ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಬಿಜೆಪಿಯ ಇಬ್ಬರು ಮಾಜಿ ಶಾಸಕರು, ಕಾಂಗ್ರೆಸ್ ಸೇರುವ ಇಂಗಿತ!
ರಾಜ್ಯ ರಾಜಕಾರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದ್ದು, ಬಿಜೆಪಿಯ ಹಾಲಿ ಮತ್ತು ಮಾಜಿ ಶಾಸಕರು ಕಾಂಗ್ರೆಸ್‌ನತ್ತ ಮುಖಮಾಡುತ್ತಿದ್ದಾರೆ. ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರುವುದಾಗಿ ಬಹಿರಂಗವಾಗಿ ಘೋಷಿಸಿದ್ದಾರೆ. ಇದರೊಂದಿಗೆ ಇನ್ನಿಬ್ಬರು ಮಾಜಿ ಶಾಸಕರು ಕೂಡ ಕಾಂಗ್ರೆಸ್‌ಗೆ ಸೇರಲು ಮುಂದಾಗಿದ್ದಾರೆ ಎನ್ನಲಾಗಿದೆ.

ಬೆಂಗಳೂರು: ರಾಜ್ಯ ರಾಜಕಾರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದ್ದು, ಬಿಜೆಪಿಯ ಹಾಲಿ ಮತ್ತು ಮಾಜಿ ಶಾಸಕರು ಕಾಂಗ್ರೆಸ್‌ನತ್ತ ಮುಖಮಾಡುತ್ತಿದ್ದಾರೆ. ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರುವುದಾಗಿ ಬಹಿರಂಗವಾಗಿ ಘೋಷಿಸಿದ್ದಾರೆ. ಇದರೊಂದಿಗೆ ಇನ್ನಿಬ್ಬರು ಮಾಜಿ ಶಾಸಕರು ಕೂಡ ಕಾಂಗ್ರೆಸ್‌ಗೆ ಸೇರಲು ಮುಂದಾಗಿದ್ದಾರೆ ಎನ್ನಲಾಗಿದೆ.
ಮುಂಬರುವ ಲೋಕಸಭಾ ಚುನಾವಣೆಗೆ ಜೆಡಿಎಸ್ ಜೊತೆಗೆ ಬಿಜೆಪಿ ಮೈತ್ರಿ ಘೋಷಿಸಿದ ಬಳಿಕ ಹಲವಾರು ಬಿಜೆಪಿ ಮುಖಂಡರು ಅಸಮಾಧಾನಗೊಂಡಿರುವುದಾಗಿ ಮೂಲಗಳು ತಿಳಿಸಿವೆ.
ಇದೀಗ ಬಿಜೆಪಿಯ ಮಾಜಿ ಶಾಸಕರಾದ ಎಂಪಿ ಕುಮಾರಸ್ವಾಮಿ ಮತ್ತು ರಾಮಪ್ಪ ಲಮಾಣಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಬುಧವಾರ ಭೇಟಿ ಮಾಡಿ ಕಾಂಗ್ರೆಸ್ ಸೇರುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ.
ಭಾರತೀಯ ಜನತಾ ಪಕ್ಷದ (ಬಿಜೆಪಿ) ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಅಕ್ಟೋಬರ್ 20 ರಂದು ಕಾಂಗ್ರೆಸ್ ಸೇರುವ ಇಚ್ಛೆಯನ್ನು ಘೋಷಿಸಿದ ಹಿನ್ನೆಲೆಯಲ್ಲಿ ಈ ಬೆಳವಣಿಗೆಯಾಗಿದೆ.
ಇದನ್ನೂ ಓದಿ: ಗೊಲ್ಲ ಸಮುದಾಯಕ್ಕೆ ಬಿಜೆಪಿ ನೀಡಿದ ಭರವಸೆ ಈಡೇರಿಸಿಲ್ಲ: ಕಾಂಗ್ರೆಸ್ ಸೇರಲು ಪೂರ್ಣಿಮಾ ಶ್ರೀನಿವಾಸ್ ಸಜ್ಜು!
ಇತ್ತೀಚೆಗಷ್ಟೇ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ಕೂಡ ಬಿಜೆಪಿ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದು, ಅವರು ಕಾಂಗ್ರೆಸ್ ಸೇರುವ ಸೂಚನೆ ಇದೆ ಎಂದು ಮೂಲಗಳು ತಿಳಿಸಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


