ಬೆಳಗಾವಿಗೆ ನಾಳೆ ರಾಹುಲ್ ಆಗಮನ, ಯುವ ಕ್ರಾಂತಿ ಸಮಾವೇಶದಲ್ಲಿ ಭಾಗಿ
2023ರ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಳೆ ಬೆಳಗಾವಿಗೆ ಆಗಮಿಸಲಿದ್ದು, ಯುವ ಕ್ರಾಂತಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಬೆಳಗಾವಿ: 2023ರ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಳೆ ಬೆಳಗಾವಿಗೆ ಆಗಮಿಸಲಿದ್ದು, ಯುವ ಕ್ರಾಂತಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಇದಕ್ಕಾಗಿ ನಗರದ ಸಿಪಿಇಡಿ ಮೈದಾನದಲ್ಲಿ ಭವ್ಯ ವೇದಿಕೆ ಸಿದ್ಧಪಡಿಸಲಾಗಿದೆ. 80 ಸಾವಿರಕ್ಕೂ ಅಧಿಕ ಜನರು ಕುಳಿತುಕೊಳ್ಳಲು ಆಸನ ವ್ಯವಸ್ಥೆ ಮಾಡಲಾಗಿದೆ.
ರಾಹುಲ್ ಗಾಂಧಿ ಅವರಿಗೆ ಸ್ವಾಗತ ಕೋರಿ ನಗರದ ಪ್ರಮುಖ ರಸ್ತೆಗಳಲ್ಲಿ ಹಲವು ನಾಯಕರು ಕಟೌಟ್ ಹಾಕಿದ್ದು, ರಸ್ತೆ ಬದಿ ಕಾಂಗ್ರೆಸ್ ಧ್ವಜಗಳನ್ನು ಕಟ್ಟಿದ್ದಾರೆ. ಸಮಾವೇಶ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಸಿಪಿಇಡಿ ಮೈದಾನಕ್ಕೆ ತೆರಳಿ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಸಮಾವೇಶದಲ್ಲಿ ಪಕ್ಷದ ಹಿರಿಯ ನಾಯಕರು ರಾಜ್ಯದ ಯುವಕರ ಬದುಕು ಉಜ್ವಲಗೊಳಿಸುವಂತಹ ಗ್ಯಾರಂಟಿ ಕಾರ್ಡ್ ಅನಾವರಣಗೊಳಿಸಲಿದ್ದಾರೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


