ಮೈತ್ರಿ ಸರ್ಕಾರದಲ್ಲಿ ನಿರ್ಧಾರ ತೆಗೆದುಕೊಳ್ಳಲು ಸಿದ್ದರಾಮಯ್ಯ, ಡಿಕೆಶಿ ನನಗೆ ಮುಕ್ತ ಅವಕಾಶ ನೀಡಲಿಲ್ಲ: ಎಚ್‌ಡಿ ಕುಮಾರಸ್ವಾಮಿ
ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ನೇತೃತ್ವದ ಸಂದರ್ಭದಲ್ಲಿ ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಶಾಸಕರ ನಡುವೆ ಸಮನ್ವಯತೆ ಕಾಪಾಡಲು ಜಂಟಿ ಶಾಸಕಾಂಗ ಸಭೆ ನಡೆಸದಂತೆ ತಡೆದಿದ್ದರು ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಶುಕ್ರವಾರ ಆರೋಪಿಸಿದ್ದಾರೆ.

ಬೇಲೂರು: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ನೇತೃತ್ವದ ಸಂದರ್ಭದಲ್ಲಿ ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಶಾಸಕರ ನಡುವೆ ಸಮನ್ವಯತೆ ಕಾಪಾಡಲು ಜಂಟಿ ಶಾಸಕಾಂಗ ಸಭೆ ನಡೆಸದಂತೆ ತಡೆದಿದ್ದರು ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಶುಕ್ರವಾರ ಆರೋಪಿಸಿದ್ದಾರೆ.
'ರೈತರು, ಬಡವರ ಹಿತದೃಷ್ಟಿಯಿಂದ ಯಾವುದೇ ನಿರ್ಧಾರ ಕೈಗೊಳ್ಳಲು ನಾಯಕರು ನನಗೆ ಮುಕ್ತ ಅವಕಾಶವನ್ನೂ ನೀಡಿಲ್ಲ. ಕಾಂಗ್ರೆಸ್‌ನ ಒಂದು ವರ್ಗದ ನಾಯಕರು ಜೆಡಿಎಸ್ ಮತ್ತು ಕಾಂಗ್ರೆಸ್ ಸಚಿವರ ನಡುವೆ ಯಾವುದೇ ಸಮನ್ವಯತೆಯನ್ನು ಬಯಸಲಿಲ್ಲ. ಎಲ್ಲ ಅಡೆತಡೆಗಳ ನಡುವೆಯೂ 25 ಕೋಟಿ ಕೃಷಿ ಸಾಲ ಮನ್ನಾ ಮಾಡಿದ್ದೇನೆ. ಆದರೆ, ನಾನು ಅವರೊಂದಿಗೆ ಚರ್ಚಿಸಿದ್ದರೆ ಅವರು ಅದಕ್ಕೂ ಅವಕಾಶ ನೀಡುತ್ತಿರಲಿಲ್ಲ' ಎಂದು ಆರೋಪಿಸಿದರು.
'ಡಿಕೆ ಶಿವಕುಮಾರ್ ಅವರು ಹಾಸನ ಜಿಲ್ಲೆಗೆ ನೀಡಿರುವ ಕೊಡುಗೆಗಳನ್ನು ವಿವರಿಸಬೇಕು. ಅವರಿಗೆ ಮತ ಕೇಳುವ ನೈತಿಕ ಹಕ್ಕಿಲ್ಲ' ಎಂದರು.
ತಮ್ಮ ಬೆಂಬಲದಿಂದಲೇ ದೇವೇಗೌಡರು ಪ್ರಧಾನಿಯಾದರು ಎಂಬ ಕಾಂಗ್ರೆಸ್ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಅವರು, ಎಡಪಕ್ಷಗಳು ದೇವೇಗೌಡರು ಪ್ರಧಾನಿಯಾಗಲು ನೆರವಾದವು ಎಂದರು.
ಹಾಸನ ಟಿಕೆಟ್ ವಿಚಾರವಾಗಿ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗುವುದು ಎಂದ ಅವರು, ಪಕ್ಷದ ಕಾರ್ಯಕರ್ತರಿಗೆ ಟಿಕೆಟ್ ನೀಡಲಾಗುವುದು ಎಂದು ಪುನರುಚ್ಚರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


