ರಾಜಕೀಯ

ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಬೇಕೆಂದು ಜನ ಬಯಸುತ್ತಿದ್ದಾರೆ: ಸಚಿವ ಕೆ.ಎನ್. ರಾಜಣ್ಣ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಆಡಳಿತವನ್ನು ಶ್ಲಾಘಿಸಿದ ಸಹಕಾರ ಸಚಿವ ಕೆ.ಎನ್.ರಾಜಣ್ಣ, ಕರ್ನಾಟಕದ ಜನ ಮತ್ತು ಬಹುತೇಕ ಶಾಸಕರು ಸಿದ್ದರಾಮಯ್ಯ ಅವರು ಐದು ವರ್ಷಗಳ ಕಾಲ ಸಿಎಂ ಆಗಬೇಕೆಂದು...

ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಬೇಕೆಂದು ಜನ ಬಯಸುತ್ತಿದ್ದಾರೆ: ಸಚಿವ ಕೆ.ಎನ್. ರಾಜಣ್ಣ
ಕೆಎನ್ ರಾಜಣ್ಣ
Published On :

ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಆಡಳಿತವನ್ನು ಶ್ಲಾಘಿಸಿದ ಸಹಕಾರ ಸಚಿವ ಕೆ.ಎನ್.ರಾಜಣ್ಣ, ಕರ್ನಾಟಕದ ಜನ ಮತ್ತು ಬಹುತೇಕ ಶಾಸಕರು ಸಿದ್ದರಾಮಯ್ಯ ಅವರು ಐದು ವರ್ಷಗಳ ಕಾಲ ಸಿಎಂ ಆಗಬೇಕೆಂದು ಬಯಸುತ್ತಿರುವುದಾಗಿ ಬುಧವಾರ ಹೇಳಿದ್ದಾರೆ.

ಕನ್ನಡ ರಾಜ್ಯೊತ್ಸವದ ಸಂದರ್ಭದಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ರಾಜಣ್ಣ, ಪಕ್ಷದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹತ್ತಕ್ಕೂ ಹೆಚ್ಚು ನಾಯಕರು ಸಿಎಂ ಹುದ್ದೆ ಅಲಂಕರಿಸುವ ಸಾಮರ್ಥ್ಯ ಹೊಂದಿದ್ದಾರೆ. ಆದರೆ, ಅಂತಹ ನಿರ್ಧಾರಗಳನ್ನು ಕಾಂಗ್ರೆಸ್ ಹೈಕಮಾಂಡ್‌ ತೆಗೆದುಕೊಳ್ಳುತ್ತದೆ ಎಂದರು.

ಹಾಸನ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ರಾಜಣ್ಣ ಅವರು, ಶಿವಕುಮಾರ್‌ ಅವರಿಗೆ ಸಿಎಂ ಸ್ಥಾನ ನೀಡಬೇಕು ಎನ್ನುವುದರಲ್ಲಿ ತಪ್ಪೇನಿದೆ. ಎಲ್ಲ ನಾಯಕರಿಗೂ ಈ ವಿಚಾರದಲ್ಲಿ ಅಭಿಪ್ರಾಯ ವ್ಯಕ್ತಪಡಿಸುವ ಸ್ವಾತಂತ್ರ್ಯ ಇದೆ ಎಂದರು.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಇತ್ತೀಚಿನ ಹೇಳಿಕೆಗಳನ್ನು ಪ್ರಸ್ತಾಪಿಸಿದ ಸಹಕಾರ ಸಚಿವರು, ಸರ್ಕಾರದ ಭವಿಷ್ಯ ಹೇಳಲು ಬಿಜೆಪಿ ನಾಯಕರು ಯಾವಾಗ ಜ್ಯೋತಿಷಿಗಳಾದರು ಎಂದು ವ್ಯಂಗ್ಯವಾಡಿದರು. ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಅನ್ನು ಟೀಕಿಸಲು ಯಾವುದೇ ನೈತಿಕ ಹಕ್ಕಿಲ್ಲ. ಕಾಂಗ್ರೆಸ್ ಸರ್ಕಾರ ತನ್ನ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.