ಬಿಜೆಪಿಗೆ 40ರ ಮೇಲೆ ಪ್ರೀತಿ, ಅವರನ್ನು ಅಷ್ಟೇ ಸ್ಥಾನಕ್ಕೆ ಸೀಮಿತಗೊಳಿಸಿ: ರಾಹುಲ್ ಗಾಂಧಿ
ಕಾಂಗ್ರೆಸ್ ನಾಯಕರು ನನಗೆ 91 ಬಾರಿ ಬೈದಿದ್ದಾರೆ ಎಂದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕರ್ನಾಟಕ ಚುನಾವಣೆ ನಿಮಗೆ ಸಂಬಂಧಿಸಿದ್ದಲ್ಲ ಎಂಬುದನ್ನು ನರೇಂದ್ರ ಮೋದಿ...

ತುರುವೇಕೆರೆ: ಕಾಂಗ್ರೆಸ್ ನಾಯಕರು ನನಗೆ 91 ಬಾರಿ ಬೈದಿದ್ದಾರೆ ಎಂದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕರ್ನಾಟಕ ಚುನಾವಣೆ ನಿಮಗೆ ಸಂಬಂಧಿಸಿದ್ದಲ್ಲ ಎಂಬುದನ್ನು ನರೇಂದ್ರ ಮೋದಿ ಅರ್ಥಮಾಡಿಕೊಳ್ಳಬೇಕು ಎಂದು ತಿರುಗೇಟು ನೀಡಿದ್ದಾರೆ.
ಇಂದು ತುರುವೆಕೆರೆಯಲ್ಲಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಮೋದಿ ತಮ್ಮ ಬಗ್ಗೆ ಮಾತನಾಡುವ ಬದಲು ಬಿಜೆಪಿ ಸರ್ಕಾರ ಮಾಡಿದ ಕಾರ್ಯಗಳ ಬಗ್ಗೆ ಮತ್ತು ಕರ್ನಾಟಕದ ಭವಿಷ್ಯದ ಕಾರ್ಯಕ್ರಮಗಳ ಬಗ್ಗೆ ಮಾತನಾಡಲಿ ಎಂದರು.
ಇದನ್ನು ಓದಿ: ಪ್ರಧಾನಿ ಮೋದಿಗೆ ‘ನಾಲಾಯಕ್’ ಎಂದ ಪ್ರಿಯಾಂಕ್ ಖರ್ಗೆ!
“ನೀವು(ಮೋದಿ) ಕರ್ನಾಟಕದಲ್ಲಿ ಚುನಾವಣಾ ಪ್ರಚಾರಕ್ಕೆ ಬರುತ್ತೀರಿ. ಆದರೆ ಕರ್ನಾಟಕದ ಬಗ್ಗೆ ಮಾತನಾಡುವುದಿಲ್ಲ. ನಿಮ್ಮ ಬಗ್ಗೆ ಮಾತನಾಡುತ್ತೀರಿ. ಕಳೆದ ಮೂರು ವರ್ಷಗಳಿಂದ ಕರ್ನಾಟಕದಲ್ಲಿ ನೀವು ಏನು ಮಾಡಿದ್ದೀರಿ ಎಂಬುದನ್ನು ಮೊದಲು ಹೇಳಿ. ಮುಂದಿನ ಐದು ವರ್ಷಗಳಲ್ಲಿ ನೀವು ಏನು ಮಾಡುತ್ತೀರಿ? ಭ್ರಷ್ಟಾಚಾರದ ವಿರುದ್ಧ ಯಾವ ಕ್ರಮ ತೆಗೆದುಕೊಂಡಿದ್ದೀರಿ ಎಂಬುದನ್ನು ಹೇಳಿ ಎಂದರು.
ಬಿಜೆಪಿಯವರಿಗೆ 40 ಎನ್ನುವ ನಂಬರ್ ಮೇಲೆ ಬಹಳ ಪ್ರೀತಿ. ಹಾಗಾಗಿ ಈ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಕೇವಲ 40 ಸೀಟುಗಳನ್ನು ಮಾತ್ರ ನೀಡಬೇಕು. ಕಾಂಗ್ರೆಸ್ ಗೆ 150 ಸ್ಥಾನ ನೀಡಿ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್‌ಗಾಂಧಿ ಕರೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


