವಾಗ ಮತ್ತು ಯಾರಿಗೆ ನೀಡಬೇಕು ಎಂಬುದನ್ನು ರಾಷ್ಟ್ರೀಯ ನಾಯಕರು ನಿರ್ಧರಿಸುತ್ತಾರೆ ಎಂದು ಬಿಜೆಪಿ ಹಿರಿಯ ಮುಖಂಡ ಸಿ.ಟಿ.ರವಿ ಅವರು ಭಾನುವಾರ ಹೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಅವರ ಸ್ಥಾನಕ್ಕೆ ಒಕ್ಕಲಿಗ ಸಿಟಿ ರವಿ ಅವರನ್ನು ನೇಮಕ ಮಾಡಲಾಗುತ್ತದೆ ಎಂಬ ವರದಿಗಳ ನಡುವೆಯೇ, ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಮಾಜಿ ಸಚಿವ ಹೇಳಿದ್ದಾರೆ.

ಪ್ರಸ್ತುತ ನಾನು ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದೇನೆ. ಭವಿಷ್ಯವು ಕೇವಲ ನಿರೀಕ್ಷೆ ಮತ್ತು ಆಕಾಂಕ್ಷೆಯಾಗಿದೆ. ಆದರೆ ಭವಿಷ್ಯದ ಬಗ್ಗೆ ನನಗೆ ಯಾವುದೇ ಖಚಿತ ಮಾಹಿತಿ ಇಲ್ಲ ಎಂದು ಸಿಟಿ ರವಿ ಅವರು ತಿಳಿಸಿದ್ದಾರೆ.

ರವಿ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಕೈಬಿಟ್ಟು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗುತ್ತಿದೆಯೇ ಎಂಬ ವರದಿಗಾರರ ಪ್ರಶ್ನೆ ಉತ್ತರಿಸಿದ ಸಿಟಿ ರವಿ, ರಾಜ್ಯಾಧ್ಯಕ್ಷ ಸ್ಥಾನ ದೊಡ್ಡ ಹುದ್ದೆ. ಅದನ್ನು ಕೇಳಿ ಪಡೆಯಲು ಸಾಧ್ಯವಿಲ್ಲ. ಯಾರಿಗೆ ಯಾವಾಗ ಯಾವ ಜವಾಬ್ದಾರಿ ಕೊಡಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.