ಉತ್ಸವ ಮೂರ್ತಿಯಾಗಿದ್ದ ಯಡಿಯೂರಪ್ಪ, ವಿಸರ್ಜನಾ ಮೂರ್ತಿಯಾದರೇ? ದಶಪಥವಲ್ಲ ಭ್ರಷ್ಟಪಥ!
ಲಿಂಗಾಯತ ಸಮುದಾಯದ ಮತಗಳಿಗಾಗಿ ಉತ್ಸವ ಮೂರ್ತಿಯಾಗಿದ್ದ ಯಡಿಯೂರಪ್ಪನವರು, ವಿಸರ್ಜನಾ ಮೂರ್ತಿಯಾದರೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಬೆಂಗಳೂರು: ಲಿಂಗಾಯತ ಸಮುದಾಯದ ಮತಗಳಿಗಾಗಿ ಉತ್ಸವ ಮೂರ್ತಿಯಾಗಿದ್ದ ಯಡಿಯೂರಪ್ಪನವರು, ವಿಸರ್ಜನಾ ಮೂರ್ತಿಯಾದರೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಯಡಿಯೂರಪ್ಪನವರ ಸ್ಥಾನ ಮತ್ತು ಮಾನ ಎರಡನ್ನೂ ಕಾಲ ಕೆಳಗಿನ ಕಸದಂತೆ ಕಾಣುತ್ತಿದೆ ಬಿಜೆಪಿ. ಟಿಕೆಟ್ ನಿರ್ಧರಿಸುವ ಹಕ್ಕು, ಸ್ವತಂತ್ರ ಯಡಿಯೂರಪ್ಪ ಅವರಿಗಿಲ್ಲ ಎನ್ನುವ ಮೂಲಕ ಬಿಎಸ್‌ವೈ ಮುಕ್ತ ಬಿಜೆಪಿ ಅಭಿಯಾನವನ್ನ ಅಧಿಕೃತಗೊಳಿಸಿದ್ದಾರೆ ಸಿ.ಟಿ ರವಿ. ಲಿಂಗಾಯತರ ಮತಕ್ಕಾಗಿ ಉತ್ಸವ ಮೂರ್ತಿಯಾಗಿದ್ದ ಬಿಎಸ್‌ವೈ ಇಷ್ಟು ಬೇಗ ವಿಸರ್ಜನಾ ಮೂರ್ತಿಯಾದರೆ?' ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಟಿಕೆಟ್ ಯಾರಿಗೆ ನೀಡಬೇಕು ಎಂದು ನಿರ್ಧಾರ ಮಾಡುವುದು ಪಕ್ಷವೇ ಹೊರೆತು ಯಡಿಯೂರಪ್ಪನವರು ಅಲ್ಲ ಎನ್ನುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರ ಹೇಳಿಕೆ ಬಗ್ಗೆ ಕಾಂಗ್ರೆಸ್ ಲೇವಡಿ ಮಾಡಿದೆ.
ಸಿ.ಟಿ ರವಿ ಅವರ ಹೇಳಿಕೆಯ ವರದಿಯ ಪ್ರತಿಯನ್ನು ಲಗತ್ತಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಯಡಿಯೂರಪ್ಪನವರ ಸ್ಥಾನ ಮತ್ತು ಮಾನ ಎರಡನ್ನೂ ಬಿಜೆಪಿ ಕಾಲ ಕಸದಂತೆ ಕಾಣುತ್ತಿದೆ ಎಂದು ವ್ಯಂಗ್ಯವಾಡಿದೆ.
ಒಂದು ವರ್ಷವಾದರೂ ಬಾಳಿಕೆ ಬರಬೇಕಿತ್ತು, ಒಂದು ತಿಂಗಳು, ಕೊನೆ ಪಕ್ಷ ಒಂದು ವಾರವಾದರೂ ಬಾಳಿಕೆ ಬರಬೇಕಿತ್ತು. ಆದರೆ ಉದ್ಘಾಟನೆಯಾದ ಒಂದೇ ದಿನಕ್ಕೆ ಕಿತ್ತು ಹೋಗಿದೆ, ರಾಜ್ಯದ 40% ಕೇಂದ್ರದ 40%, ಒಟ್ಟು 80% ಕಮಿಷನ್ ಕಾಮಗಾರಿಯ ಬಂಡವಾಳ ಹೊರಬಂದಿದೆ. ದಶಪಥವಲ್ಲ ಇದು ಭ್ರಷ್ಟಪಥ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ಕಿತ್ತುಹೋದ ರಸ್ತೆ ದುರಸ್ತಿ ಕಾಮಗಾರಿಯ ಗುದ್ದಲಿ ಪೂಜೆಗೆ ಮತ್ತೊಮ್ಮೆ ಮೋದಿಯನ್ನು ಕರೆಸಿ. ದುರಸ್ತಿಯಾದ ನಂತರ ಉದ್ಘಾಟನೆಗೆ ಇನ್ನೊಮ್ಮೆ ಮೋದಿ ಕರೆಸಿ. ಗುಂಡಿ ಮುಚ್ಚಿದ ಸಂತೋಷಕ್ಕಾಗಿ ಮಗದೊಮ್ಮೆ ಮೋದಿ ಕರೆಸಿ ರೋಡ್ ಶೋ ಮಾಡಿಸಿ. ಆಗಬಹುದೇ ಎಂದು ಬಿಜೆಪಿ ಸರ್ಕಾರವನ್ನು ಪ್ರಶ್ನಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


