ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 140 ಸ್ಥಾನ ಗೆಲ್ಲುವುದು ಖಚಿತ: ಬಿ.ಎಸ್.ಯಡಿಯೂರಪ್ಪ
ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕನಿಷ್ಠ 140 ಸ್ಥಾನಗಳನ್ನು ಗೆಲ್ಲುವ ವಾತಾವರಣವಿದ್ದು, ರಾಜ್ಯದಲ್ಲಿ ಮುಂದೆ ಬಿಜೆಪಿಯಿಂದಲೇ ಸರ್ಕಾರ ರಚನೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಭಾನುವಾರ ವಿಶ್ವಾಸ ವ್ಯಕ್ತಪಡಿಸಿದರು.

ಬೆಳಗಾವಿ: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕನಿಷ್ಠ 140 ಸ್ಥಾನಗಳನ್ನು ಗೆಲ್ಲುವ ವಾತಾವರಣವಿದ್ದು, ರಾಜ್ಯದಲ್ಲಿ ಮುಂದೆ ಬಿಜೆಪಿಯಿಂದಲೇ ಸರ್ಕಾರ ರಚನೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಭಾನುವಾರ ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ಅಂಗವಾಗಿ ಪಟ್ಟಣದಲ್ಲಿ ನಡೆದ ಬೃಹತ್ ರೋಡ್ ಶೋ ವೇಳೆ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಬಿಜೆಪಿಯ ಬಹುತೇಕ ಪ್ರಚಾರಾಂದೋಲನಗಳಿಗೆ ಅಪಾರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಎಲ್ಲೆಡೆ ರ್ಯಾಲಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುತ್ತಿದ್ದಾರೆ. ಬಿಜೆಪಿಯ ಯಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿರುವುದು ರಾಜ್ಯದಲ್ಲಿ ಬಿಜೆಪಿ ಜನಪ್ರಿಯತೆ ಹೆಚ್ಚಿಸಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷ ದೇಶದ ಎಲ್ಲ ಭಾಗಗಳಲ್ಲಿ ದಯನೀಯವಾಗಿ ಸೋಲು ಕಂಡಿದೆ. ಪಕ್ಷದ ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿಗಳ ಗೆಲುವನ್ನು ಖಚಿತಪಡಿಸಿಕೊಳ್ಳಬೇಕು. ರಾಜ್ಯದಲ್ಲಿ ಕಮಲ ಅರಳಬೇಕು, ದೇಶವು ಕಾಂಗ್ರೆಸ್'ನಿಂದ ಮುಕ್ತವಾಗಬೇಕು ಎಂದು ಕರೆ ನೀಡಿದರು.
ಇದೇ ವೇಳೆ ಬೈಲಹೊಂಗಲದಲ್ಲಿ ಪಕ್ಷದ ಯಾತ್ರೆಗೆ ದೊರೆತ ಭಾರೀ ಪ್ರತಿಕ್ರಿಯೆಯನ್ನು ಶ್ಲಾಘಿಸಿದ ಯಡಿಯೂರಪ್ಪ, ಪಕ್ಷದ ಕಾರ್ಯಕರ್ತರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೋಲುವಂತೆ ನೋಡಿಕೊಳ್ಳಬೇಕು ಎಂದರು.
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷವು ಜನರಿಗೆ ನೀಡಿದ ಭರವಸೆಗಳನ್ನು ಎಂದಿಗೂ ಈಡೇರಿಸಿಲ್ಲ. ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಯಾತ್ರೆಯು ಸುಳ್ಳುಗಳನ್ನು ಹಬ್ಬಿಸುತ್ತಿದೆಯೇ ಹೊರತು ಬೇರೇನನ್ನೂ ಅಲ್ಲ ಎಂದು ವಾಗ್ದಾಳಿ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


