ರಾಜಕೀಯ

'ಬೇರೆ ರಾಜಕಾರಣಿ ಮಕ್ಕಳಿಗೆ ಟಿಕೆಟ್ ಇಲ್ಲ ಅನ್ನೋದಾದ್ರೆ ನನಗೂ ಬೇಡ; ರಾಜಕಾರಣದಲ್ಲಿ ಕವಲುದಾರಿಗಳು ಇರುತ್ತವೆ, ನಾನೇನು ಸನ್ಯಾಸಿ ಅಲ್ಲ'

ರಾಜಕಾರಣದಲ್ಲಿ ಕವಲುದಾರಿಗಳು ಇರುತ್ತವೆ, ಹಾಗಂತ ನಾನೇನೂ ಸನ್ಯಾಸಿ ಅಲ್ಲ ಎಂದು ಸಚಿವ ವಿ. ಸೋಮಣ್ಣ ಹೇಳುವ ಮೂಲಕ ತಮ್ಮ ಮುಂದಿನ ಹೆಜ್ಜೆಯ ಕುರಿತಾಗಿ ಕುತೂಹಲ ಕೆರಳಿಸಿದ್ದಾರೆ.

'ಬೇರೆ ರಾಜಕಾರಣಿ ಮಕ್ಕಳಿಗೆ ಟಿಕೆಟ್ ಇಲ್ಲ ಅನ್ನೋದಾದ್ರೆ ನನಗೂ ಬೇಡ; ರಾಜಕಾರಣದಲ್ಲಿ ಕವಲುದಾರಿಗಳು ಇರುತ್ತವೆ, ನಾನೇನು ಸನ್ಯಾಸಿ ಅಲ್ಲ'
ವಿ. ಸೋಮಣ್ಣ
Published On :

ಬೆಂಗಳೂರು: ರಾಜಕಾರಣದಲ್ಲಿ ಕವಲುದಾರಿಗಳು ಇರುತ್ತವೆ, ಹಾಗಂತ ನಾನೇನೂ ಸನ್ಯಾಸಿ ಅಲ್ಲ ಎಂದು ಸಚಿವ ವಿ. ಸೋಮಣ್ಣ ಹೇಳುವ ಮೂಲಕ ತಮ್ಮ ಮುಂದಿನ ಹೆಜ್ಜೆಯ ಕುರಿತಾಗಿ ಕುತೂಹಲ ಕೆರಳಿಸಿದ್ದಾರೆ.

ಬಿಜೆಪಿಯಿಂದ ಮುನಿಸಿಕೊಂಡಿರುವ ಸೋಮಣ್ಣ, ಕಾಂಗ್ರೆಸ್‌ ಕಡೆಗೆ ಮುಖ ಮಾಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಮಧ್ಯೆ ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ನಾನು ಯಾವತ್ತೂ ಮಕ್ಕಳನ್ನು ರಾಜಕಾರಣಕ್ಕೆ ತಂದವನಲ್ಲ. ಆದರೆ, ನನಗೆ ಇರುವ ನಿಯಮ ಎಲ್ಲರಿಗೂ ಅನ್ವಯಿಸಬೇಕಲ್ಲವೇ? ಎಲ್ಲರಿಗೂ ಮಕ್ಕಳು ಎಂದರೆ ಪ್ರೀತಿ ಇದ್ದೇ ಇರುತ್ತೆ.

ಬೇರೆ ರಾಜಕಾರಣಿ ಮಕ್ಕಳಿಗೆ ಟಿಕೆಟ್ ಇಲ್ಲ ಅನ್ನೋದಾದರೆ ನಮಗೂ ಬೇಡ, ಅವಕಾಶ, ಹಣೆಬರಹ ಇದ್ದರೆ ಮಗನಿಗೆ ಟಿಕೆಟ್ ಸಿಗುತ್ತದೆ. ನನಗೆ ಅಸಮಾಧಾನ ಇದೆ ಎಂದು ಎಲ್ಲಾದರೂ ಹೇಳಿದ್ದೇನಾ’ ಎಂದು ಪ್ರಶ್ನಿಸಿದರು.

ಏನು ಹೇಳಬೇಕು, ಎಲ್ಲಿ ಹೇಳಬೇಕೋ ಹೇಳಿದ್ದೇನೆ. ಕವಲುದಾರಿಗಳು ಇರುತ್ತವೆ. ನಾನೇನು ಸನ್ಯಾಸಿ ಅಲ್ಲ. ಡಿ.ಕೆ. ಶಿವಕುಮಾರ್‌, ಸಿದ್ದರಾಮಯ್ಯ ನಾವೆಲ್ಲ ಸ್ನೇಹಿತರು. ಒಟ್ಟಿಗೆ ಕೆಲಸ ಮಾಡಿದ್ದೇವೆ. ಅವರ ಕೆಲಸ ಅವರು ಮಾಡುತ್ತಾರೆ. ನನ್ನ ಕೆಲಸ ನಾನು ಮಾಡುತ್ತೇನೆ ಎಂದರು.

ನನಗೆ ಕೊಟ್ಟ ಜವಾಬ್ದಾರಿಗಳೆಲ್ಲವನ್ನೂ ನಿರ್ವಹಿಸಿದ್ದೇನೆ. ಉಪ ಚುನಾವಣೆಗಳ ಜವಾಬ್ದಾರಿ, ತುಮಕೂರು ಲೋಕಸಭೆಯಲ್ಲಿ ಗೆಲ್ಲಿಸಿಕೊಂಡು ಬಂದಿದ್ದೇನೆ. ನಾನು ಮೊದಲು ಕಾಂಗ್ರೆಸ್‍ನಲ್ಲೇ ಇದ್ದೆ. ಜನತಾಪಕ್ಷ, ಜನತಾದಳದಲ್ಲೂ ಕೆಲಸ ಮಾಡಿದ್ದೇನೆ. ನನ್ನ ಮಗನಿಗೆ ಟಿಕೆಟ್ ಕೇಳಿದ್ದೇನಾ? ಅಭಿಮಾನಿಗಳು ಸಭೆ ಮಾಡಿದರೆ ನಾನು ಮಾಡಬೇಡಿ ಎಂದು ಹೇಳುವುದಕ್ಕೆ ಆಗುತ್ತದೆಯೇ? ನಾಲ್ಕು ಗೋಡೆ ಮಧ್ಯೆ ಯಾರಿಗೆ ಏನು ಹೇಳಬೇಕು ಹೇಳಿದ್ದೇನೆ, ನನ್ನನ್ನು ಬೆಂಗಳೂರಿಗೆ ಮಾತ್ರ ಏಕೆ ಸೀಮಿತ ಮಾಡುತ್ತೀರಾ ಎಂದು‌ ಪ್ರಶ್ನಿಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಟ್ಟರೆ ಸ್ಪರ್ಧೆ ಮಾಡುತ್ತೇನೆ. ಇಲ್ಲ ಅಂದ್ರೆ ಇಲ್ಲ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.