ವಿಧಾನ ಪರಿಷತ್ ಚುನಾವಣೆ: ಜಗದೀಶ್ ಶೆಟ್ಟರ್ ಸೇರಿ ಕಾಂಗ್ರೆಸ್ ನ ಮೂವರೂ ಅವಿರೋಧ ಆಯ್ಕೆ
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹುಬ್ಬಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವ ಬೋಸರಾಜು ಹಾಗೂ ತಿಪ್ಪಣ್ಣ ಕಮಕನೂರು ಅವರು ವಿಧಾನ ಪರಿಷತ್ ಸದಸ್ಯರಾಗಿ...

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹುಬ್ಬಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವ ಬೋಸರಾಜು ಹಾಗೂ ತಿಪ್ಪಣ್ಣ ಕಮಕನೂರು ಅವರು ವಿಧಾನ ಪರಿಷತ್ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ವಿಧಾನ ಪರಿಷತ್ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್ ಮೂವರು ಅಭ್ಯರ್ಥಿಗಳಾದ ಜಗದೀಶ್ ಶೆಟ್ಟರ್, ತಿಪ್ಪಣ್ಣ ಕಮಕನೂರು ಹಾಗೂ ಸಚಿವ ಬೋಸರಾಜು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ವಿಶಾಲಾಕ್ಷಿ ಅವರು ಶುಕ್ರವಾರ ಅಧಿಕೃತವಾಗಿ ಘೋಷಿಸಿದ್ದಾರೆ.
ಲಕ್ಷ್ಮಣ ಸವದಿ, ಆರ್ ಶಂಕರ್ ಹಾಗೂ ಬಾಬುರಾವ್ ಚಿಂಚನಸೂರ್ ಅವರ ರಾಜೀನಾಮೆಯಿಂದ ತೆರವಾದ ಈ ಮೂರು ಸ್ಥಾನಗಳಿಗೆ ಚುನಾವಣಾ ಆಯೋಗ ಉಪ ಚುನಾವಣೆ ಘೋಷಿಸಿತ್ತು.
ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯಬೇಕಿದ್ದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂನ್ 20 ಕೊನೆಯ ದಿನವಾಗಿತ್ತು ಮತ್ತು ನಾಮಪತ್ರ ವಾಪಸ್ ಪಡೆಯಲು ಇಂದು(ಜೂನ್ 23) ಕೊನೆಯ ದಿನವಾಗಿತ್ತು. ಕಣದಲ್ಲಿ ಮೂವರೇ ಇದ್ದ ಕಾರಣದಿಂದ ಈ ಮೂವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


