ದೊಡ್ಡವರು ದೊಡ್ಡ ಪಕ್ಷ ಸೇರಿದ್ದಾರೆ; ಅವರ ಬಗ್ಗೆ ಮಾತನಾಡುವಷ್ಟು ನಾನು ಇನ್ನು ಬೆಳೆದಿಲ್ಲ: ಸುಮಲತಾ ವಿರುದ್ಧ ಎಚ್ ಡಿಕೆ ಕಿಡಿ
ಅವರು (ಸುಮಲತಾ ಅಂಬರೀಶ್) ಬಹಳ ದೊಡ್ಡವರಿದ್ದಾರೆ. ಹೀಗಾಗಿ, ದೊಡ್ಡ ಪಕ್ಷಕ್ಕೆ ಸೇರಿದ್ದಾರೆ. ಅವರ ಬಗ್ಗೆ ಮಾತನಾಡುವಷ್ಟು ದೊಡ್ಡಮಟ್ಟಕ್ಕೆ ನಾನು ಬೆಳೆದಿಲ್ಲ ಎಂದು ಮಾಜಿ ಸಿಎಂ ಎಚ್ .ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಹಾಸನ: ಅವರು (ಸುಮಲತಾ ಅಂಬರೀಶ್) ಬಹಳ ದೊಡ್ಡವರಿದ್ದಾರೆ. ಹೀಗಾಗಿ, ದೊಡ್ಡ ಪಕ್ಷಕ್ಕೆ ಸೇರಿದ್ದಾರೆ. ಅವರ ಬಗ್ಗೆ ಮಾತನಾಡುವಷ್ಟು ದೊಡ್ಡಮಟ್ಟಕ್ಕೆ ನಾನು ಬೆಳೆದಿಲ್ಲ ಎಂದು ಮಾಜಿ ಸಿಎಂ ಎಚ್ .ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಪಕ್ಷಕ್ಕೆ ಬೆಂಬಲ ಸೂಚಿಸಿರುವ ಬಗ್ಗೆ ಹಾಸನದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ನಮ್ಮ ಭದ್ರಕೋಟೆಯಲ್ಲಿ ಅವರು ಒಳ್ಳೆಯ ಕೆಲಸಗಳನ್ನು ಮಾಡಿದ್ರೆ, ಮಂಡ್ಯ ಜನತೆ ಪರವಾಗಿ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.
ಮಂಡ್ಯ ಅಭಿವೃದ್ಧಿಗೆ ಹಣ ತಂದಿದ್ದೇನೆ ಎಂದಿದ್ದಾರೆ. ಅವರು ಅನುದಾನ ತಂದಿದ್ದರೆ ಅದನ್ನು ಮಂಡ್ಯ ಜಿಲ್ಲೆಯ ಜನ ಹೇಳಬೇಕು. ಈ ಬಗ್ಗೆ ನಾನು ಏನನ್ನೂ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಸುಮಲತಾ ಬಿಜೆಪಿ ಸೇರ್ಪಡೆ ವಿಷಯ ಯಾರಿಗೂ ಅಚ್ಚರಿ ಮೂಡಿಸುವ ಸುದ್ದಿ ಅಲ್ಲ. ಇದಕ್ಕೆ ಪ್ರಾಮುಖ್ಯತೆ ಕೊಡಬೇಕಾದ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ. ಅವರು ದೊಡ್ಡವರು, ದೊಡ್ಡ ಪಕ್ಷಕ್ಕೆ ಸೇರಿದ್ದಾರೆ. ಅವರ ಬಗ್ಗೆ ಮಾತನಾಡುವಷ್ಟು ದೊಡ್ಡಮಟ್ಟಕ್ಕೆ ನಾನು ಬೆಳೆದಿಲ್ಲ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


