ನನಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಕೊಡಿ ಎಂದು ಕೇಳಿದ್ದೇನೆ: ವಿ.ಸೋಮಣ್ಣ
ನನಗೆ ಬಿಜೆಪಿ ರಾಜ್ಯಾಧ್ಯಕ್ಷ ಕೊಡಿ ಎಂದು ಪಕ್ಷದ ಹೈಕಮಾಂಡ್ ಗೆ ಮನವಿ ಮಾಡಿದ್ದೇನೆ ಎಂದು ಮಾಜಿ ಸಚಿವ ವಿ.ಸೋಮಣ್ಣ ಅವರು ಶುಕ್ರವಾರ ಹೇಳಿದ್ದಾರೆ.

ಬೆಂಗಳೂರು: ನನಗೆ ಬಿಜೆಪಿ ರಾಜ್ಯಾಧ್ಯಕ್ಷ ಕೊಡಿ ಎಂದು ಪಕ್ಷದ ಹೈಕಮಾಂಡ್ ಗೆ ಮನವಿ ಮಾಡಿದ್ದೇನೆ ಎಂದು ಮಾಜಿ ಸಚಿವ ವಿ.ಸೋಮಣ್ಣ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ಬೆಂಗಳೂರಿನಲ್ಲಿ ವರದಿಗಾರರೊಂದಿಗೆ ಮಾತನಾಡಿದ ಸೋಮಣ್ಣ, ‘ರಾಜ್ಯದ ಯಾವ ನಾಯಕರ ಜೊತೆಗೂ ನಾನು ಮಾತನಾಡಿಲ್ಲ. ಇವರ ಕೈಯಲ್ಲಿ ಆಗದ ಕೆಲಸ ನಾನು ಮಾಡಿದ್ದೇನೆ. ಪ್ರಾಣದ ಹಂಗು ತೊರೆದು ನಾನು ಪಕ್ಷಕ್ಕಾಗಿ ಕೆಲಸ ಮಾಡಿದ್ದೇನೆ. ನಾನು ಸೋತಿರಬಹುದು. ಆದರೆ, ಕೊಟ್ಟ ಟಾಸ್ಕ್ನಲ್ಲಿ ಸೋತಿಲ್ಲ ಎಂದಿದ್ದಾರೆ.
ನಮ್ಮ ಪಕ್ಷದ ರಾಷ್ಟ್ರೀಯ ನಾಯಕರಿಗೆ ಪತ್ರ ಬರೆದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಸ್ಥಾನ ಕೇಳಿದ್ದು ನಿಜ. ನನಗೆ 100 ದಿನ ಅವಕಾಶ ನೀಡಿದರೆ ಸಾಕು. ಒಬ್ಬ ರಾಜ್ಯಾಧ್ಯಕ್ಷ ಹೇಗೆ ಕೆಲಸ ಮಾಡಬೇಕು ಎಂಬುದನ್ನು ತೋರಿಸುವೆ ಎಂದು ಮಾಜಿ ಸಚಿವ ಹೇಳಿದ್ದಾರೆ.
ಕಳೆದ 15 ವರ್ಷಗಳಿಂದ ನಾನು ಬಿಜೆಪಿಯಲ್ಲಿ ದುಡಿದಿದ್ದೇನೆ. ಪಕ್ಷವನ್ನು ತುಂಬಾ ಹತ್ತಿರದಿಂದ ಬಲ್ಲವನಾಗಿದ್ದೇನೆ. ನನಗೆ ನನ್ನದೇ ಆದಂತ 45 ವರ್ಷದ ಅನುಭವವಿದೆ. ಬಿಜೆಪಿ ಕೊಟ್ಟ ಅನೇಕ ಟಾಸ್ಕ್ಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದೇನೆ. ಕೆಟ್ಟ ಪರಿಸ್ಥಿತಿಯಲ್ಲಿ ಒಂದು ಅವಕಾಶ ಕೊಡಿ ಅಂತಾ ಕೇಳಿದ್ದೇನೆ. ಎಲ್ಲರನ್ನೂ ಒಗ್ಗಟ್ಟಾಗಿ ತೆಗೆದುಕೊಂಡು ಹೋಗಲು ಅವಕಾಶ ಕೇಳಿದ್ದೇನೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


