ರಾಜಕೀಯ

ಸೋಮಣ್ಣಗೆ 'ದೊಡ್ಡ ಹುದ್ದೆ' ಭರವಸೆ; ವರುಣಾದಲ್ಲಿ ಸಿದ್ದುಗೆ ಟಫ್ ಫೈಟ್ ಕೊಡಲು ಅಮಿತ್ ಶಾ ತಂತ್ರ!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪರ್ಧಿಸಿರುವ ವರುಣಾ ವಿಧಾನಸಭಾ ಕ್ಷೇತ್ರ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಕದನವಾಗಿ ಮಾರ್ಪಟ್ಟಿದೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಪ್ರಬಲ ಪೈಪೋಟಿ ನೀಡಲು ಹೊಸ...

ಸೋಮಣ್ಣಗೆ 'ದೊಡ್ಡ ಹುದ್ದೆ' ಭರವಸೆ; ವರುಣಾದಲ್ಲಿ ಸಿದ್ದುಗೆ ಟಫ್ ಫೈಟ್ ಕೊಡಲು ಅಮಿತ್ ಶಾ ತಂತ್ರ!
ಕೇಂದ್ರ ಸಚಿವ ಅಮಿತ್ ಶಾ
Published On :

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪರ್ಧಿಸಿರುವ ವರುಣಾ ವಿಧಾನಸಭಾ ಕ್ಷೇತ್ರ  ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಕದನವಾಗಿ ಮಾರ್ಪಟ್ಟಿದೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಪ್ರಬಲ ಪೈಪೋಟಿ ನೀಡಲು ಹೊಸ ತಂತ್ರ ರೂಪಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರನ್ನು ಗೆಲ್ಲಿಸಿದರೆ ಅವರಿಗೆ ಪ್ರಮುಖ ಸ್ಥಾನ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ಸಿದ್ದರಾಮಯ್ಯ ಅವರು ಮೇ 10 ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಹುದ್ದೆಯ ರೇಸ್ ನಲ್ಲಿ ಮುಂಚೂಣಿಯಲ್ಲಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ವಂತ ಕ್ಷೇತ್ರವೇ ಸುರಕ್ಷಿತ ಹಾಲಿ ಶಾಸಕ ತಮ್ಮ ಪುತ್ರ ಯತೀಂದ್ರ ಸಿದ್ದರಾಮಯ್ಯ ಬದಲಿಗೆ ತಾವೇ ಸ್ಪರ್ಧಿಸಿದ್ದಾರೆ. ಕ್ಷೇತ್ರದ ಒಟ್ಟು 2,34,533 ಮತದಾರರಿದ್ದು, ಈ ಪೈಕಿ ಸುಮಾರು 60,000 ಲಿಂಗಾಯತ ಮತದಾರರಿದ್ದಾರೆ. ಲಿಂಗಾಯತ ಸಮುದಾಯಕ್ಕೆ ಸೇರಿದ ಸೋಮಣ್ಣ ಅವರಿಗೆ ಅಮಿತ್ ಶಾ ನಿರ್ದಿಷ್ಟವಾಗಿ ಇದೇ ಹುದ್ದೆ ನೀಡಲಾಗುವುದು ಎಂದು ಹೇಳಿಲ್ಲ. ಆದರೆಸೋಮಣ್ಣ "ದೊಡ್ಡ ವ್ಯಕ್ತಿ" ಆಗುತ್ತಾರೆ ಎಂದು ಹೇಳಿದ್ದು, ಇದು ಕ್ಷೇತ್ರದ ಕೇಸರಿ ಪಕ್ಷದ ಪಡೆಯನ್ನು ಮತ್ತಷ್ಟು ಹುರಿದುಂಬಿಸಿದೆ.

ವರಣಾ ಮತದಾರರು ಸೋಮಣ್ಣ ಅವರನ್ನು ಆಯ್ಕೆ ಮಾಡಿದರೆ ಮುಂದಿನ ಮುಖ್ಯಮಂತ್ರಿ ಮಾಡಲಾಗವುದು ಎಂದು ಅಮಿತ್ ಶಾ ಪರಕ್ಷೋವಾಗಿ ಹೇಳಿದರೇ? ಎಂದು ರಾಜಕೀಯ ವಿಶ್ಲೇಷಕರು ಆಶ್ಚರ್ಯ ಪಡುತ್ತಿದ್ದಾರೆ.

ಸಿದ್ದುಗೆ ಹಿರಿಯರ ಬೆಂಬಲ, ಯುವಕರು ಬಿಜೆಪಿಗೆ
ವರುಣಾ ಕ್ಷೇತ್ರದಲ್ಲಿ ಲಿಂಗಾಯತರು ಒಗ್ಗಟ್ಟಾಗಿಲ್ಲ ಮತ್ತು ಬಿಜೆಪಿ ಅಭ್ಯರ್ಥಿಗೆ ಮತ ಹಾಕದಿರಬಹುದು ಎಂದು ತಜ್ಞರು ವಿಶ್ಲೇಷಿಸಿದ್ದಾರೆ. ಸಮುದಾಯದ ಹಿರಿಯರು ಈಗಲೂ ಸಹ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿದರೆ, ಯುವಕರು ಬಿಜೆಪಿಯನ್ನು ಬೆಂಬಲಿಸುತ್ತಾರೆ ಎಂದು ಸ್ಥಳೀಯರು ಹೇಳಿದ್ದಾರೆ.

ಸೋಮಣ್ಣ ಅವರು ವರುಣಾದಲ್ಲಿ ನಿತ್ಯ ಕಾಣಿಸಿಕೊಳ್ಳುತ್ತಿದ್ದರೆ, ಕಾಂಗ್ರೆಸ್‌ನ ಸ್ಟಾರ್ ಪ್ರಚಾರಕರಲ್ಲಿ ಒಬ್ಬರಾಗಿರುವ ಸಿದ್ದರಾಮಯ್ಯ ಅವರು ಮಂಗಳವಾರ ಕೊಪ್ಪಳ, ಗಂಗಾವತಿ, ಬಾಗಲಕೋಟೆ, ಬಾದಾಮಿ, ಕುಂದಗೋಳ, ಧಾರವಾಡ ಹಾಗೂ ಬುಧವಾರ ಬೆಂಗಳೂರಿನ ಬಸವನಗುಡಿ ಮತ್ತಿತರ ಪ್ರದೇಶಗಳಲ್ಲಿ ಬಿರುಸಿನ ಪ್ರಚಾರ ನಡೆಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.