ರಾಜಕೀಯ

ಬಿಜೆಪಿಯ ದೊಡ್ಡ ದೊಡ್ಡ ನಾಯಕರು ಖಾದರ್ ಮುಂದೆ ಕೈಮುಗಿದು ನಿಲ್ತಾರೆ; ಹೀಗೆ ಮಾಡುವ ತಾಕತ್ತು ಇರೋದು ಕಾಂಗ್ರೆಸ್ ಗೆ ಮಾತ್ರ!

ಮುಸ್ಲಿಮರಲ್ಲಿ 17 ಮಂದಿಗೆ ಟಿಕೆಟ್ ನೀಡಲಾಗಿತ್ತು. ಈ ಪೈಕಿ 7 ಮಂದಿ ಶಾಸಕರಾಗಿ ಆಯ್ಕೆಯಾಗಿದ್ದೇವೆ. ಅದರಲ್ಲಿ 5 ಜನರಿಗೆ ಕಾಂಗ್ರೆಸ್ ಅಧಿಕಾರ ನೀಡಿದೆ. ನನಗೆ 3 ಖಾತೆ ನೀಡಿ ಮಂತ್ರಿ ಮಾಡಿದೆ. ರಹೀಂ ಖಾನ್ ಮಂತ್ರಿಯಾಗಿದ್ದಾರೆ.

ಬಿಜೆಪಿಯ ದೊಡ್ಡ ದೊಡ್ಡ ನಾಯಕರು ಖಾದರ್ ಮುಂದೆ ಕೈಮುಗಿದು ನಿಲ್ತಾರೆ; ಹೀಗೆ ಮಾಡುವ ತಾಕತ್ತು ಇರೋದು ಕಾಂಗ್ರೆಸ್ ಗೆ ಮಾತ್ರ!
ಜಮೀರ್ ಅಹ್ಮದ್ ಖಾನ್
Published On :

ಬೆಂಗಳೂರು:  ಈಗ ಬಿಜೆಪಿಯ  ದೊಡ್ಡ ದೊಡ್ಡ ನಾಯಕರು ಮುಸ್ಲಿಂ ಸ್ಪೀಕರ್ ಯುಟಿ ಖಾದರ್‌ಗೆ  ಕೈಮುಗಿದು  ನಮಸ್ಕರಿಸುತ್ತಾರೆ ಎಂದು ಹೇಳುವ ಮೂಲಕ  ಸಚಿವ ಜಮೀರ್ ಅಹ್ಮದ್ ಖಾನ್ ವಿವಾದವನ್ನು  ಮೈಮೇಲೆ ಎಳೆದುಕೊಂಡಿದ್ದಾರೆ.

ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವರು ತೆಲಂಗಾಣ ವಿಧಾನಸಭಾ ಚುನಾವಣೆಯ ಅಖಾಡಕ್ಕಿಳಿದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಪರ ಭರ್ಜರಿ ಕ್ಯಾಂಪೇನ್ ಮಾಡುತ್ತಿರುವ ಜಮೀರ್ ಅಹಮ್ಮದ್ ಖಾನ್, ಹೈದರಾಬಾದ್​​ನಲ್ಲಿ ನಡೆದ ಚುನಾವಣಾ ಪ್ರಚಾರದ ವೇಳೆ ರಾಜ್ಯ ಕಾಂಗ್ರೆಸ್​​ನಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಿರುವ ಸ್ಥಾನಮಾನಗಳನ್ನು ಒತ್ತಿ ಒತ್ತಿ ಹೇಳಿದ್ದಾರೆ.

ಮುಸ್ಲಿಮರಲ್ಲಿ 17 ಮಂದಿಗೆ ಟಿಕೆಟ್ ನೀಡಲಾಗಿತ್ತು. ಈ ಪೈಕಿ 7 ಮಂದಿ ಶಾಸಕರಾಗಿ ಆಯ್ಕೆಯಾಗಿದ್ದೇವೆ. ಅದರಲ್ಲಿ 5 ಜನರಿಗೆ ಕಾಂಗ್ರೆಸ್ ಅಧಿಕಾರ ನೀಡಿದೆ. ನನಗೆ 3 ಖಾತೆ ನೀಡಿ ಮಂತ್ರಿ ಮಾಡಿದೆ. ರಹೀಂ ಖಾನ್ ಮಂತ್ರಿಯಾಗಿದ್ದಾರೆ. ಸಲೀಂ ಅಹ್ಮದ್ ವಿಪ್ ಆಗಿದ್ದಾರೆ. ನಸೀರ್ ಅಹ್ಮದ್ ಸಿಎಂ ಅವರ ರಾಜಕೀಯ ಕಾರ್ಯದರ್ಶಿಯಾಗಿದ್ದಾರೆ ಎಂದು ಹೇಳಿದರು.

ರಾಜಕೀಯ ಇತಿಹಾಸದಲ್ಲಿ ಮುಸ್ಲಿಂ ವ್ಯಕ್ತಿಯನ್ನು ಸ್ಪೀಕರ್ ಮಾಡಿರಲಿಲ್ಲ. ಈಗ ಮೊದಲ ಬಾರಿಗೆ ಮುಸ್ಲಿಂ ವ್ಯಕ್ತಿಯನ್ನು ಸ್ಪೀಕರ್ ಮಾಡಿದ್ದು ಕಾಂಗ್ರೆಸ್ ಪಕ್ಷ. ಈಗ ದೊಡ್ಡ ದೊಡ್ಡ ಬಿಜೆಪಿ ನಾಯಕರು ಕೂಡಾ ಸ್ಪೀಕರ್ ಯುಟಿ ಖಾದರ್ ಅವರಿಗೆ ನಮಸ್ಕಾರ ಎನ್ನುತ್ತಾರೆ. ಇದನ್ನು ಮಾಡಿದ್ದು ಯಾರು? ಕಾಂಗ್ರೆಸ್ ಪಕ್ಷ ಎಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.