ಬಿಜೆಪಿಗೆ ಮರಳುವುದಿಲ್ಲ, ಕಾಂಗ್ರೆಸ್‌ನಲ್ಲೇ ಮುಂದುವರಿದು ಪಕ್ಷದ ಬಲವರ್ಧನೆಗೆ ಶ್ರಮಿಸುತ್ತೇನೆ: ಜಗದೀಶ್ ಶೆಟ್ಟರ್
ಕಾಂಗ್ರೆಸ್‌ನಲ್ಲೇ ಮುಂದುವರಿದು ಪಕ್ಷದ ಬಲವರ್ಧನೆಗೆ ಶ್ರಮಿಸುವುದಾಗಿ ಮಾಜಿ ಸಿಎಂ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಜಗದೀಶ್ ಶೆಟ್ಟರ್(Jagadish Shettar) ಹೇಳಿದ್ದಾರೆ.

ಬೆಂಗಳೂರು: ಕಾಂಗ್ರೆಸ್‌ನಲ್ಲೇ ಮುಂದುವರಿದು ಪಕ್ಷದ ಬಲವರ್ಧನೆಗೆ ಶ್ರಮಿಸುವುದಾಗಿ ಮಾಜಿ ಸಿಎಂ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಜಗದೀಶ್ ಶೆಟ್ಟರ್(Jagadish Shettar) ಹೇಳಿದ್ದಾರೆ.
ಬಿಜೆಪಿಗೆ ಹಿಂತಿರುಗುವ ಪ್ರಶ್ನೆಯೇ ಇಲ್ಲ, ನಾನು ಕಾಂಗ್ರೆಸ್‌ನಲ್ಲಿಯೇ ಇದ್ದು ಪಕ್ಷವನ್ನು ಬಲಪಡಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಬೆಂಗಳೂರಿನಲ್ಲಿ ನಿನ್ನೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೇಂದ್ರದಲ್ಲಿ ಬಿಜೆಪಿಗೆ ಪರ್ಯಾಯವನ್ನು ನೀಡಲು ಕಾಂಗ್ರೆಸ್ ಸಮರ್ಥವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್‌ಗೆ ಪೂರ್ಣ ಬಹುಮತ ಬಂದಿರುವುದು ಜನತೆಗೆ ಖುಷಿ ತಂದಿದೆ. ಅದೃಷ್ಟವಶಾತ್ ನಮ್ಮಲ್ಲಿ ಸ್ಥಿರ ಸರಕಾರವಿದ್ದು, ಜನರು ಇದರಿಂದ ಸಂತಸಗೊಂಡಿದ್ದಾರೆ ಎಂದ ಅವರು, ಸರಕಾರ ರಚನೆ ಪ್ರಕ್ರಿಯೆ ಸುಗಮವಾಗಲಿ ಎಂದು ಆಶಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


