ಅಕ್ಕಿ ವಿಚಾರದಲ್ಲಿ ಕಾಂಗ್ರೆಸ್ ಕೆಟ್ಟ ರಾಜಕಾರಣ ಮಾಡುವುದು ಬೇಡ: ಸಿ.ಟಿ.ರವಿ
ಅಕ್ಕಿ ವಿಚಾರದಲ್ಲಿ ಕಾಂಗ್ರೆಸ್ ಕೆಟ್ಟ ರಾಜಕಾರಣ ಮಾಡುವುದು ಬೇಡ ಎಂದು ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ. ಕಾಂಗ್ರೆಸ್ ತನ್ನ ವೈಫಲ್ಯ ಮುಚ್ಚಿಕೊಳ್ಳಲು, ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿಯನ್ನು ಎಳೆದು ತರಲು ಹರ ಸಾಹಸ ಮಾಡುತ್ತಿದೆ ಎಂದು ಟೀಕಿಸಿದ್ದಾರೆ.

ಬೆಂಗಳೂರು: ಅಕ್ಕಿ ವಿಚಾರದಲ್ಲಿ ಕಾಂಗ್ರೆಸ್ ಕೆಟ್ಟ ರಾಜಕಾರಣ ಮಾಡುವುದು ಬೇಡ ಎಂದು ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ. ಕಾಂಗ್ರೆಸ್ ತನ್ನ ವೈಫಲ್ಯ ಮುಚ್ಚಿಕೊಳ್ಳಲು, ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿಯನ್ನು ಎಳೆದು ತರಲು ಹರ ಸಾಹಸ ಮಾಡುತ್ತಿದೆ ಎಂದು ಟೀಕಿಸಿದ್ದಾರೆ.
ಒಂದು ರಾಜ್ಯದ ಮುಖ್ಯಮಂತ್ರಿ ಎರಡು ಲಕ್ಷ ಟನ್ ಅಕ್ಕಿ ಬೇಡಿಕೆಗೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿಗಳಿಗಾಗಲಿ , ಕೇಂದ್ರ ಆಹಾರ ನಾಗರೀಕ ಸರಬರಾಜು ಸಚಿವರಾಗಲಿ ಬೇಡಿಕೆ ಇಡಲೇ ಇಲ್ಲ. ಅವರೊಂದಿಗೆ ಮಾತನಾಡುವ ಸೌಜನ್ಯವನ್ನೂ ತೋರಿಸಲಿಲ್ಲ. ರಾಜ್ಯ ಸರ್ಕಾರ 2 ಲಕ್ಷ ಟನ್ ಅಕ್ಕಿಗಾಗಿ ಎಫ್ಸಿಐ ವಿಭಾಗೀಯ ವ್ಯವಸ್ಥಾಪಕರಿಗೆ ಪತ್ರ ಮುಖೇನ ವಿನಂತಿ ಮಾಡುತ್ತಾರೆ. ಜೂನ್ 12 ರಂದು ವಿಭಾಗೀಯ ವ್ಯವಸ್ಥಾಪಕ ಇದಕ್ಕೆ ಅನುಮತಿ ನೀಡುತ್ತಾರೆ. ಆದರೆ ಈ ಅನುಮತಿ ನೀಡುವ ಮುನ್ನ ಅವರು ಕೇಂದ್ರ ಕಚೇರಿಯನ್ನು ಸಂಪರ್ಕಿಸದೆ ಪ್ರಾಯಶ: ಏಕಮುಖವಾಗಿ ತೀರ್ಮಾನ ಕೈಗೊಂಡ ಹಾಗೆ ಭಾಸವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಕೇಂದ್ರ ಸರಕಾರ ಮುಂಗಾರು ಮಳೆ, ಬೆಳೆಯನ್ನು ಆಧರಿಸಿ ಕೇಂದ್ರದಲ್ಲಿರುವ ದಾಸ್ತಾನನ್ನು ಪರಿಗಣಿಸಿ ಫುಡ್ ಸೆಕ್ಯೂರಿಟಿ ಆಕ್ಟ್ ಪ್ರಕಾರ ಉಚಿತವಾಗಿ ಅಕ್ಕಿ ಕೊಡಬೇಕಾಗಿರುವ ಸರಬರಾಜಿಗೆ ಯಾವುದೇ ಭಂಗವಾಗದಂತೆ ಕಾಲಕಾಲಕ್ಕೆ ಇಂತಹ ನಿರ್ಣಯ ತೆಗೆದುಕೊಳ್ಳುವುದು ಸರ್ವೇಸಾಮಾನ್ಯ. ಈಗಾಗಲೇ ಪ್ರತಿ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೂ ಐದು ಕೆಜಿ ಉಚಿತ ಅಕ್ಕಿ ನಿರಂತರವಾಗಿ ಕೇಂದ್ರ ಸರ್ಕಾರ ನೀಡುತ್ತಿದೆ ಕೋವಿಡ್ ಸಂಕಷ್ಟದ 84 ಕೋಟಿ ಜನರಿಗೆ ಕಾಲದಲ್ಲಿ ಪ್ರತಿ ವ್ಯಕ್ತಿಗೆ ಹತ್ತು ಕೆಜಿ ಅಕ್ಕಿ ಯಂತೆ ನೀಡಿದೆ ಎಂದು ಅವರು ವಿವರಿಸಿದ್ದಾರೆ.
ಪ್ರತಿ ಕುಟುಂಬದ ಅಕ್ಕಿಯ ಅವಶ್ಯಕತೆಯನ್ನು ಕೇಂದ್ರ ಸರಕಾರವೇ ಪೂರೈಸುತ್ತಿದೆ. ಆದ ಕಾರಣ, ರಾಜ್ಯ ಸರಕಾರ ಬಡ ಕುಟುಂಬಗಳಿಗೆ ಕೇಂದ್ರ ಸರಕಾರದ ಅಕ್ಕಿಯ ಜೊತೆಗೆ ರಾಗಿ, ಗೋಧಿ, ಬೆಳೆ ಮತ್ತು ರವೆಯನ್ನು ನೀಡಬಹುದಾಗಿದೆ. ತಾನು ವಾಗ್ದಾನ ಮಾಡಿರುವಂತೆ ಹತ್ತು ಕೆಜಿ ಅಕ್ಕಿಯ ಬದಲಾಗಿ ಅದಕ್ಕೆ ಸಮ ಮೊತ್ತದ ಹಣವನ್ನು ನೀಡಬಹುದಾಗಿದೆ ಎಂದು ಒತ್ತಾಯಿಸಿದ್ದಾರೆ ಈಗ ರಾಜ್ಯ ಸರ್ಕಾರಕ್ಕೆ ಬಡವರಿಗೆ ಸಹಾಯ ಮಾಡುವುದು ಮುಖ್ಯವಾಗಬೇಕೇ ಹೊರತು ರಾಜಕಾರಣವಲ್ಲ. ಇದು ಸಿದ್ದರಾಮಯ್ಯನವರಂತಹ ಅನುಭವಿ ರಾಜಕಾರಣಿಗೆ ತಿಳಿಯದ ಸಂಗತಿ ಅಲ್ಲ ಎಂದು ತಿಳಿಸಿದ್ದಾರೆ.
ಅನಗತ್ಯವಾಗಿ ಕಾಂಗ್ರೆಸ್ ಪಾರ್ಟಿ ಮೋದಿಯವರು ಬಡವರ ಅನ್ನ ಕಸಿದುಕೊಳ್ಳುತ್ತಿದ್ದಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನಿರಂತರವಾಗಿ ಮೋದಿ ಸರ್ಕಾರ ದೇಶದ ಯಾವೊಬ್ಬ ನಾಗರಿಕನೂ ಹಸಿವಿನಿಂದ ಇರಬಾರದು ಎಂದೇ ಪ್ರತಿ ಬಿಪಿಎಲ್ ಕುಟುಂಬದ ಪ್ರತಿ ವ್ಯಕ್ತಿಗೆ 5ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿರುವುದನ್ನು ಮರೆಮಾಚಿ ಟೀಕಿಸುತ್ತಿರುವುದು ಅತ್ಯಂತ ಖಂಡನೀಯ ಹಾಗು ಕೀಳು ಮಟ್ಟದ ರಾಜಕೀಯವಾಗಿದೆ ಎಂದು ಆಕ್ಷೇಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


