ರಾಜಕೀಯ

ರಾಜ್ಯದಲ್ಲಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಲಿದೆ: ದೇವೇಗೌಡ ಭವಿಷ್ಯ

ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಬೆಂಬಲಿಸಿ ಮತ್ತೊಮ್ಮೆ ಎಚ್‌ಡಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವಂತೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ...

ರಾಜ್ಯದಲ್ಲಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಲಿದೆ: ದೇವೇಗೌಡ ಭವಿಷ್ಯ
ಮಾಜಿ ಪ್ರಧಾನಿ ದೇವೇಗೌಡ
Published On :

ಮಂಗಳೂರು: ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಬೆಂಬಲಿಸಿ ಮತ್ತೊಮ್ಮೆ ಎಚ್‌ಡಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವಂತೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಸೋಮವಾರ ಮತದಾರರಲ್ಲಿ ಮನವಿ ಮಾಡಿದ್ದಾರೆ.

ಮಂಗಳೂರು ಉತ್ತರ ಕ್ಷೇತ್ರದಲ್ಲಿ ಜೆಡಿಎಸ್ ಸಮಾವೇಶ ಉದ್ದೇಶಿಸಿ ಮಾತನಾಡಿದ ದೇವೇಗೌಡರು, ಕಾರ್ಯಕರ್ತರು ವಿಶ್ರಾಂತಿ ಪಡೆಯದೆ ಜೆಡಿಎಸ್ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದರು.

ಸಿಎಂ ಆಗಿ ಕೃಷಿ ಸಾಲ ಮನ್ನಾ ಮಾಡಿದ್ದು ಕುಮಾರಸ್ವಾಮಿ ಎಂದು ಮತದಾರರಿಗೆ ನೆನಪಿಸಿದ ಮಾಜಿ ಪ್ರಧಾನಿ, 2018ರಲ್ಲಿ ಸಮ್ಮಿಶ್ರ ಸರ್ಕಾರದ ಪ್ರಸ್ತಾಪ ಮುಂದಿಟ್ಟಿದ್ದೆ ಕಾಂಗ್ರೆಸ್. ಕಾಂಗ್ರೆಸ್ ನಾಯಕರಾದ ಅಶೋಕ್ ಗೆಹ್ಲೋಟ್ ಮತ್ತು ಗುಲಾಂ ನಬಿ ಆಜಾದ್ ಅವರು ನನ್ನನ್ನು ಭೇಟಿ ಮಾಡಿ ಕುಮಾರಸ್ವಾಮಿಯನ್ನು ಸಿಎಂ ಮಾಡಲು ಮುಂದಾದರು ಮತ್ತು ನಂತರ ಏನಾಯಿತು ಎಂದು ನಿಮಗೆ ತಿಳಿದಿದೆ. ನಾನು ಮೋದಿಯವರ ಹೇಳಿಕೆಗಳಿಗೆ ಆದ್ಯತೆ ನೀಡುವುದಿಲ್ಲ ಮತ್ತು ಟೀಕಿಸುವುದಿಲ್ಲ ಎಂದರು.

ಮೋದಿ ವಿರುದ್ಧ ನಾನು ಯಾವುದೇ ವೈಯಕ್ತಿಕ ಟೀಕೆ ಮಾಡುವುದಿಲ್ಲ. ಅವರಿಗೆ ಮಾತನಾಡುವ ಸ್ವಾತಂತ್ರ್ಯವಿದೆ. ಮೇ 13 ರಂದು ಕುಮಾರಸ್ವಾಮಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಪ್ರಧಾನಿ ವಿಶ್ವಾಸ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.