ಸಿದ್ದರಾಮಯ್ಯ ಮತ್ತು ಪರಮೇಶ್ವರ್ ಕುಮ್ಮಕ್ಕಿನಿಂದಲೇ ಶಿವಮೊಗ್ಗ ಗಲಭೆ ನಡೆದಿದೆ: ಶೋಭಾ ಕರಂದ್ಲಾಜೆ ಆರೋಪ
ಕಳೆದ ಭಾನುವಾರ ಸಂಜೆ ಶುವಮೊಗ್ಗ ನಗರದ ಶಾಂತಿನಗರ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ಹಲ್ಲು ತೂರಾಟ, ಗಲಭೆ ಪ್ರಕರಣ ಸಂಬಂಧ ವಿಪಕ್ಷ ಬಿಜೆಪಿ ಆಡಳಿತ ಕಾಂಗ್ರೆಸ್ ಸರ್ಕಾರದ ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಾ ಬಂದಿದೆ.

ಚಾಮರಾಜನಗರ: ಕಳೆದ ಭಾನುವಾರ ಸಂಜೆ ಶುವಮೊಗ್ಗ ನಗರದ ಶಾಂತಿನಗರ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ಹಲ್ಲು ತೂರಾಟ, ಗಲಭೆ ಪ್ರಕರಣ ಸಂಬಂಧ ವಿಪಕ್ಷ ಬಿಜೆಪಿ ಆಡಳಿತ ಕಾಂಗ್ರೆಸ್ ಸರ್ಕಾರದ ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಾ ಬಂದಿದೆ.
ಇದೊಂದು ಸಣ್ಣ ಗಲಭೆ ಎಂದು ಹೇಳಿ ತೀವ್ರ ಟೀಕೆಗೆ ಗುರಿಯಾಗಿರುವ ಗೃಹಸಚಿವ ಪರಮೇಶ್ವರ್ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಟೀಕೆಯ ಸುರಿಮಳೆಗೈದಿದ್ದಾರೆ, ಸಿದ್ದರಾಮಯ್ಯ ಮತ್ತು ಪರಮೇಶ್ವರ್ ಕುಮ್ಮಕ್ಕಿನಿಂದಲೇ ಈ ಘಟನೆ ನಡೆದಿದೆ ಎಂದು ಆರೋಪಿಸಿದ್ದಾರೆ.
ಚಾಮರಾಜನಗರದ ಹರಳುಕೋಟೆ ಆಂಜನೇಯನ ದರ್ಶನ ಪಡೆದ ಬಳಿಕ ಮಾತನಾಡಿದ ಅವರು, ಈದ್ ಮಿಲಾದ್ ಹಬ್ಬದ ದಿನ ಬಿಟ್ಟು ಬೇರೆ ದಿನ ಆಚರಿಸಲು ಕಾರಣವೇನು? ಈದ್ ಮಿಲಾದ್ ಅಂದರೆ ಒಂದು ದಿನ ಆಚರಿಸುವ ಹಬ್ಬ ಅಲ್ವಾ ಎಂದು ಕೇಳಿದರು. ದಂಗೆ ಎಬ್ಬಿಸಲೆಂದೇ ಒಂದು ದಿನ ಬಿಟ್ಟು ಆಚರಿಸಲಾಗಿದೆ. ಶಿವಮೊಗ್ಗ, ಕೋಲಾರದಲ್ಲಿ ತಲ್ವಾರ್ ಹಿಡಿದು ಮೆರವಣಿಗೆ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಅತಿ ದೊಡ್ಡ ಖಡ್ಗದ ಮೆರವಣಿಗೆ ಮಾಡಲಾಗಿದೆ, ಇದರ ಅರ್ಥವೇನು, ಔರಂಗಜೇಬನ ದೊಡ್ಡ ಫೋಟೋ ಹಾಕಿ ಅಖಂಡ ಭಾರತವನ್ನ ಆಳಿದ ಮಹಾರಾಜ ಎಂಬ ಬರಹಗಳನ್ನ ಬರೆದಿದ್ದಾರೆ. ನಿಮ್ಮ ಆದರ್ಶಪುರುಷ ಮೊಹಮ್ಮದ್ ಪೈಂಗರ್ ಹಾಗೂ ಅಬ್ಧುಲ್ ಕಲಾಮ್ ಆಗಿರಬೇಕು. ಹಿಂದೂಗಳ ರಕ್ತ ಹರಿಸಿದ ಹಿಂದೂಗಳ ಮಾರಣಹೋಮ ನಡೆಸಿದ ಟಿಪ್ಪು ಹಾಗೂ ಔರಂಗಬೇಜ್ ಹೇಗಾಗುತ್ತಾರೆ ಎಂದು ಕೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


