ವರ್ಗಾವಣೆ ದಂಧೆಯ ಕೊಚ್ಚೆಯಲ್ಲಿ ಎಗ್ಗಿಲ್ಲದೆ ಉರುಳಾಡುತ್ತಿದೆ ಸರ್ಕಾರ; 4 ಶಿಫಾರಸುಗಳ ಹಿಂದಿರುವ ಆ ʼಅತೀಂದ್ರʼ ಶಕ್ತಿ ಯಾವುದು?
ಕಾಂಗ್ರೆಸ್ ಸರ್ಕಾರ ಬಂದ ಮೊದಲ ದಿನದಿಂದಲೇ ʼಕಾಸಿಗಾಗಿ ಪೋಸ್ಟಿಂಗ್ʼ ದಂಧೆ ಶುರುವಾಗಿದೆ. ʼಸರಕಾರದ ಕೆಲಸ ದೇವರ ಕೆಲಸʼ ಎನ್ನುವುದರ ಬದಲು ʼಬಂದಿದ್ದನ್ನು ಬಿಡದೇ ಬಾಚಿಕೋ..ʼ ಎಂಬುದು ಈ ಸರಕಾರದ ಧ್ಯೇಯನೀತಿ ಆಗಿದೆ .

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಂದ ಮೊದಲ ದಿನದಿಂದಲೇ ʼಕಾಸಿಗಾಗಿ ಪೋಸ್ಟಿಂಗ್ʼ ದಂಧೆ ಶುರುವಾಗಿದೆ. ʼಸರಕಾರದ ಕೆಲಸ ದೇವರ ಕೆಲಸʼ ಎನ್ನುವುದರ ಬದಲು ʼಬಂದಿದ್ದನ್ನು ಬಿಡದೇ ಬಾಚಿಕೋ..ʼ ಎಂಬುದು ಈ ಸರಕಾರದ ಧ್ಯೇಯನೀತಿ ಆಗಿದೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಎಚ್.ಡಿ ಕುಮಾರಸ್ವಾಮಿ, ಜನರ ಹಣೆಗೆ ಗ್ಯಾರಂಟಿ ತುಪ್ಪ ಸವರಿ, ಬಿಟ್ಟಿಭಾಗ್ಯದ ಬೆಲ್ಲದ ಆಮಿಷವೊಡ್ಡಿ ʼಲೂಟಿಪರ್ವʼಕ್ಕೆ ʼಹುಂಡಿʼ ಇಡಲಾಗಿದೆ. 4 ಶಿಫಾರಸುಗಳ ಹಿಂದಿರುವ ಆ ʼಅತೀಂದ್ರʼ ಶಕ್ತಿ (!?) ಯಾವುದು? ಮೂರೊಪ್ಪತ್ತೂ ಶಿಫಾರಸು ಪತ್ರಗಳನ್ನು ಟೈಪಿಸಿ, ಸಿಎಂ ಸಾಹೇಬರ ಸಹಿ ಮಾಡಿಸುವುದರಲ್ಲಿಯೇ ಅಧಿಕಾರಿಗಳು ತಲ್ಲೀನರಾಗಿದ್ದಾರೆನ್ನುವುದು ಖಾತ್ರಿ. ವರ್ಗಾವರ್ಗಿಯ ಪೇಮೆಂಟ್ ಕೋಟಾ ನಿಯಂತ್ರಣ ಮಾಡುತ್ತಿರುವ ಆ ʼರಿಮೋಟ್ ಕಂಟ್ರೋಲ್ʼ ಬಗ್ಗೆ ಜನಕ್ಕೆ ಅರ್ಥವಾಗುತ್ತಿದೆ ಎಂದು ಲೇವಡಿ ಮಾಡಿದ್ದಾರೆ.
ಸ್ವತಃ ಮುಖ್ಯಮಂತ್ರಿ ಕಚೇರಿಯಲ್ಲೇ ವರ್ಗಾವರ್ಗಿ ದಂಧೆಗೆ ʼಹುಂಡಿʼ ಇದೆ ಎನ್ನುವುದು ಇಲ್ಲಿ ದಾಖಲೆ ಸಮೇತ ಬಟಾಬಯಲಾಗಿದೆ. ಒಂದೇ ಹುದ್ದೆಗೆ ಸ್ವತಃ ಮುಖ್ಯಮಂತ್ರಿ ಅವರೇ ನಾಲ್ವರಿಗೆ ಶಿಫಾರಸು ಪತ್ರ ಕೊಟ್ಟಿದ್ದಾರೆ!! ಸಿಎಂ ಕಚೇರಿಯಲ್ಲಿ ಏನೇನು ನಡೆಯುತ್ತಿದೆ?ಸಿಎಂ ಕಚೇರಿ ಅಂದರೆ @CMofKarnataka ವೋ ಅಥವಾ Corruption of Karnataka ವೋ ಎಂದು ಪ್ರಶ್ನಿಸಿದ್ದಾರೆ.
ಪಂಚಗ್ಯಾರಂಟಿಗಳ ಕಾಂಗ್ರೆಸ್ ಸರ್ಕಾರ , ಈಗ 6ನೇ ಗ್ಯಾರಂಟಿಯನ್ನೂ ಖಾತ್ರಿಗೊಳಿಸಿದೆ. ಅದು; ʼಕಾಸಿಗಾಗಿ ಪೋಸ್ಟಿಂಗ್!ʼ ಅಧಿಕಾರಕ್ಕೆ ಬಂದು ತಿಂಗಳು ಮುಗಿಯುತ್ತಿದ್ದಂತೆಯೇ ವರ್ಗಾವಣೆ ದಂಧೆಯ ಕೊಚ್ಚೆಯಲ್ಲಿ ಈ ಸರಕಾರ ಎಗ್ಗಿಲ್ಲದೆ ಉರುಳಾಡುತ್ತಿದೆ ಎನ್ನುವುದಕ್ಕೆ ಈ ವರದಿಯೇ ಸಾಕ್ಷಿ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


