ವಿಧಾನ ಪರಿಷತ್ ನ ಮೂರು ಸ್ಥಾನಗಳಿಗೆ ಜೂನ್ 30ರಂದು ಉಪ ಚುನಾವಣೆ
ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ವಿಧಾನ ಪರಿಷತ್ನ ಮೂರು ಸ್ಥಾನಗಳಿಗೆ ಮಂಗಳವಾರ ಉಪ ಚುನಾವಣೆಯ ದಿನಾಂಕ ಪ್ರಕಟಿಸಿದ್ದು, ಜೂನ್ 30ರಂದು ಮತದಾನ ನಡೆಯಲಿದೆ ಮತ್ತು ಅಂದೇ ಫಲಿತಾಂಶ ಸಹ ಪ್ರಕಟವಾಗಲಿದೆ.

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ವಿಧಾನ ಪರಿಷತ್ನ ಮೂರು ಸ್ಥಾನಗಳಿಗೆ ಮಂಗಳವಾರ ಉಪ ಚುನಾವಣೆಯ ದಿನಾಂಕ ಪ್ರಕಟಿಸಿದ್ದು, ಜೂನ್ 30ರಂದು ಮತದಾನ ನಡೆಯಲಿದೆ ಮತ್ತು ಅಂದೇ ಫಲಿತಾಂಶ ಸಹ ಪ್ರಕಟವಾಗಲಿದೆ.
ಲಕ್ಷ್ಮಣ ಸವದಿ, ಆರ್ ಶಂಕರ್ ಹಾಗೂ ಬಾಬುರಾವ್ ಚಿಂಚನಸೂರ್ ಅವರ ರಾಜೀನಾಮೆಯಿಂದ ತೆರವಾದ ಮೂರು ಸ್ಥಾನಗಳಿಗೆ ಚುನಾವಣಾ ಆಯೋಗ ಇಂದು ಉಪ ಚುನಾವಣೆ ಘೋಷಿಸಿದೆ.
ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯಲಿರುವ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂನ್ 20 ಕೊನೆಯ ದಿನವಾಗಿದೆ.
ಜೂನ್ 13 ರಂದು ಉಪ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆಗೆ ಜೂನ್ 20 ಕೊನೆಯ ದಿನವಾಗಿದೆ. ಜೂನ್ 21 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಜೂನ್ 23 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ ಎಂದು ಆಯೋಗ ತಿಳಿಸಿದೆ.
ಲಕ್ಷ್ಮಣ ಸವದಿ ಹಾಗೂ ಬಾಬುರಾವ್ ಚಿಂಚನಸೂರ್ ಅವರು ವಿಧಾನಸಭೆ ಚುನಾವಣೆಗೂ ಮುನ್ನ ಪರಿಷತ್ ಸ್ಥಾನಕ್ಕೆ ಹಾಗೂ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


