ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಲಿಂಗಾಯತರಿಗೆ, ದಲಿತರಿಗೆ ನೀಡಲಾದ ಮೀಸಲಾತಿಯನ್ನು ಹಿಂಪಡೆಯುತ್ತದೆ: ಅಮಿತ್ ಶಾ
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಲಿಂಗಾಯತರಿಗೆ ನೀಡಿದ ಮೀಸಲಾತಿ ಹಿಂಪಡೆಯುತ್ತದೆ. ದಲಿತರಿಗೆ ನೀಡಲಾದ ಮೀಸಲಾತಿಯನ್ನು ತೆಗೆಯುತ್ತಾರೆ. ಅವರಿಗೆ ತುಷ್ಟಿಕರಣ ಹೊರತು ಮತ್ತೇನು ಕಾಣಿಸುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಮೈಸೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಲಿಂಗಾಯತರಿಗೆ ನೀಡಿದ ಮೀಸಲಾತಿ ಹಿಂಪಡೆಯುತ್ತದೆ. ದಲಿತರಿಗೆ ನೀಡಲಾದ ಮೀಸಲಾತಿಯನ್ನು ತೆಗೆಯುತ್ತಾರೆ. ಅವರಿಗೆ ತುಷ್ಟಿಕರಣ ಹೊರತು ಮತ್ತೇನು ಕಾಣಿಸುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಮೈಸೂರಿನ ವರುಣಾ ಕ್ಷೇತ್ರದಲ್ಲಿಂದು ವಿ ಸೋಮಣ್ಣ ಪರ ಮತ ಯಾಚನೆ ಮಾಡಿದ ಅವರು, ಸಿದ್ದರಾಮಯ್ಯ ಅವರು ಲಿಂಗಾಯತರಿಗೆ ಅಪಮಾನ ಮಾಡಿದ್ದಾರೆ. ಆದರೆ ಬಿಜೆಪಿ ಬಿಎಸ್ ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿಯವರನ್ನು ಮುಖ್ಯಮಂತ್ರಿ ಮಾಡಿದೆ. ಸಿದ್ದರಾಮಯ್ಯ ಅವರು ಲಿಂಗಾಯತರು ಭ್ರಷ್ಟಾಚಾರಿಗಳು ಎನ್ನುವ ಮೂಲಕ ಲಿಂಗಾಯತ ಸಮುದಾಯಕ್ಕೆ ಅಪಮಾನ ಮಾಡಿದ್ದಾರೆ. ಕಾಂಗ್ರೆಸ್ನವರು ಈ ಹಿಂದೆ ನಿಜಲಿಂಗಪ್ಪ ಮತ್ತು ವಿರೇಂದ್ರ ಪಾಟೀಲ್ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸಿ ಅಪಮಾನ ಮಾಡಿತು ಎಂದು ಆರೋಪಿಸಿದರು.
ಸಿದ್ದರಾಮಯ್ಯ ಅವರೆ ನೀವು ಯಾಕೆ ಪದೇ ಪದೇ ಕ್ಷೇತ್ರ ಬದಲಾಯಿಸುತ್ತೀರಿ. ವರುಣಾ ಮತದಾರರೇ ನಿವೃತ್ತಿ ಹೊಂದುವ ನಾಯಕ ಬೇಕಾ ಅಥವಾ ಭವಿಷ್ಯದ ಬಗ್ಗೆ ಯೋಜಿಸುವ ನಾಯಕ ಬೇಕಾ. ಸಿದ್ದರಾಮಯ್ಯ ಅವರ ಕಾಲದಲ್ಲಿ ಮಂಡ್ಯದ ಮೈ ಶುಗರ್ ಕಾರ್ಖಾನೆ ಮುಚ್ಚಿತು ಎಂದು ಮತದಾರರಿಗೆ ನೆನಪಿಸುವ ಪ್ರಯತ್ನ ಮಾಡಿದರು.
ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಿಸಿ: ಕರ್ನಾಟಕವನ್ನು ಅಭಿವೃದ್ದಿ ಮತ್ತು ಸುರಕ್ಷಿತ ರಾಜ್ಯ ಮಾಡುವ ಏಕೈಕ ವ್ಯಕ್ತಿ ಪ್ರಧಾನಿ ನರೇಂದ್ರ ಮೋದಿ. ಸಿದ್ದರಾಮಯ್ಯ ಮತ್ತೆ ಅಧಿಕಾರಕ್ಕೆ ಬಂದರೇ ಪಿಎಫ್ಐ ನಿಷೇಧವನ್ನು ಹಿಂಡೆಯುತ್ತಾರೆ. ಕಾಂಗ್ರೆಸ್ ರಾಜ್ಯವನ್ನು ಎಟಿಎಂ ಮಾಡಲು ಹೊರಟಿದೆ. ಸಿದ್ದರಾಮಯ್ಯ ಅವರ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರ.
ಇದನ್ನೂ ಓದಿ: ಮುಸ್ಲಿಮರ 2ಬಿ ಮೀಸಲಾತಿ ರದ್ದು ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ: ಕರ್ನಾಟಕ ಬಿಜೆಪಿ ಸರ್ಕಾರಕ್ಕೆ ಮುಖಭಂಗ
ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡಿ. ವರುಣಾ ಜನರು ಸಿದ್ದರಾಮಯ್ಯಗೆ ಮತ ನೀಡಬೇಡಿ. ವಿ ಸೋಮಣ್ಣ ಅವರನ್ನು ಗೆಲ್ಲಿಸಿದರೆ, ವರುಣಾವನ್ನು ಇಡೀ ರಾಜ್ಯದಲ್ಲಿ ಮಾದರಿ ಕ್ಷೇತ್ರವನ್ನಾಗಿ ಮಾಡುತ್ತಾರೆ. ಕಮಲದ ಬಟನ್ ಮೇಲೆ ಒತ್ತಿ. ನರೇಂದ್ರ ಮೋದಿಯವರನ್ನು 2024ರಲ್ಲಿ ಮತ್ತೊಮ್ಮೆ ಪ್ರಧಾನಿ ಮಾಡಿ ಎಂದು ಕ್ಷೇತ್ರದ ಜನತೆಗೆ ಮನವಿ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


