ಜಾತಿ ಗಣತಿ: ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಎಚ್ ಡಿಕೆ!
ಬಿಹಾರದಲ್ಲಿ ಜಾತಿ ಗಣತಿ ವರದಿ ಬಿಡುಗಡೆ ಬೆನ್ನಲ್ಲೇ, ರಾಜ್ಯದಲ್ಲಿಯೂ ಜಾತಿ ಗಣತಿ ವರದಿ ಬಿಡುಗಡೆಗೆ ಒತ್ತಾಯ ಕೇಳಿಬಂದಿರುವಂತೆಯೇ, ಈ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ರಾಮನಗರ: ಬಿಹಾರದಲ್ಲಿ ಜಾತಿ ಗಣತಿ ವರದಿ ಬಿಡುಗಡೆ ಬೆನ್ನಲ್ಲೇ, ರಾಜ್ಯದಲ್ಲಿಯೂ ಜಾತಿ ಗಣತಿ ವರದಿ ಬಿಡುಗಡೆಗೆ ಒತ್ತಾಯ ಕೇಳಿಬಂದಿರುವಂತೆಯೇ, ಈ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಬಿಡದಿಯ ಕೇತಗಾನಹಳ್ಳಿಯ ಭಾನುವಾರ ನಡೆದ ರಾಮನಗರ ಜಿಲ್ಲೆಯ ಜೆಡಿಎಸ್ ಮುಖಂಡರ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಜಾತಿ ಗಣತಿ ವರದಿ ವಿಚಾರದಲ್ಲಿ ಸರ್ಕಾರ ರಾಜಕೀಯ ಮಾಡುತ್ತಿದೆ. ಸಮ್ಮಿಶ್ರ ಸರ್ಕಾರ ಅವಧಿಯಲ್ಲಿ ಕಾಂತರಾಜು ವರದಿಯನ್ನು ಕುಮಾರಸ್ವಾಮಿ ಒಪ್ಪಲಿಲ್ಲ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಆದರೆ, ಸದಸ್ಯ ಕಾರ್ಯದರ್ಶಿ ಸಹಿ ಇಲ್ಲದೆ ಆ ವರದಿಯನ್ನು ಸ್ವೀಕಾರ ಮಾಡುವುದು ಹೇಗೆ? ಎನ್ನುವ ಅರಿವು ಸಿದ್ದರಾಮಯ್ಯ ಅವರಿಗೆ ಇಲ್ಲ ಎಂದು ತಿರುಗೇಟು ನೀಡಿದರು.
ಸಮ್ಮಿಶ್ರ ಸರ್ಕಾರ ಸಂದರ್ಭದಲ್ಲಿ ಸಮನ್ವಯ ಸಮಿತಿ ಅಧ್ಯಕ್ಷರಾಗಿ ಒಮ್ಮೆಯಾದರೂ ಕಾಂತರಾಜು ವರದಿ ಬಗ್ಗೆ ಸಿದ್ದರಾಮಯ್ಯ ಚರ್ಚೆ ಮಾಡಿಲ್ಲ. 14 ತಿಂಗಳಲ್ಲಿ ಯಾವತ್ತಾದ್ರು ಈ ಬಗ್ಗೆ ಮಾತಾಡುತ್ತಿದ್ರಾ? ಜಾತಿಗಣತಿ ಮುಖ್ಯವಲ್ಲ, ಎಲ್ಲ ಜಾತಿಯಲ್ಲಿರುವ ಬಡವರಿಗೆ ಅನುಕೂಲ ಮಾಡಿಕೊಡಬೇಕು ಎಂದು ಕಿಡಿಕಾರಿದರು.
ಜಾತ್ಯತೀತ ಎನ್ನುವ ಕಾಂಗ್ರೆಸ್ ನವರು ಜಾತಿ ಗಣತಿ ವರದಿಯಿಂದ ಜಾತಿ ಜಾತಿ ನಡುವೆ ವಿಷ ಬೀಜ ಬಿತ್ತಲು ಹೊರಟಿದ್ದಾರೆ.ಇದರಿಂದ ಏನು ಸಾಧನೆ ಮಾಡುತ್ತಾರೆ? ಸಮಾಜ ಹೊಡೆಯಲು ಮಾಡುತ್ತಾರೋ? ಸಮಾಜದಲ್ಲಿ ವಿಶ್ವಾಸಕ್ಕೆ ಧಕ್ಕೆ ತರಲು ಮಾಡುತ್ತಾರೋ ? ಒಗ್ಗಟ್ಟು ತರಲು ಮಾಡುತ್ತೀರೋ ಮೊದಲು ಅದನ್ನ ತಿಳಿಸಿ ಎಂದು ವಾಗ್ದಾಳಿ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


