ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸದೆ ಬರ ಸಮಸ್ಯೆಗೆ ಪರಿಹಾರ ಹುಡುಕಿ: ನಳಿನ್ ಕುಮಾರ್ ಕಟೀಲ್
ಬರ ಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಕೇಂದ್ರದ ಹಣಕ್ಕಾಗಿ ಕಾಯುವ ಬದಲು ರಾಜ್ಯ ಸರ್ಕಾರ ತನ್ನ ಖಜಾನೆಯಿಂದಲೇ ರೈತರಿಗೆ ಬೆಳೆ ನಷ್ಟ ಪರಿಹಾರ ವಿತರಿಸಲು ಮುಂದಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಹುಬ್ಬಳ್ಳಿ: ಬರ ಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಕೇಂದ್ರದ ಹಣಕ್ಕಾಗಿ ಕಾಯುವ ಬದಲು ರಾಜ್ಯ ಸರ್ಕಾರ ತನ್ನ ಖಜಾನೆಯಿಂದಲೇ ರೈತರಿಗೆ ಬೆಳೆ ನಷ್ಟ ಪರಿಹಾರ ವಿತರಿಸಲು ಮುಂದಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ರಾಜ್ಯ ಸರ್ಕಾರ ನಷ್ಟದ ಸಮರ್ಪಕ ಅಂದಾಜು ನೀಡದ ಹೊರತು ಕೇಂದ್ರದಿಂದ ಅನುದಾನ ಬಿಡುಗಡೆ ಮಾಡುವ ಸಾಧ್ಯತೆ ಕಡಿಮೆ. ಕೇಂದ್ರ ತಂಡಗಳು ಬರ ಪರಿಸ್ಥಿತಿ ಅಧ್ಯಯನ ನಡೆಸಿದ್ದು, ರಾಜ್ಯ ಸರ್ಕಾರವೂ ವರದಿ ಕಳುಹಿಸಬೇಕು. ಇವೆರಡರ ವರದಿಗಳನ್ನು ಹೋಲಿಸಿ, ಎನ್ಡಿಆರ್ಎಫ್ ಮಾರ್ಗಸೂಚಿಗಳ ಪ್ರಕಾರ ಕೇಂದ್ರವು ಹಣವನ್ನು ಬಿಡುಗಡೆ ಮಾಡುತ್ತದೆ ಎಂದು ಅವರು ಹೇಳಿದರು.
ಸಿದ್ದರಾಮಯ್ಯ ಸರ್ಕಾರ ರೈತ ಮತ್ತು ಬಡವರ ವಿರೋಧಿ ಎಂದು ಬಣ್ಣಿಸಿದ ಅವರು, ಕಾಂಗ್ರೆಸ್ ನಾಯಕರು ತಮ್ಮ ತಮ್ಮಲ್ಲೇ ಹೊಡೆದಾಡಿಕೊಳ್ಳುತ್ತಿದ್ದಾರೆ. ಬರ ಸಮಸ್ಯೆಗೆ ಪರಿಹಾರ ಹುಡುಕುವ ಬದಲು ಮುಂದಿನ ಸಿಎಂ ಯಾರು ಎಂಬ ಚರ್ಚೆಯಲ್ಲಿ ತೊಡಗಿದ್ದಾರೆ. ಸರ್ಕಾರ ಅಧಿಕಾರಕ್ಕೆ ಬಂದ ಆರು ತಿಂಗಳಲ್ಲೇ ಜನ ಬೇಸತ್ತಿದ್ದಾರೆ ಎಂದರು.
ರಾಜ್ಯದಲ್ಲಿ ಬರದ ಛಾಯೆ ಹಾಗೂ ವಿದ್ಯುತ್ ಕ್ಷಾಮ ತಲೆದೂರಿದು ರಾಜ್ಯ ಸರ್ಕಾರ ಆಂತರಿಕ ಕಚ್ಚಾಟಕ್ಕೆ ಸಿಲುಕಿ ಜನರ ಸಮಸ್ಯೆಯನ್ನು ಬರದ ಸಂಕಷ್ಟ ಎರಡನ್ನು ಮರೆತಿದೆ. ಮುಖ್ಯಮಂತ್ರಿ, ಕಾಂಗ್ರೆಸ್ ಶಾಸಕರು ಸಚಿವರು ಕೇಂದ್ರದ ಮೇಲೆ ಗೂಬೆಕೂರಿಸುವ ಕೆಲಸ ಮಾಡುತ್ತಿದ್ದಾರೆ. ಕೇಂದ್ರ ಸರಕಾರ ತತ್ ಕ್ಷಣಕ್ಕೆ ಬರ ಅಧ್ಯಯನ ತಂಡ ಕಳಿಸಿಕೊಟ್ಟಿದೆ. ರಾಜ್ಯ ಸರಕಾರ ಬರದಿಂದ ಏನೆಲ್ಲಾ ಹಾನಿಯಾಗಿದೆ ಎಷ್ಟು ವೆಚ್ಚ ತಗಲಲ್ಲಿದೆ ಎಂಬುದರ ಪ್ರಸ್ತಾವನೆಯನ್ನೇ ಇದುವರೆಗೂ ಕೇಂದ್ರಕ್ಕೆ ಸಲ್ಲಿಸಿಲ್ಲ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಆಂತರಿಕ ಭಿನ್ನಾಭಿಪ್ರಾಯಗಳಿಂದಾಗಿ ಸರ್ಕಾರ ಪತನವಾಗಲಿದೆ ಎಂದರು. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರನ್ನಾಗಿ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು. ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


