ರಿಟೈರ್ಡ್ ಹರ್ಟ್ ಆಗಿರುವ ಸಿಟಿ ರವಿ ತಿರುಗಿ ಬಿದ್ದಿದ್ದಾರೆ; ಕುಮಾರಸ್ವಾಮಿ ತಲೆ ಸವರಿಕೊಂಡು ನಗುತ್ತಿದ್ದಾರಂತೆ; ನೇಣುಗಂಬ ಯಾರಿಗೆ?
'ಅಮಿತ್ ಷಾರವರನ್ನೋ? ಬಿ ಎಲ್ ಸಂತೋಷರನ್ನೊ? ಪ್ರಹ್ಲಾದ್ ಜೋಶಿಯವರನ್ನೋ ? ಮೋದಿಯವರನ್ನೋ? ಬೊಮ್ಮಾಯಿಯವರನ್ನೋ? ಹೊಣೆ ಯಾರು, ನೇಣುಗಂಬ ಯಾರಿಗೆ? ಸೋಲಿನ ನಾಯಕತ್ವ ವಹಿಸಿಕೊಳ್ಳುವವರು ಯಾರು? ಬಿಜೆಪಿಯಿಂದ ಉತ್ತರ ನಿರೀಕ್ಷಿಸಬಹುದೇ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಹೊಸಬರಿಗೆ ಟಿಕೆಟ್ ಕೊಡಿ ಎಂದು ಬಿಜೆಪಿ ಹೈಕಮಾಂಡ್‌ಗೆ ಯಾರು ಐಡಿಯಾ ಕೊಟ್ಟಿದ್ದಾರೋ ಗೊತ್ತಿಲ್ಲ. ಅವರನ್ನು ನೇಣಿಗೆ ಬೇಕಾದರೂ ಹಾಕಿ, ಕಾಲನ್ನಾದರೂ ಕಡಿಯಿರಿ ಎಂಬ ಸಂಸದ ರಮೇಶ್ ಜಿಗಜಿಣಗಿ ಹೇಳಿಕೆಗೆ ಕಾಂಗ್ರೆಸ್ ಟಾಂಗ್ ನೀಡಿದೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಹೊಸಬರಿಗೆ ಟಿಕೆಟ್ ನೀಡಿದವರನ್ನು ನೇಣಿಗೆ ಹಾಕಿ ಅಂದಿದ್ದಾರೆ ಬಿಜೆಪಿ ಸಂಸದ. ಈಗ ಯಾರನ್ನು ನೇಣಿಗೆ ಹಾಕುವಿರಿ?'' ಎಂದು ಕಾಂಗ್ರೆಸ್ ಬಿಜೆಪಿಯನ್ನು ಪ್ರಶ್ನೆ ಮಾಡಿದೆ.
'ಅಮಿತ್ ಷಾರವರನ್ನೋ? ಬಿ ಎಲ್ ಸಂತೋಷರನ್ನೊ? ಪ್ರಹ್ಲಾದ್ ಜೋಶಿಯವರನ್ನೋ? ಮೋದಿಯವರನ್ನೋ? ಬೊಮ್ಮಾಯಿಯವರನ್ನೋ? ಹೊಣೆ ಯಾರು, ನೇಣುಗಂಬ ಯಾರಿಗೆ? ಸೋಲಿನ ನಾಯಕತ್ವ ವಹಿಸಿಕೊಳ್ಳುವವರು ಯಾರು? ಬಿಜೆಪಿಯಿಂದ ಉತ್ತರ ನಿರೀಕ್ಷಿಸಬಹುದೇ?' ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಬಿಜೆಪಿಯಲ್ಲಿ ಸೋಲಿನ ಅವಲೋಕನ ಚೆನ್ನಾಗಿಯೇ ನಡೆಯುತ್ತಿದೆ, ಬೊಮ್ಮಾಯಿ ಹಾಗೂ ಬಿ.ಎಸ್ ಯಡಿಯೂರಪ್ಪ ಅವರನ್ನು ಪರೋಕ್ಷವಾಗಿ ಟಾರ್ಗೆಟ್ ಮಾಡುತ್ತಿರುವ ಪ್ರತಾಪ್ ಸಿಂಹ ಹಾಗೂ ಸಿ.ಟಿ ರವಿ ಅವರ ಹೇಳಿಕೆಗಳ ಹಿಂದಿರುವುದು ಮತ್ತದೇ ಜೋಶಿ, ಸಂತೋಷ್ ಜೋಡಿ. ಸೋಲಿನ ನಂತರ ನಾಪತ್ತೆಯಾಗಿರುವ ಈ ಜೋಡಿ ತೆರೆಯ ಹಿಂದೆ ನಿಂತು ಕಲ್ಲು ಹೊಡೆಯುವ ಪ್ರಯತ್ನ ಮಾಡುತ್ತಿದ್ದಾರೆ.
ಇದನ್ನೂ ಓದಿ: 'ಹೊಸಬರಿಗೆ ಟಿಕೆಟ್' ಐಡಿಯಾ ಕೊಟ್ಟವರನ್ನು ನೇಣಿಗೆ ಹಾಕಿ: ಆ ಹುಡುಗ, ಆ ಹುಡುಗಿ ಅವರೇನು ನಾಯಕರೇ- ರಮೇಶ ಜಿಗಜಿಣಗಿ
ರಿಟೈರ್ಡ್ ಹರ್ಟ್ ಆಗಿರುವ ಸಿಟಿ ರವಿ ಈಗ ಸ್ವಪಕ್ಷದ ವಿರುದ್ಧವೇ ತಿರುಗಿ ಬಿದ್ದಿದ್ದಾರೆ, ಅವರ ಅರಣ್ಯ ರೋಧನಕ್ಕೆ ಪ್ರತಾಪ್ ಸಿಂಹ ದನಿ ಜೋಡಿಸಿದ್ದಾರೆ. ಇಬ್ಬರಿಗೂ ದಮ್ಮು ತಾಕತ್ತು ಇದ್ದರೆ ಅಡ್ಜಸ್ಟಮೆಂಟ್ ಮಾಡಿಕೊಂಡ ತಮ್ಮ ಪಕ್ಷದ ನಾಯಕರ ಹೆಸರು ಹೇಳಿ ಆರೋಪಿಸಲಿ. ಅಂದಹಾಗೆ ಬಿಜೆಪಿಯೊಂದಿಗೆ ಅಡ್ಜಸ್ಟ್ ಮಾಡಿಕೊಂಡಿದ್ದ ಕುಮಾರಸ್ವಾಮಿ ತಲೆ ಸವರಿಕೊಂಡು ನಗುತ್ತಿದ್ದಾರಂತೆ ಅಲ್ಲವೇ ಎಂದು ಟ್ವೀಟ್ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


