ಮಾರ್ಚ್ 20 ರಂದು ಬೆಳಗಾವಿಗೆ ರಾಹುಲ್ ಗಾಂಧಿ ಭೇಟಿ
ರಾಜ್ಯದಲ್ಲಿ ವಿಧಾನಸಭೆ ಚುನಾವಣಾ ಕಣ ರಂಗೇರುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಬ್ಬರದ ಸಮಾರಂಭಗಳ ನಂತರ ಈಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾರ್ಚ್ 20ರಂದು...

ಬೆಳಗಾವಿ: ರಾಜ್ಯದಲ್ಲಿ ವಿಧಾನಸಭೆ ಚುನಾವಣಾ ಕಣ ರಂಗೇರುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಬ್ಬರದ ಸಮಾರಂಭಗಳ ನಂತರ ಈಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾರ್ಚ್ 20ರಂದು ಬೆಳಗಾವಿಗೆ ಆಗಮಿಸಲಿದ್ದು, ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ರಾಹುಲ್ ಗಾಂಧಿಯ ಕಾರ್ಯಕ್ರಮ ಯಶಸ್ವಿಗೊಳಿಸಲು ಮಾರ್ಚ್ 16ರಂದು ಬೆಳಗ್ಗೆ 10 ಗಂಟೆಗೆ ಇಲ್ಲಿನ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿ ಸಭೆಯಲ್ಲಿ ಬೆಳಗಾವಿ ವಿಭಾಗದ ಮುಖಂಡರ ಪೂರ್ವಭಾವಿ ಸಭೆ ಕರೆಯಲಾಗಿದೆ.
ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ ಜಿಲ್ಲೆಗಳ ಶಾಸಕರು, ಮಾಜಿ ಶಾಸಕರು, ಮಾಜಿ ಸಂಸದರು, ಮುಖಂಡರು, 2018ರ ವಿಧಾನಸಭೆ ಚುನಾವಣೆ ಹಾಗೂ 2019ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು ಈ ಸಭೆಯಲ್ಲಿ ಭಾಗವಹಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಮಾರ್ಚ್ 18, 19ರಂದು ಬೆಳಗಾವಿ ಜಿಲ್ಲೆಯಲ್ಲಿ ನಡೆಯಬೇಕಿದ್ದ ‘ಪ್ರಜಾಧ್ವನಿ’ ಯಾತ್ರೆಯನ್ನು ರಾಹುಲ್ ಗಾಂಧಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


